ಅಡ್ವಾನ್ಸ್ ಬುಕಿಂಗ್​ನಲ್ಲಿ ‘ಪುಷ್ಪ 2’ ದಾಖಲೆ; ಬಿಡುಗಡೆಗೂ ಮೊದಲೇ 100 ಕೋಟಿ ಕ್ಲಬ್ ಸೇರಿದ ಸಿನಿಮಾ

|

Updated on: Dec 04, 2024 | 12:00 PM

ಕೆಲವು ವರದಿಗಳ ಪ್ರಕಾರ ಮೊದಲ ದಿನ ಈ ಚಿತ್ರದ ಗಳಿಕೆ 300 ಕೋಟಿ ರೂಪಾಯಿ ದಾಟಲಿದೆ ಎನ್ನಲಾಗುತ್ತಿದೆ. ಹೀಗಾದಲ್ಲಿ ಮೊದಲ ನಾಲ್ಕು ದಿನದಲ್ಲೇ ಸಿನಿಮಾದ ಕಲೆಕ್ಷನ್ ಸಾವಿರ ಕೋಟಿ ರೂಪಾಯಿ ಸಮೀಪಿಸಿದರೂ ಅಚ್ಚರಿ ಏನಿಲ್ಲ.

ಅಡ್ವಾನ್ಸ್ ಬುಕಿಂಗ್​ನಲ್ಲಿ ‘ಪುಷ್ಪ 2’ ದಾಖಲೆ; ಬಿಡುಗಡೆಗೂ ಮೊದಲೇ 100 ಕೋಟಿ ಕ್ಲಬ್ ಸೇರಿದ ಸಿನಿಮಾ
ಅಲ್ಲು ಅರ್ಜುನ್
Follow us on

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ ಮೊದಲಾದವರು ನಟಿಸಿರೋ ‘ಪುಷ್ಪ 2’ ಸಿನಿಮಾ ಡಿಸೆಂಬರ್ 5ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ಮೊದಲ ದಿನ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಲಿದೆ ಎಂಬ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಮೂಡಿದೆ. ಇದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಈ ಸಿನಿಮಾ ಸುಮಾರು 12 ಸಾವಿರ ಸ್ಕ್ರೀನ್​ಗಳಲ್ಲಿ ಪ್ರಸಾರ ಕಾಣುತ್ತಿದೆ. ಈ ಚಿತ್ರ ಹಲವು ಫಾರ್ಮ್ಯಾಟ್​ಗಳಲ್ಲಿ ರಿಲೀಸ್ ಆಗುತ್ತಿದೆ. ಈ ಚಿತ್ರದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದ್ದು ದಾಖಲೆ ಬರೆದಿದೆ.

ಅಲ್ಲು ಅರ್ಜುನ್ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈ ಪೈಕಿ ‘ಪುಷ್ಪ 2’ ಚಿತ್ರದಷ್ಟು ಹೈಪ್ ಅವರ ನಟನೆಯ ಯಾವ ಚಿತ್ರಕ್ಕೂ ಸಿಕ್ಕಿಲ್ಲ ಅನ್ನೋದು ವಿಶೇಷ. ‘ಪುಷ್ಪ 2’ ಚಿತ್ರದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಕೆಲ ದಿನಗಳು ಕಳೆದಿವೆ. ಈ ಚಿತ್ರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿ ಹರಿದು ಬಂದಿದೆ. ಹೀಗಾಗಿ, ಮೊದಲ ದಿನ ಈ ಚಿತ್ರ ಎಷ್ಟು ಕೋಟಿ ಗಳಿಕೆ ಮಾಡಬಹುದು ಎನ್ನುವ ಕುತೂಹಲ ಜೋರಾಗಿದೆ.

ಕೆಲವು ವರದಿಗಳ ಪ್ರಕಾರ ಮೊದಲ ದಿನ ಈ ಚಿತ್ರದ ಗಳಿಕೆ 300 ಕೋಟಿ ರೂಪಾಯಿ ದಾಟಲಿದೆ ಎನ್ನಲಾಗುತ್ತಿದೆ. ಹೀಗಾದಲ್ಲಿ ಮೊದಲ ನಾಲ್ಕು ದಿನದಲ್ಲೇ ಸಿನಿಮಾದ ಕಲೆಕ್ಷನ್ ಸಾವಿರ ಕೋಟಿ ರೂಪಾಯಿ ಸಮೀಪಿಸಿದರೂ ಅಚ್ಚರಿ ಏನಿಲ್ಲ.

ಸದ್ಯ ಪ್ರೀ ಬುಕಿಂಗ್​ನಿಂದ ಭಾರತದಲ್ಲಿ 70 ಕೋಟಿ ರೂಪಾಯಿ ಹರಿದು ಬಂದರೆ, ವಿದೇಶದಲ್ಲಿ 30 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಇಂದು (ಡಿಸೆಂಬರ್ 4) ಹಲವು ಕಡೆಗಳಲ್ಲಿ ಪ್ರೀಮಿಯರ್ ಇದ್ದು, ಇದನ್ನು ಸೇರಿ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ.

ಇದನ್ನೂ ಓದಿ: ನಾಗ ಚೈತನ್ಯ ಹಾಗೂ ಶೋಭಿತಾ ಮದುವೆಗೆ ಸೆಲೆಬ್ರಿಟಿಗಳ ದಂಡು; ಸಿನಿಮಾ ರಿಲೀಸ್ ಮಧ್ಯೆಯೂ ಬರ್ತಾರೆ ಅಲ್ಲು ಅರ್ಜುನ್

2024ರಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಈ ಚಿತ್ರ ಪಾತ್ರವಾಗಲಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಈ ಚಿತ್ರ ಈಗಾಗಲೇ ಅಡ್ವಾನ್ಸ್ ಬುಕಿಂಗ್​ನಲ್ಲಿ ‘ಕೆಜಿಎಫ್: ಚಾಪ್ಟರ್ 2’, ‘ಆರ್​ಆರ್​ಆರ್’ ಮೊದಲಾದ ಚಿತ್ರಗಳನ್ನು ಹಿಂದಿಕ್ಕಿ ದಾಖಲೆ ಬರೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.