‘ಪುಷ್ಪ 2’ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ? ಮತ್ತೆ ಶುರುವಾಯ್ತು ಚರ್ಚೆ
‘ಪುಷ್ಪ 2’ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ ಎಂದು ಅನೇಕ ಬಾರಿ ವರದಿ ಆಗಿತ್ತು. ಆದರೆ, ಇದನ್ನು ತಂಡ ಅಲ್ಲಗಳೆಯುತ್ತಲೇ ಬಂದಿದೆ. ಪ್ರತಿ ಬಾರಿ ಪೋಸ್ಟರ್ ರಿಲೀಸ್ ಮಾಡಿದಾಗಲೂ ಸಿನಿಮಾ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಆದಾಗ್ಯೂ ಈಗ ಮತ್ತೆ ಸಿನಿಮಾ ರಿಲೀಸ್ ದಿನಾಂಕದ ಬಗ್ಗೆ ವದಂತಿ ಹಬ್ಬಿದೆ.

ಬಿಗ್ ಬಜೆಟ್ ಸಿನಿಮಾ ಎಂದಾಗ ಅದಕ್ಕೆ ಸಾಕಷ್ಟು ಕೆಲಸಗಳು ಇರುತ್ತವೆ. ಸ್ಟಾರ್ಗಳ ಕಾಲ್ಶೀಟ್ ಹೊಂದಿಸಬೇಕು. ಸಾಕಷ್ಟು ಎಚ್ಚರಿಕೆಯಿಂದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮಾಡಬೇಕು. ಹೀಗಾಗಿ, ಅಂದುಕೊಂಡ ದಿನಾಂಕದಂದು ಸಿನಿಮಾ ರಿಲೀಸ್ ಮಾಡೋಕೆ ಆಗುವುದಿಲ್ಲ. ಈಗ ‘ಪುಷ್ಪ 2’ (Pushpa 2) ಚಿತ್ರದ ವಿಚಾರದಲ್ಲಿ ಹಾಗೆಯೇ ಆಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಎಷ್ಟೇ ಪ್ರಯತ್ನಿಸಿದರೂ ಈ ಸಿನಿಮಾದ ಕೆಲಸಗಳು ಪೂರ್ಣಗೊಳ್ಳುತ್ತಿಲ್ಲವಂತೆ. ಹೀಗಾಗಿ ಆಗಸ್ಟ್ 15ರಂದು ಸಿನಿಮಾ ರಿಲೀಸ್ ಮಾಡೋಕೆ ಸಾಧ್ಯವಾಗುತ್ತಿಲ್ಲ ಎಂದು ವರದಿ ಆಗಿದೆ.
‘ಪುಷ್ಪ 2’ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ ಎಂದು ಅನೇಕ ಬಾರಿ ವರದಿ ಆಗಿತ್ತು. ಆದರೆ, ಇದನ್ನು ತಂಡ ಅಲ್ಲಗಳೆಯುತ್ತಲೇ ಬಂದಿದೆ. ಪ್ರತಿ ಬಾರಿ ಪೋಸ್ಟರ್ ರಿಲೀಸ್ ಮಾಡಿದಾಗಲೂ ಸಿನಿಮಾ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಆದಾಗ್ಯೂ ಈಗ ಮತ್ತೆ ಸಿನಿಮಾ ರಿಲೀಸ್ ದಿನಾಂಕದ ಬಗ್ಗೆ ವದಂತಿ ಹಬ್ಬಿದೆ. ಈ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ ಎಂದು ಹೇಳಲಾಗುತ್ತಿದೆ.
ನಿರ್ದೇಶಕ ಸುಕುಮಾರ್ ಅವರು ತರಾತುರಿಯಲ್ಲಿ ಸಿನಿಮಾ ರಿಲೀಸ್ ಮಾಡುವ ಆಲೋಚನೆಯಲ್ಲಿ ಇಲ್ಲ. ಎಲ್ಲವೂ ಅಚ್ಚುಕಟ್ಟಾಗಿ ತರಲು ಅವರು ನಿರ್ಧರಿಸಿದ್ದಾರೆ. ಹೀಗಾಗಿ, ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದೆ. ಈ ಕಾರಣದಿಂದಲೇ ‘ಪುಷ್ಪ 2’ ರಿಲೀಸ್ ದಿನಾಂಕ ಮುಂದಕ್ಕೆ ಹೋಗಲಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಮೊದಲೇ ಘೋಷಣೆ ಮಾಡಲು ಸುಕುಮಾರ್ ಆಲೋಚಿಸಿದ್ದಾರೆ. ಇನ್ನು, ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಹೆಚ್ಚಿನ ಪ್ರಚಾರದ ಅಗತ್ಯ ಇರುತ್ತದೆ. ಇದಕ್ಕೆ ಸಾಕಷ್ಟು ಸಮಯ ಮೀಸಲಿಡಬೇಕು.
ಸದ್ಯ ಆಗಸ್ಟ್ 15ರಂದು ‘ಪುಷ್ಪ 2’ ರಿಲೀಸ್ ಆಗಲಿದೆ ಎನ್ನುವ ಮಾಹಿತಿ ಇದೆ. ಒಂದೊಮ್ಮೆ ಪೋಸ್ಟ್ಪೋನ್ ವಿಚಾರ ನಿಜವೇ ಆದಲ್ಲಿ ಈ ದಿನಾಂಕಕ್ಕೆ ಜೂನಿಯರ್ ಎನ್ಟಿಆರ್ ನಟನೆಯ ‘ದೇವರ’ ಸಿನಿಮಾ ರಿಲೀಸ್ ಆಗಲಿದೆಯೇ ಎನ್ನುವ ಕುತೂಹಲ ಮೂಡಿದೆ.
ಪವನ್ ಕಲ್ಯಾಣ್ ಪ್ರಮಾಣವಚನಕ್ಕೆ ಅಲ್ಲು ಅರ್ಜುನ್ ಅವರು ಗೈರಿದ್ದರು. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ವಿಚಾರದಲ್ಲಿ ಜನರ ಗಮನವನ್ನು ಬೇರೆಕಡೆ ಕರೆದೊಯ್ಯಲು ಅಲ್ಲು ಅರ್ಜುನ್ ಅಭಿಮಾನಿಗಳು ‘ಪುಷ್ಪ 2’ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ ಎನ್ನುವ ವಿಚಾರವನ್ನು ಹರಿಬಿಟ್ಟಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.
ಇದನ್ನೂ ಓದಿ: ಫೈವ್ ಸ್ಟಾರ್ ಹೋಟೆಲ್ ಬಿಟ್ಟು ರಸ್ತೆ ಬದಿ ಡಾಬಾದಲ್ಲಿ ಊಟ ಮಾಡಿದ ನಟ ಅಲ್ಲು ಅರ್ಜುನ್
‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್, ಫಹಾದ್ ಫಾಸಿಲ್ ಮೊದಲಾದ ಕಲಾವಿದರು ನಟಿಸಿದ್ದಾರೆ. ಸುಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್’ ಈ ಚಿತ್ರವನ್ನು ನಿರ್ಮಿಸಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



