AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa 2 Bus Accident: ‘ಪುಷ್ಪ 2’ ಚಿತ್ರೀಕರಣಕ್ಕೆ ತೆರಳಿದ್ದ ಕಲಾವಿದರ ಬಸ್​ ಅಪಘಾತ; ಫೋಟೋ ನೋಡಿ ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗಾಬರಿ

Pushpa 2: ‘ಪುಷ್ಪ 2’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿ ವಾಪಸ್​ ತೆರಳುತ್ತಿದ್ದ ಕಲಾವಿದರ ಬಸ್​ ಅಪಘಾತಕ್ಕೆ ಒಳಗಾಗಿದೆ. ಸರ್ಕಾರಿ ಬಸ್​ಗೆ ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನ ನಜ್ಜುಗುಜ್ಜಾವಾಗಿವೆ.

Pushpa 2 Bus Accident: ‘ಪುಷ್ಪ 2’ ಚಿತ್ರೀಕರಣಕ್ಕೆ ತೆರಳಿದ್ದ ಕಲಾವಿದರ ಬಸ್​ ಅಪಘಾತ; ಫೋಟೋ ನೋಡಿ ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗಾಬರಿ
ಪುಷ್ಪ 2 ಬಸ್​ ಅಪಘಾತ, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on:May 31, 2023 | 2:41 PM

Share

ತೆಲುಗು ಚಿತ್ರರಂಗಕ್ಕೆ ಒಂದರಹಿಂದೊಂದು ಕಹಿ ಸುದ್ದಿ ಕೇಳಿಬರುತ್ತಿದೆ. ಇತ್ತೀಚೆಗಷ್ಟೇ ಪವನ್​ ಕಲ್ಯಾಣ್​ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಅವಘಡ ಸಂಭವಿಸುತ್ತು. ಅದೃಷ್ಟವಶಾತ್​ ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲ. ಈಗ ‘ಪುಷ್ಪ 2’ (Pushpa 2) ಚಿತ್ರತಂಡಕ್ಕೂ ಅದೇ ರೀತಿ ಆಗಿದೆ. ಈ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿ ವಾಪಸ್​ ತೆರಳುತ್ತಿದ್ದ ಕಲಾವಿದರ ಬಸ್​ ಅಪಘಾತಕ್ಕೆ ಒಳಗಾಗಿದೆ. ಸರ್ಕಾರಿ ಬಸ್​ಗೆ ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನ ನಜ್ಜುಗುಜ್ಜಾವಾಗಿವೆ. ಅಪಘಾತದ (Pushpa 2 Bus Accident) ಸ್ಥಳದಲ್ಲಿನ ಫೋಟೋ ವೈರಲ್​ ಆಗಿದೆ. ಈ ಫೋಟೋ ನೋಡಿ ಅಲ್ಲು ಅರ್ಜುನ್​ (Allu Arjun) ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.

ಅಪಘಾತ ಸಂಭವಿಸಿದ್ದು ಹೇಗೆ?

ತೆಲಂಗಾಣ ರಸ್ತೆ ಸಾರಿಗೆ ಸಂಸ್ಥೆಯ ಬಸ್​ ಕೆಟ್ಟು ಹೋಗಿತ್ತು. ಆ ಬಸ್​ ಅನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿತ್ತು. ‘ಪುಷ್ಪ 2’ ಸಿನಿಮಾದ ಕಲಾವಿದರನ್ನು ಕರೆದು ತರುತ್ತಿದ್ದ ಬಸ್​ನ ಚಾಲಕನಿಗೆ ಕೆಟ್ಟು ನಿಂತಿದ್ದ ಬಸ್​ ಕಾಣಿಸಲಿಲ್ಲ. ಆದ್ದರಿಂದ ಡಿಕ್ಕಿ ಹೊಡೆದಿದೆ ಎಂದು ವರದಿ ಆಗಿದೆ. ತೆಲಂಗಾಣದ ನೆಲ್ಗೊಂಡ ಜಿಲ್ಲೆಯ ಹೈದರಾಬಾದ್​-ವಿಜಯವಾಡ ಹೈವೇಯಲ್ಲಿ ಈ ಅಪಘಾತ ಸಂಭವಿಸಿದೆ. ಬಸ್​ನಲ್ಲಿ ಇದ್ದ ಇಬ್ಬರಿಗೆ ಗಾಯವಾಗಿದೆ.

ಇದನ್ನೂ ಓದಿ: ಪುಷ್ಪ 2 ಆಡಿಯೋ, ಸ್ಯಾಟಲೈಟ್ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟ: ಖರೀದಿಸಿದ್ದು ಬಾಲಿವುಡ್​ನ ದೊಡ್ಡ ಕುಳ

ಅಪಘಾತದ ಬಗ್ಗೆ ಚಿತ್ರತಂಡದವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಈ ಸಿನಿಮಾಗೆ ಸುಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್​’ ಬ್ಯಾನರ್​ ಮೂಲಕ ಸಿನಿಮಾ ನಿರ್ಮಾಣ ಆಗುತ್ತಿದೆ. ಅದ್ದೂರಿ ಬಜೆಟ್​ನಲ್ಲಿ ತಯಾರಾಗುತ್ತಿರುವ ‘ಪುಷ್ಪ 2’ ಸಿನಿಮಾಗೆ ಬಿರುಸಿನ ಚಿತ್ರೀಕರಣ ನಡೆಯುತ್ತಿತ್ತು. ಆದರೆ ಈಗ ಕಲಾವಿದರ ಬಸ್​ಗೆ ಅಪಘಾತ ಆಗಿರುವುದರಿಂದ ಶೂಟಿಂಗ್​ಗೆ ಬ್ರೇಕ್​ ಬೀಳಬಹುದಾ ಎಂಬ ಪ್ರಶ್ನೆ ಎದುರಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:19 pm, Wed, 31 May 23

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ