AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೂಳೆಬ್ಬಿಸುತ್ತ ಬಿಡುಗಡೆ ಆಯ್ತು ‘ಪುಷ್ಪ 2’ ಟ್ರೇಲರ್​; ನಿರೀಕ್ಷೆ ಇನ್ನಷ್ಟು ಜೋರು

ಪಟ್ನಾದಲ್ಲಿ ಅದ್ದೂರಿಯಾಗಿ ‘ಪುಷ್ಪ 2’ ಸಿನಿಮಾದ ಟ್ರೇಲರ್​ ರಿಲೀಸ್ ಮಾಡಲಾಗಿದೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಟ್ರೇಲರ್​ ಲಾಂಚ್ ಆಗಿದೆ. ಅಲ್ಲು ಅರ್ಜುನ್​ ಅವರನ್ನು ನೋಡಲು ಸಾವಿರಾರು ಅಭಿಮಾನಿಗಳು ನೆರೆದಿದ್ದಾರೆ. ಡಿಸೆಂಬರ್​ 5ರಂದು ಬಿಡುಗಡೆ ಆಗಲಿರುವ ‘ಪುಷ್ಪ 2’ ಸಿನಿಮಾದ ಬಗ್ಗೆ ಭಾರಿ ಹೈಪ್ ಸೃಷ್ಟಿ ಆಗಿದೆ.

ಧೂಳೆಬ್ಬಿಸುತ್ತ ಬಿಡುಗಡೆ ಆಯ್ತು ‘ಪುಷ್ಪ 2’ ಟ್ರೇಲರ್​; ನಿರೀಕ್ಷೆ ಇನ್ನಷ್ಟು ಜೋರು
ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Nov 17, 2024 | 6:05 PM

Share

ಬಹುನಿರೀಕ್ಷಿತ ‘ಪುಷ್ಪ 2’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಕಾಣಲಿದೆ. ಹಾಗಾಗಿ ದೇಶಾದ್ಯಂತ ಪ್ರಚಾರ ಮಾಡಲಾಗುತ್ತಿದೆ. ಹಿಂದಿಗೂ ಡಬ್ ಆಗಿ ತೆರೆಕಾಣಲಿದ್ದು, ಉತ್ತರ ಭಾರತದ ಪ್ರೇಕ್ಷಕರ ಸಮ್ಮುಖದಲ್ಲಿ ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಬಿಹಾರದ ಪಟ್ನಾದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳ ಎದುರು ‘ಪುಷ್ಪ 2’ ಚಿತ್ರತಂಡದವರು ಟ್ರೇಲರ್​ ಬಿಡುಗಡೆ ಕಾರ್ಯಕ್ರಮ ಮಾಡಿದ್ದಾರೆ. ಅಲ್ಲು ಅರ್ಜುನ್ ಜೊತೆ ಚಿತ್ರತಂಡ ಹಲವರು ಭಾಗಿ ಆಗಿದ್ದಾರೆ.

ಸುಕುಮಾರ್​ ಅವರು ‘ಪುಷ್ಪ 2’ ಸಿನಿಮಾವನ್ನು ಬಹಳ ಸಮಯ ತೆಗೆದುಕೊಂಡು ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್ ಅವರು ಈ ಸಿನಿಮಾಗಾಗಿ ಸಾಕಷ್ಟು ಸಮಯ ಮೀಡಲಿಟ್ಟಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್​’ ನಿರ್ಮಾಣ ಸಂಸ್ಥೆ ಈ ಸಿನಿಮಾದ ಮೇಲೆ ನೂರಾರು ಕೋಟಿ ರೂಪಾಯಿ ಬಂಡವಾಳ ಹಾಕಿದೆ. ಬಿಡುಗಡೆಗೂ ಮುನ್ನವೇ ಭಾರಿ ಬಿಸ್ನೆಸ್ ಆಗಿದೆ. ಅದ್ದೂರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಅದಕ್ಕೆ ಟ್ರೇಲರ್​ ರಿಲೀಸ್ ಕಾರ್ಯಕ್ರಮವೇ ಸಾಕ್ಷಿ.

‘ಪುಷ್ಪ 2’ ಟ್ರೇಲರ್:

ಅಲ್ಲು ಅರ್ಜುನ್ ಅವರಿಗೆ ತೆಲಂಗಾಣ, ಆಂಧ್ರದಲ್ಲಿ ಮಾತ್ರವಲ್ಲದೇ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಪಟ್ನಾದಲ್ಲಿ ‘ಪುಷ್ಪ 2’ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಲು ಬಂದ ಅಲ್ಲು ಅರ್ಜುನ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಟ್ರೇಲರ್ ನೋಡಿದ ಬಳಿಕ ಪ್ರೇಕ್ಷಕರ ನಿರೀಕ್ಷೆ ಡಬಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಟ್ರೇಲರ್​ ಟ್ರೆಂಡ್​ ಸೃಷ್ಟಿ ಮಾಡಿದೆ.

ಇದನ್ನೂ ಓದಿ: ‘ಪುಷ್ಪ 2’ ಸಿನಿಮಾ ಡಬ್ಬಿಂಗ್; ಹೊಸ ಅಪ್​ಡೇಟ್​ ನೀಡಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್, ಡಾಲಿ ಧನಂಜಯ್, ಫಹಾದ್ ಫಾಸಿಲ್ ಮುಂತಾದವರು ನಟಿಸಿದ್ದ ‘ಪುಷ್ಪ’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗಿತ್ತು. ಅದರ ಸೀಕ್ವೆಲ್​ ಆಗಿ ಮೂಡಿಬರುತ್ತಿರುವ ‘ಪುಷ್ಪ 2’ ಸಿನಿಮಾ ಸಾರ್ವಕಾಲಿಕ ಹಿಟ್ ಆಗಲಿದೆ ಎಂಬುದು ಅಭಿಮಾನಿಗಳ ನಂಬಿಕೆ. ಮೊದಲ ದಿನದ ಕೆಲೆಕ್ಷನ್​ನಲ್ಲಿ ಈ ಸಿನಿಮಾ ಬೇರೆ ಎಲ್ಲ ದಾಖಲೆಗಳನ್ನು ಉಡೀಸ್ ಮಾಡಲಿದೆ ಎಂಬ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ