ಪವರ್​ಫುಲ್ ಪೋಸ್ಟರ್ ರಿಲೀಸ್ ಮಾಡಿದ ‘ಪುಷ್ಪ 2’ ತಂಡ; ಟೀಸರ್​ಗೆ ಕೌಂಟ್​ಡೌನ್

ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ಸುಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್’ ಚಿತ್ರವನ್ನು ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಮಾಡುತ್ತಿದೆ. ಈ ಸಿನಿಮಾಗೆ ಭರದಿಂದ ಶೂಟಿಂಗ್ ನಡೆಯುತ್ತಿದೆ.

ಪವರ್​ಫುಲ್ ಪೋಸ್ಟರ್ ರಿಲೀಸ್ ಮಾಡಿದ ‘ಪುಷ್ಪ 2’ ತಂಡ; ಟೀಸರ್​ಗೆ ಕೌಂಟ್​ಡೌನ್
ಅಲ್ಲು ಅರ್ಜುನ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Apr 06, 2024 | 10:56 AM

‘ಪುಷ್ಪ 2’ (Pushpa 2) ಚಿತ್ರವನ್ನು ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಲು ಇಡೀ ತಂಡ ರೆಡಿ ಆಗಿದೆ. ಈ ಸಿನಿಮಾಗೆ ಭರ್ಜರಿ ಶೂಟಿಂಗ್ ಕೂಡ ನಡೆಯುತ್ತಿದೆ. ಆಗಸ್ಟ್ 15ರಂದು ಸಿನಿಮಾ ಬಿಡುಗಡೆ ಆಗಲಿದೆ. ಈ ಮೊದಲು ರಿಲೀಸ್ ಆದ ಸಿನಿಮಾದ ಮೊದಲ ಗ್ಲಿಂಪ್ಸ್ ಗಮನ ಸೆಳೆದಿತ್ತು. ಈಗ ಏಪ್ರಿಲ್ 8ರಂದು ಅಲ್ಲು ಅರ್ಜುನ್ ಬರ್ತ್​ಡೇ ಪ್ರಯುಕ್ತ ಟೀಸರ್ ರಿಲೀಸ್ ಮಾಡಲು ತಂಡ ಪ್ಲ್ಯಾನ್ ಮಾಡಿಕೊಂಡಿದೆ. ಅದಕ್ಕೂ ಮೊದಲು ಒಂದೊಂದೇ ಪೋಸ್ಟರ್ ರಿಲೀಸ್ ಮಾಡಲಾಗುತ್ತಿದೆ.

ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ಸುಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್’ ಚಿತ್ರವನ್ನು ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಮಾಡುತ್ತಿದೆ. ಈ ಸಿನಿಮಾಗೆ ಭರದಿಂದ ಶೂಟಿಂಗ್ ನಡೆಯುತ್ತಿದೆ. ಮೇ ಅಂತ್ಯದೊಳಗೆ ಶೂಟಿಂಗ್ ಪೂರ್ಣಗೊಳಿಸಿಕೊಳ್ಳೋ ಆಲೋಚನೆ ತಂಡಕ್ಕೆ ಇದೆ. ಈಗ ರೀಲೀಸ್ ಆಗಿರೋ ಹೊಸ ಪೋಸ್ಟರ್ ಗಮನ ಸೆಳೆಯುತ್ತಿದೆ.

ತ್ರಿಶೂಲಕ್ಕೆ ಕುಂಕುಮ ಮೆತ್ತಿಕೊಂಡಿದೆ. ಹಿಂಭಾಗದಲ್ಲಿ ಅಲ್ಲು ಅರ್ಜುನ್ ಅವರ ಮುಖ ಕಾಣಿಸಿದೆ. ಅವರು ಶಂಖ ಊದುತ್ತಿರುವ ರೀತಿಯಲ್ಲಿ ಪೋಸ್ಟರ್ ಇದೆ. ಈ ಪವರ್​ಫುಲ್ ಪೋಸ್ಟರ್ ಸಖತ್ ಗಮನ ಸೆಳೆದಿದೆ. ಏಪ್ರಿಲ್ 8 ಅಲ್ಲು ಅರ್ಜುನ್ ಅವರ ಬರ್ತ್​ಡೇ. ಆ ಪ್ರಯುಕ್ತ ಸಿನಿಮಾದ ಟೀಸರ್ ರಿಲೀಸ್ ಆಗಲಿದೆ. ಟೀಸರ್ ಸಖತ್ ಗೂಸ್​ಬಂಪ್ಸ್ ನೀಡಲಿದೆ ಎಂದು ತಂಡ ಹೇಳಿಕೊಂಡಿದೆ. ಬರ್ತ್​ಡೇ ದಿನವೇ ಟೀಸರ್ ರಿಲೀಸ್ ಆಗುತ್ತಿರುವುದಕ್ಕೆ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ. ಟೀಸರ್​ನಲ್ಲಿ ಯಾವೆಲ್ಲ ವಿಚಾರ ತೋರಿಸಲಾಗುತ್ತದೆ ಅನ್ನೋ ಕುತೂಹಲವೂ ಇದೆ.

ಅಲ್ಲು ಅರ್ಜುನ್ ಬಗ್ಗೆ ಟ್ವೀಟ್

ಏಪ್ರಿಲ್ 5 ರಶ್ಮಿಕಾ ಮಂದಣ್ಣ ಅವರ ಬರ್ತ್​ಡೇ. ಆ ಪ್ರಯುಕ್ತ ಅವರ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಮೊದಲ ಪಾರ್ಟ್​ನಲ್ಲಿ ನಾಚಿಕೆ ಪಟ್ಟಿಕೊಂಡು, ಹಳ್ಳಿ ಹುಡುಗಿ ರೀತಿಯಲ್ಲಿ ಕಾಣಿಸಿಕೊಂಡಿದ್ದ ಅವರು ಎರಡನೇ ಪಾರ್ಟ್​ಗೆ ಅವರ ಪಾತ್ರದಲ್ಲಿ ಬದಲಾವಣೆ ಆಗಿದೆ. ಎರಡನೇ ಭಾಗದಲ್ಲಿ ಅವರ ಪಾತ್ರವೂ ರಗಡ್ ಆಗಿರಲಿದೆ ಎನ್ನುವ ಸೂಚನೆ ಸಿಕ್ಕಿದೆ. ಇದು ರಶ್ಮಿಕಾ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

ಇದನ್ನೂ ಓದಿ: ‘ಪುಷ್ಪ 2’ ಟೀಸರ್​ ಬಿಡುಗಡೆಗೆ ದಿನಾಂಕ ನಿಗದಿ; ಜಾತ್ರೆಗೆ ಸಜ್ಜಾದ ಅಲ್ಲು ಅರ್ಜುನ್​ ಫ್ಯಾನ್ಸ್​

‘ಪುಷ್ಪ’ ಮೊದಲ ಭಾಗ 2021ರ ಡಿಸೆಂಬರ್​ನಲ್ಲಿ ರಿಲೀಸ್ ಆಯಿತು. ಎರಡನೇ ಭಾಗ ಈ ವರ್ಷ ಆಗಸ್ಟ್ 15ರಂದು ಬಿಡುಗಡೆ ಆಗಲಿದೆ. ಈ ಚಿತ್ರದ ಕಥೆ ಮೂರನೇ ಪಾರ್ಟ್​​ನಲ್ಲೂ ಮುಂದುವರಿಯಲಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಅಲ್ಲು ಅರ್ಜುನ್ ಅವರು ಈ ಮೊದಲೇ ಸೂಚನೆ ಕೊಟ್ಟಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಸಖತ್ ಥ್ರಿಲ್ ಕೊಟ್ಟಿದೆ. ಮೂರನೇ ಭಾಗಕ್ಕೆ ‘ಪುಷ್ಪ-ದಿ ರೋರ್’ ಎಂದು ಶೀರ್ಷಿಕೆ ಇಡಲಾಗಿದೆ ಎನ್ನಲಾಗುತ್ತಿದೆ. ಸದ್ಯಕ್ಕಂತೂ ಈ ಸಿನಿಮಾ ಸೆಟ್ಟೇರುವುದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ