Pushpa 2 Teaser: ಸೀರೆ ಉಟ್ಟು ಮಾಸ್ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್; ಗಮನ ಸೆಳೆದ ‘ಪುಷ್ಪ 2’ ಟೀಸರ್

Pushpa 2 The Rule Teaser: ಈ ಮೊದಲು ಅಲ್ಲು ಅರ್ಜುನ್ ಅವರು ಮುಖಕ್ಕೆ ಬಣ್ಣ ಬಳಿದುಕೊಂಡು, ಸೀರೆ ಉಟ್ಟ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದರು. ಇದರ ಪೋಸ್ಟರ್ ವೈರಲ್ ಆಗಿತ್ತು. ಈಗ ರಿಲೀಸ್ ಆಗಿರೋ ಟೀಸರ್​ನಲ್ಲಿ ಅಲ್ಲು ಅರ್ಜುನ್ ಅವರು ಇದೇ ಅವತಾರದಲ್ಲಿ ಫೈಟ್ ಮಾಡಿದ್ದಾರೆ.

Pushpa 2 Teaser: ಸೀರೆ ಉಟ್ಟು ಮಾಸ್ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್; ಗಮನ ಸೆಳೆದ ‘ಪುಷ್ಪ 2’ ಟೀಸರ್
ಅಲ್ಲು ಅರ್ಜುನ್
Follow us
ರಾಜೇಶ್ ದುಗ್ಗುಮನೆ
|

Updated on:Apr 08, 2024 | 11:29 AM

ಇಂದು (ಏಪ್ರಿಲ್ 8) ಅಲ್ಲು ಅರ್ಜುನ್ (Allu Arjun) ಬರ್ತ್​ಡೇ. ಈ ಹಿನ್ನೆಲೆಯಲ್ಲಿ ಅವರ ಮುಂದಿನ ಸಿನಿಮಾ ‘ಪುಷ್ಪ 2’ ಚಿತ್ರದ ಟೀಸರ್​ನ ತಂಡ ಫ್ಯಾನ್ಸ್​ಗೆ ಗಿಫ್ಟ್ ಆಗಿ ಕೊಟ್ಟಿದೆ. ಪೋಸ್ಟರ್​ಗಳ ಮೂಲಕ ಟೀಸರ್ ಯಾವ ರೀತಿಯಲ್ಲಿ ಇರಬಹುದು ಎಂಬ ಬಗ್ಗೆ ತಂಡ ಸೂಚನೆ ಕೊಟ್ಟಿತ್ತು. ಅದೇ ರೀತಿಯಲ್ಲಿ ಈ ಟೀಸರ್ ಮೂಡಿ ಬಂದಿದೆ. ಅಲ್ಲು ಅರ್ಜುನ್ ಅವರು ಸಖತ್ ರಗಡ್ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದಿದ್ದಾರೆ.

ಈ ಮೊದಲು ಅಲ್ಲು ಅರ್ಜುನ್ ಅವರು ಮುಖಕ್ಕೆ ಬಣ್ಣ ಬಳಿದುಕೊಂಡು, ಸೀರೆ ಉಟ್ಟ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದರು. ಇದರ ಪೋಸ್ಟರ್ ವೈರಲ್ ಆಗಿತ್ತು. ಈಗ ರಿಲೀಸ್ ಆಗಿರೋ ಟೀಸರ್​ನಲ್ಲಿ ಅಲ್ಲು ಅರ್ಜುನ್ ಅವರು ಇದೇ ಅವತಾರದಲ್ಲಿ ಫೈಟ್ ಮಾಡಿದ್ದಾರೆ. ಇದಕ್ಕಾಗಿ ಹಾಕಲಾದ ಬೃಹತ್ ಸೆಟ್​ಗಳು ಗಮನ ಸೆಳೆದಿವೆ.

ಒಂದು ನಿಮಿಷದ ಎಂಟು ಸೆಕೆಂಡ್ ಈ ಟೀಸರ್ ಇದೆ. ಇದರಲ್ಲಿ ಹೆಚ್ಚು ಭಾಗ ಅಲ್ಲು ಅರ್ಜುನ್ ಅವರ ಎಂಟ್ರಿಯನ್ನೇ ತೋರಿಸಲಾಗಿದೆ. ನಂತರ ಒಂದೆರಡು ಫೈಟಿಂಗ್ ದೃಶ್ಯ ಇದೆ. ಅಲ್ಲಿಗೆ ಇಡೀ ಟೀಸರ್ ಪೂರ್ಣಗೊಂಡಿದೆ. ಇದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಇನ್ನೂ ಏನಾದರೂ ಹೆಚ್ಚಿನದ್ದನ್ನು ತೋರಿಸಬಹುದಿತ್ತು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಪವರ್​ಫುಲ್ ಪೋಸ್ಟರ್ ರಿಲೀಸ್ ಮಾಡಿದ ‘ಪುಷ್ಪ 2’ ತಂಡ; ಟೀಸರ್​ಗೆ ಕೌಂಟ್​ಡೌನ್

‘ಪುಷ್ಪ 2’ ಚಿತ್ರವನ್ನು ಸುಕುಮಾರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಮೊದಲ ಪಾರ್ಟ್​ಗೆ ಹೋಲಿಕೆ ಮಾಡಿದರೆ ಎರಡನೇ ಪಾರ್ಟ್​ನಲ್ಲಿ ಅವರು ಮತ್ತಷ್ಟು ಪಳಗಿದಂತೆ ಕಾಣುತ್ತಿದೆ. ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಕನ್ನಡದ ಡಾಲಿ ಧನಂಜಯ್ ಮೊದಲಾದವರು ‘ಪುಷ್ಪ 2’ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಸಿನಿಮಾ ಬಗ್ಗೆ ಇರೋ ನಿರೀಕ್ಷೆ ದುಪ್ಪಟ್ಟಾಗಿದೆ. ಆಗಸ್ಟ್ 15ರಂದು ಸಿನಿಮಾ ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:22 am, Mon, 8 April 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ