Pushpa 2: ಈ ವರ್ಷ ರಿಲೀಸ್ ಆಗಲ್ವಾ ‘ಪುಷ್ಪ 2’ ಸಿನಿಮಾ? ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಬೇಸರ

Allu Arjun: ಆದಷ್ಟು​ ಬೇಗ ‘ಪುಷ್ಪ 2’ ಸಿನಿಮಾವನ್ನು ನೋಡಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಅವರ ಆಸೆ ಈ ವರ್ಷ ಈಡೇರುವಂತೆ ಕಾಣುತ್ತಿಲ್ಲ.

Pushpa 2: ಈ ವರ್ಷ ರಿಲೀಸ್ ಆಗಲ್ವಾ ‘ಪುಷ್ಪ 2’ ಸಿನಿಮಾ? ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಬೇಸರ
ಫಹಾದ್​ ಫಾಸಿಲ್​, ಅಲ್ಲು ಅರ್ಜುನ್​

Updated on: May 24, 2023 | 9:04 PM

ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಅವರ ‘ಪುಷ್ಪ 2’ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. 2023ರಲ್ಲೇ ಈ ಚಿತ್ರ ರಿಲೀಸ್​ ಆಗಲಿದೆ ಎಂದು ಅಭಿಮಾನಿಗಳು ಕಾದಿದ್ದಾರೆ. ಆದರೆ ಈ ಚಿತ್ರದ ರಿಲೀಸ್​ ದಿನಾಂಕ ಮುಂದೂಡಿಕೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೆಲವು ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಪ್ರಕಟ ಆಗಿದೆ. ‘ಪುಷ್ಪ 2’ ಸಿನಿಮಾದ ರಿಲೀಸ್​ ಡೇಟ್​ (Pushpa 2 Release date) ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಸಿಕ್ಕಿಲ್ಲ. ನಿರ್ದೇಶಕ ಸುಕುಮಾರ್​ ಅವರು ಬಹಳ ಕಾಳಜಿ ವಹಿಸಿ ಸಿನಿಮಾ ಮಾಡುತ್ತಿರುವುದರಿಂದ ಸಹಜವಾಗಿಯೇ ಹೆಚ್ಚಿನ ಸಮಯ ಹಿಡಿಯಲಿದೆ. ಹಾಗಾಗಿ ‘ಪುಷ್ಪ 2’ ಸಿನಿಮಾ (Pushpa 2 Movie) ರಿಲೀಸ್​ ಆಗುವುದು 2024ರಲ್ಲಿ ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಸಿಗಬೇಕಿದೆ.

‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅದರ ಸೀಕ್ವೆಲ್​ ಬಗ್ಗೆ ಸಾಕಷ್ಟು ಹೈಪ್​ ಸೃಷ್ಟಿ ಆಯಿತು. ಇತ್ತೀಚೆಗೆ ಈ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆಯಿತು. ಆದಕ್ಕೆ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಚಿತ್ರದ ಬಗ್ಗೆ ಹಬ್ಬಿರುವ ಗಾಸಿಪ್​ಗಳು ಹಲವಾರು. ಸೀಕ್ವೆಲ್​ನಲ್ಲಿ ನಾಯಕಿ ಪಾತ್ರ ಅಂತ್ಯವಾಗುತ್ತಂತೆ, ಪುಷ್ಪರಾಜ್​ ವಿದೇಶಕ್ಕೆ ಹೋಗ್ತಾನಂತೆ, ಸ್ಟಾರ್​ ನಾಯಕಿ ಐಟಂ ಡ್ಯಾನ್ಸ್​ ಮಾಡ್ತಾರಂತೆ.. ಹೀಗೆ ಅನೇಕ ಗಾಸಿಪ್​ಗಳು ಹಬ್ಬಿವೆ.

ಇದನ್ನೂ ಓದಿ: Allu Arjun: ‘ಪುಷ್ಪ 2’ ಪೋಸ್ಟರ್​ ರೀತಿ ವೇಷ ಧರಿಸಿ ಬಂದ ಸಂಸದ; ಅಲ್ಲು ಅರ್ಜುನ್​ ಅಭಿಮಾನಿಗಳಲ್ಲಿ ಹೆಚ್ಚಿತು ಕ್ರೇಜ್​

ಆದಷ್ಟು​ ಬೇಗ ‘ಪುಷ್ಪ 2’ ಸಿನಿಮಾವನ್ನು ನೋಡಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಅವರ ಆಸೆ ಈ ವರ್ಷ ಈಡೇರುವಂತೆ ಕಾಣುತ್ತಿಲ್ಲ. ಈ ಸಿನಿಮಾದಲ್ಲಿ ಘಟಾನುಘಟಿ ಕಲಾವಿದರು ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ಮಂದಣ್ಣ, ಫಹಾದ್​ ಫಾಸಿಲ್​, ಡಾಲಿ ಧನಂಜಯ್​ ಮುಂತಾದವರು ಅಭಿನಯಿಸುತ್ತಿದ್ದಾರೆ. ಚಿತ್ರದ ಶೂಟಿಂಗ್​ ಪ್ರಗತಿಯಲ್ಲಿದೆ. ಹೊಸ ಕಲಾವಿದರು ಕೂಡ ಪಾತ್ರವರ್ಗಕ್ಕೆ ಸೇರ್ಪಡೆ ಆಗುವ ಬಗ್ಗೆ ಸುದ್ದಿಗಳು ಕೇಳಿಬರುತ್ತಿವೆ.

ಇದನ್ನೂ ಓದಿ: Niharika Konidela: ‘ಪುಷ್ಪ 2’ ಚಿತ್ರದಲ್ಲಿ ನಿಹಾರಿಕಾ ಕೊನಿಡೆಲಾ? ಡಿವೋರ್ಸ್​ ಗುಮಾನಿ ಬೆನ್ನಲ್ಲೇ ಮತ್ತೊಂದು ಗುಸುಗುಸು

‘ಪುಷ್ಪ 2’ ಚಿತ್ರಕ್ಕೆ ಪ್ರತಿಷ್ಠಿತ ಮೈತ್ರಿ ಮೂವೀ ಮೇಕರ್ಸ್​ ಸಂಸ್ಥೆ ಬಂಡವಾಳ ಹೂಡುತ್ತಿದೆ. ಅದ್ದೂರಿ ಬಜೆಟ್​ನಲ್ಲಿ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ಶೂಟಿಂಗ್​ ಪೂರ್ಣಗೊಳ್ಳುವುದಕ್ಕೂ ಮುನ್ನ ಈ ಸಿನಿಮಾದ ಬಿಸ್ನೆಸ್​ ಆರಂಭ ಆಗಿದೆ ಎಂಬುದು ವಿಶೇಷ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us