ಆ.15ಕ್ಕೆ ರಿಲೀಸ್ ಆಗಲ್ಲ ‘ಪುಷ್ಪ 2’: ಹೊಸ ದಿನಾಂಕ ತಿಳಿಸಿದ ಚಿತ್ರತಂಡ

ಅಲ್ಲು ಅರ್ಜುನ್​ ಅಭಿಮಾನಿಗಳು ‘ಪುಷ್ಪ 2’ ಸಿನಿಮಾ ನೋಡಲು ಕಾದಿದ್ದರು. ಆದರೆ ಈಗ ಸಿನಿಮಾದ ರಿಲೀಸ್​ ಡೇಟ್​ ಮುಂದಕ್ಕೆ ಹೋಗಿದೆ. ಆಗಸ್ಟ್ 15ರ ಬದಲು ಚಿತ್ರತಂಡದವರು ಹೊಸ ದಿನಾಂಕ ಘೋಷಣೆ ಮಾಡಿದ್ದಾರೆ. ಈ ಸಿನಿಮಾದ ಶೂಟಿಂಗ್​ ಇನ್ನೂ ಬಾಕಿ ಇದೆ. ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಕೂಡ ಸಾಕಷ್ಟಿವೆ. ಆದ್ದರಿಂದ ರಿಲೀಸ್​ ದಿನಾಂಕ ಮುಂದೂಡುವುದು ಅನಿವಾರ್ಯ ಆಯಿತು.

ಆ.15ಕ್ಕೆ ರಿಲೀಸ್ ಆಗಲ್ಲ ‘ಪುಷ್ಪ 2’: ಹೊಸ ದಿನಾಂಕ ತಿಳಿಸಿದ ಚಿತ್ರತಂಡ
ಅಲ್ಲು ಅರ್ಜುನ್​
Follow us
|

Updated on: Jun 17, 2024 | 10:01 PM

ಆಗಸ್ಟ್​ 15ಕ್ಕೆ ‘ಪುಷ್ಪ 2’ ಸಿನಿಮಾ (Pushpa 2 Movie) ಬಿಡುಗಡೆ ಆಗಲಿದೆ ಎಂದು ಎಲ್ಲರೂ ಕಾಯುತ್ತಿದ್ದರು. ಆದರೆ ಪ್ರೇಕ್ಷಕರ ನಿರೀಕ್ಷೆ ಸುಳ್ಳಾಗಿದೆ. ಚಿತ್ರತಂಡ ಈಗ ರಿಲೀಸ್​ ದಿನಾಂಕ (Pushpa 2 Release Date) ಮುಂದೂಡಿಕೊಂಡಿದೆ. ಆಗಸ್ಟ್​ 15ರ ಬದಲಿಗೆ ಡಿಸೆಂಬರ್​ 6ರಂದು ಸಿನಿಮಾ ಬಿಡುಗಡೆ ಮಾಡಲು ‘ಪುಷ್ಪ 2’ ನಿರ್ಮಾಪಕರು ನಿರ್ಧರಿಸಿದ್ದಾರೆ. ಈ ಬಗ್ಗೆ ಸ್ವತಃ ಅಲ್ಲು ಅರ್ಜುನ್​ (Allu Arjun) ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಹೊಸ ಪೋಸ್ಟರ್​ ಜೊತೆಗೆ ಅಲ್ಲು ಅರ್ಜುನ್​ ಈ ಸುದ್ದಿ ನೀಡಿದ್ದಾರೆ. ಆದಷ್ಟು ಬೇಗ ‘ಪುಷ್ಪ 2’ ಸಿನಿಮಾ ನೋಡಬೇಕು ಎಂದು ಕಾದಿದ್ದ ಅಭಿಮಾನಿಗಳಿಗೆ ನಿರಾಸೆ ಆಗಿದೆ.

‘ಪುಷ್ಪ 2’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾದ ರಿಲೀಸ್​ ದಿನಾಂಕ ಮುಂದೂಡಿಕೆ ಆಗುವ ಸಾಧ್ಯತೆ ಇದೆ ಎಂದು ಒಂದಷ್ಟು ತಿಂಗಳಿಂದ ಗಾಸಿಪ್​ ಕೇಳಿಬರುತ್ತಲೇ ಇತ್ತು. ಆದರೆ ಚಿತ್ರತಂಡದವರು ಆ ಗಾಸಿಪ್​ ತಳ್ಳಿ ಹಾಕುತ್ತಲೇ ಇದ್ದರು. ‘ರಿಲೀಸ್​ ದಿನಾಂಕ ಬದಲಾಗಲ್ಲ’ ಎಂದು ಭಾರಿ ಆತ್ಮವಿಶ್ವಾಸದಿಂದ ಹೇಳುತ್ತಲೇ ಇದ್ದರು. ಆದರೆ ಕಡೆಗೂ ಗಾಸಿಪ್​ ನಿಜವಾಗಿದೆ. ‘ಪುಷ್ಪ 2’ ರಿಲೀಸ್​ ಡೇಟ್​ ಮುಂದಕ್ಕೆ ಹೋಗಿದೆ.

ಕಾರಣಾಂತರಗಳಿಂದ ‘ಪುಷ್ಪ 2’ ಸಿನಿಮಾದ ಶೂಟಿಂಗ್​ ತಡವಾಯಿತು. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಜೊತೆ ನಟಿಸುತ್ತಿದ್ದ ಜಗದೀಶ್​ ಜೈಲು ಸೇರಿದ್ದರಿಂದ ಚಿತ್ರೀಕರಣಕ್ಕೆ ತೊಂದರೆ ಆಗಿತ್ತು. ಅಲ್ಲದೇ ಇದು ದೊಡ್ಡ ಬಜೆಟ್​ನ ಸಿನಿಮಾ ಆದ್ದರಿಂದ ಬೃಹತ್​ ಸೆಟ್​ಗಳ ನಿರ್ಮಾಣ ಮಾಡಲಾಗಿದೆ. ಅದಕ್ಕೂ ಸಾಕಷ್ಟು ಸಮಯ ಹಿಡಿದಿದೆ. ಇನ್ನೂ ಹಲವು ದೃಶ್ಯಗಳ ಚಿತ್ರೀಕರಣ ಬಾಕಿ ಇದೆ. ಹಾಗಾಗಿ ಆಗಸ್ಟ್ 15ರಂದು ಬಿಡುಗಡೆ ಮಾಡುವುದು ಅಸಾಧ್ಯ ಎಂಬುದು ಚಿತ್ರತಂಡದ ಗಮನಕ್ಕೆ ಬಂದಿದ್ದು, ಡಿಸೆಂಬರ್​ 6ಕ್ಕೆ ರಿಲೀಸ್​ ಮಾಡಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಫೈವ್ ಸ್ಟಾರ್ ಹೋಟೆಲ್ ಬಿಟ್ಟು ರಸ್ತೆ ಬದಿ ಡಾಬಾದಲ್ಲಿ ಊಟ ಮಾಡಿದ ನಟ ಅಲ್ಲು ಅರ್ಜುನ್​

ಆಗಸ್ಟ್​ 15ಕ್ಕೆ ‘ಪುಷ್ಪ 2’ ರಿಲೀಸ್​ ಮಾಡುವ ಉದ್ದೇಶ ಇದ್ದಿದ್ದರಿಂದ ಭರ್ಜರಿಯಾಗಿ ಪ್ರಚಾರ ಕಾರ್ಯ ಆರಂಭಿಸಲಾಗಿತ್ತು. ಟೀಸರ್​ ಬಿಡುಗಡೆ ಮಾಡಿ ಭರ್ಜರಿ ಪ್ರತಿಕ್ರಿಯೆ ಪಡೆದುಕೊಳ್ಳಲಾಗಿತ್ತು. ಬಳಿಕ ಬಿಡುಗಡೆ ಆದ ಹಾಡಿಗೆ ಜನಮೆಚ್ಚಿಗೆ ಸಿಕ್ಕಿತ್ತು. ದೊಡ್ಡ ಪರದೆಯಲ್ಲಿ ಸಿನಿಮಾ ನೋಡಲು ಕಾತರ ಹೆಚ್ಚಾಯಿತು. ಆದರೆ ಈಗ ಸಿನಿಮಾದ ಕೆಲಸಗಳು ಪೂರ್ಣವಾಗಿಲ್ಲ ಎಂಬ ಕಾರಣಕ್ಕೆ ರಿಲೀಸ್​ ದಿನಾಂಕ ಮುಂದೂಡಿಕೆ ಮಾಡಲಾಗಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ಅನೇಕ ಘಟಾನುಘಟಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದು, ಸುಕುಮಾರ್​ ನಿರ್ದೇಶನ ಮಾಡಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ವಿದ್ಯುತ್ ದೀಪದ ಬೆಳಕಲ್ಲಿ ಕಣ್ಮನ ಸೆಳೆದ ತುಂಗಭದ್ರಾ ಜಲಾಶಯ, ವಿಡಿಯೋ
ವಿದ್ಯುತ್ ದೀಪದ ಬೆಳಕಲ್ಲಿ ಕಣ್ಮನ ಸೆಳೆದ ತುಂಗಭದ್ರಾ ಜಲಾಶಯ, ವಿಡಿಯೋ
ಪ್ರಶ್ನೆಗಳಿಗೆ ಉತ್ತರಿಸುವ ಬದಲು ಸಿಎಂ ಹೇಡಿಯಂತೆ ಓಡಿಹೋಗಿದ್ದಾರೆ: ಅಶೋಕ
ಪ್ರಶ್ನೆಗಳಿಗೆ ಉತ್ತರಿಸುವ ಬದಲು ಸಿಎಂ ಹೇಡಿಯಂತೆ ಓಡಿಹೋಗಿದ್ದಾರೆ: ಅಶೋಕ
ಮುಡಾ ಹಗರಣ: ನ್ಯಾಯ ಕೇಳಲು ರಾಜ್ಯಪಾಲರಲ್ಲಿಗೆ ಹೋದ ವಿರೋಧ ಪಕ್ಷಗಳ ಶಾಸಕರು
ಮುಡಾ ಹಗರಣ: ನ್ಯಾಯ ಕೇಳಲು ರಾಜ್ಯಪಾಲರಲ್ಲಿಗೆ ಹೋದ ವಿರೋಧ ಪಕ್ಷಗಳ ಶಾಸಕರು
ಶಿರೂರು ಗುಡ್ಡ ಕುಸಿತ: ನದಿಯಲ್ಲಿ ತೇಲಿಬಂತು ಟ್ರಕ್​ನಲ್ಲಿದ್ದ ಮರದ ತುಂಡು
ಶಿರೂರು ಗುಡ್ಡ ಕುಸಿತ: ನದಿಯಲ್ಲಿ ತೇಲಿಬಂತು ಟ್ರಕ್​ನಲ್ಲಿದ್ದ ಮರದ ತುಂಡು
ಬಿಜೆಪಿ ನಾಯಕರಿಂದ ಹೂವು ನೀಡಿ ಮನವೊಲಿಸುವ ಪ್ರಯತ್ನಕ್ಕೂ ಮಣಿಯದ ಸ್ಪೀಕರ್
ಬಿಜೆಪಿ ನಾಯಕರಿಂದ ಹೂವು ನೀಡಿ ಮನವೊಲಿಸುವ ಪ್ರಯತ್ನಕ್ಕೂ ಮಣಿಯದ ಸ್ಪೀಕರ್
ಅರ್ಜುನ್ ಮತ್ತಿಬ್ಬರ ಶೋಧ ಜಾರಿ, ಡ್ರೋನ್ ಮತ್ತು ಕೋಸ್ಟ್ ಗಾರ್ಡ್ ಚಾಪರ್ ಬಳಕೆ
ಅರ್ಜುನ್ ಮತ್ತಿಬ್ಬರ ಶೋಧ ಜಾರಿ, ಡ್ರೋನ್ ಮತ್ತು ಕೋಸ್ಟ್ ಗಾರ್ಡ್ ಚಾಪರ್ ಬಳಕೆ
ಮೃತ ಮಾಲೀಕನಿಗಾಗಿ ಹುಡುಕಾಡುತ್ತಿರುವ ಸಾಕು ನಾಯಿ, ಮನಕಲಕುವ ದೃಶ್ಯ ಇಲ್ಲಿದೆ
ಮೃತ ಮಾಲೀಕನಿಗಾಗಿ ಹುಡುಕಾಡುತ್ತಿರುವ ಸಾಕು ನಾಯಿ, ಮನಕಲಕುವ ದೃಶ್ಯ ಇಲ್ಲಿದೆ
13 ವರ್ಷದ ಹಿಂದೆ ಜೈಲಿನಲ್ಲಿದ್ದಾಗ ದರ್ಶನ್ ಹೇಗಿದ್ದರು: ಜೈಲಧಿಕಾರಿ ನೆನಪು
13 ವರ್ಷದ ಹಿಂದೆ ಜೈಲಿನಲ್ಲಿದ್ದಾಗ ದರ್ಶನ್ ಹೇಗಿದ್ದರು: ಜೈಲಧಿಕಾರಿ ನೆನಪು
ವಾತಾವರಣ ಅನುಕೂಲಕರವಾಗಿದೆ, ಬಿಜೆಪಿ ಸದಸ್ಯರು ಪಾದಯಾತ್ರೆ ಮಾಡಲಿ: ಖರ್ಗೆ
ವಾತಾವರಣ ಅನುಕೂಲಕರವಾಗಿದೆ, ಬಿಜೆಪಿ ಸದಸ್ಯರು ಪಾದಯಾತ್ರೆ ಮಾಡಲಿ: ಖರ್ಗೆ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ಜನರ ಹುಚ್ಚಾಟ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ಜನರ ಹುಚ್ಚಾಟ