‘ಕೆಜಿಎಫ್​ 2’ ಚಿತ್ರಕ್ಕಿಂತಲೂ ಒಂದು ಹೆಜ್ಜೆ ಮುಂದಿಟ್ಟ ‘ಪುಷ್ಪ 2’ ಸಿನಿಮಾ

|

Updated on: Apr 30, 2024 | 6:38 PM

ಸಾಮಾನ್ಯವಾಗಿ ಪ್ಯಾನ್​ ಇಂಡಿಯಾ ಸಿನಿಮಾಗಳು 5 ಭಾಷೆಯಲ್ಲಿ ತೆರೆಕಾಣುತ್ತವೆ. ಆದರೆ ‘ಪುಷ್ಪ 2’ ಚಿತ್ರತಂಡ ಇನ್ನೊಂದು ಭಾಷೆಯನ್ನು ಸೇರಿಸಿಕೊಂಡಿದೆ. ಆಗಸ್ಟ್ 15ರಂದು ಬಿಡುಗಡೆ ಆಗಲಿರುವ ಈ ಸಿನಿಮಾ ದೇಶಾದ್ಯಂತ ಅಬ್ಬರಿಸಲು ಸೂಕ್ತ ತಯಾರಿ ಮಾಡಿಕೊಳ್ಳುತ್ತಿದೆ. ಅಲ್ಲು ಅರ್ಜುನ್​ ಅವರ ವೃತ್ತಿ ಜೀವನದ ಅತಿ ದೊಡ್ಡ ಸಿನಿಮಾವಾಗಿ ಈ ಚಿತ್ರ ಮೂಡಿಬರುತ್ತಿದೆ.

‘ಕೆಜಿಎಫ್​ 2’ ಚಿತ್ರಕ್ಕಿಂತಲೂ ಒಂದು ಹೆಜ್ಜೆ ಮುಂದಿಟ್ಟ ‘ಪುಷ್ಪ 2’ ಸಿನಿಮಾ
ಅಲ್ಲು ಅರ್ಜುನ್​
Follow us on

ದಾಖಲೆಗಳನ್ನು ಮುರಿಯುವಲ್ಲಿ ‘ಪುಷ್ಪ’ ಮತ್ತು ‘ಕೆಜಿಎಫ್​’ ಸಿನಿಮಾಗಳ ನಡುವೆ ಒಂದು ಬಗೆಯ ಪರೋಕ್ಷ ಪೈಪೋಟಿ ಇದೆ. ‘ಕೆಜಿಎಫ್​’ ಸಿನಿಮಾಗಿಂತಲೂ ಹೆಚ್ಚು ಕಲೆಕ್ಷನ್​ ‘ಪುಷ್ಪ’ ಸಿನಿಮಾ ಮಾಡಿತ್ತು. ನಂತರ ಬಂದ ‘ಕೆಜಿಎಫ್​ 2’ (KGF: Chapter 2) ಸಿನಿಮಾ ಸಾವಿರಾರು ಕೋಟಿ ರೂಪಾಯಿ ಬಾಚಿಕೊಂಡಿತು. ಈಗ ‘ಪುಷ್ಪ 2’ ಸಿನಿಮಾ (Pushpa 2 Movie) ಎಷ್ಟು ಕಲೆಕ್ಷನ್​ ಮಾಡುತ್ತೆ ಎಂಬುದನ್ನು ಕಾದುನೋಡಬೇಕು. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಮಾಡುವ ವಿಚಾರದಲ್ಲಿ ‘ಕೆಜಿಎಫ್​ 2’ ಸಿನಿಮಾಗಿಂತಲೂ ಒಂದು ಹೆಜ್ಜೆ ಮುಂದಿಟ್ಟಿದೆ ‘ಪುಷ್ಪ 2’ (Pushpa 2) ಸಿನಿಮಾ. ಅದು ಹೇಗೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ..

ಇಷ್ಟು ದಿನಗಳ ಕಾಲ ಪ್ಯಾನ್​ ಇಂಡಿಯಾ ಸಿನಿಮಾ ಎಂದರೆ ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದ್ದವು. ‘ಕೆಜಿಎಫ್​ 2’, ‘ಆರ್​ಆರ್​ಆರ್​’ ಸಿನಿಮಾಗಳು ಕೂಡ ಇದೇ ಹಾದಿಯನ್ನು ಅನುಸರಿಸಿದ್ದವು. ಈಗ ‘ಪುಷ್ಪ 2’ ಸಿನಿಮಾ ಈ ಭಾಷೆಗಳ ಜೊತೆಗೆ ಬೆಂಗಾಲಿಗೂ ಡಬ್​ ಆಗಿದೆ. ಇದೇ ಮೊದಲ ಬಾರಿಗೆ ಬೆಂಗಾಲಿ ಭಾಷೆಯಲ್ಲಿ ತೆರೆಕಾಣುತ್ತಿರುವ ಪ್ಯಾನ್​ ಇಂಡಿಯಾ ಸಿನಿಮಾ ಎಂಬ ಖ್ಯಾತಿಗೆ ‘ಪುಷ್ಪ 2’ ಚಿತ್ರ ಒಳಗಾಗುತ್ತಿದೆ.

ಅದ್ದೂರಿ ಬಜೆಟ್​ನಲ್ಲಿ ‘ಪುಷ್ಪ 2’ ಸಿನಿಮಾ ನಿರ್ಮಾಣ ಆಗಿದೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ನೂರಾರು ಕೋಟಿ ರೂಪಾಯಿಯನ್ನು ಸುರಿದಿದೆ. ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದ ಕಲೆಕ್ಷನ್​ ಆಗಲೇಬೇಕು. ಅದಕ್ಕಾಗಿ ಎಲ್ಲ ಬಗೆಯ ಪ್ರಯತ್ನ ಮಾಡಲಾಗುತ್ತಿದೆ. ಬೆಂಗಾಲಿ ಭಾಷೆಯ ಪ್ರೇಕ್ಷಕರನ್ನೂ ಸೆಳೆಯಲು ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ. ದೇಶದ ಪ್ರಮುಖ ನಗರಗಳಿಗೆ ತೆರಳಿ ಪ್ರಚಾರ ಮಾಡಲಾಗುತ್ತದೆ.

ಇದನ್ನೂ ಓದಿ: ‘ಪುಷ್ಪ 2’ ಬಿಡುಗಡೆಗೂ ಮುನ್ನ 150 ಕೋಟಿ ರೂಪಾಯಿಗೆ ಹೆಚ್ಚಿತು ಅಲ್ಲು ಅರ್ಜುನ್​ ಸಂಬಳ

ಅಲ್ಲು ಅರ್ಜುನ್​​, ರಶ್ಮಿಕಾ ಮಂದಣ್ಣ, ಫಹಾದ್​ ಫಾಸಿಲ್​, ಡಾಲಿ ಧನಂಜಯ್​ ಮುಂತಾದವರು ‘ಪುಷ್ಪ 2’ ಸಿನಿಮಾದಲ್ಲಿ ನಟಿಸಿದ್ದು, ಸುಕುಮಾರ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈಗ ಪ್ರಚಾರ ಕಾರ್ಯ ಆರಂಭ ಆಗಿದೆ. ಮೇ 1ರಂದು ಈ ಸಿನಿಮಾದ ಟೈಟಲ್​ ಸಾಂಗ್​ ಬಿಡುಗಡೆ ಆಗಲಿದೆ. ಆ ಸಾಂಗ್​ ಬಂದ ಬಳಿಕ ಹೈಪ್ ಡಬಲ್​ ಆಗಲಿದೆ. ದೇವಿ ಶ್ರೀ ಪ್ರಸಾದ್​ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಆಗಸ್ಟ್​ 15ರಂದು ‘ಪುಷ್ಪ 2’ ತೆರೆಕಾಣಲಿದ್ದು, ವಿದೇಶದಲ್ಲೂ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಈಗಾಗಲೇ ವಿದೇಶದಲ್ಲಿ ವಿತರಣೆ ಹಕ್ಕುಗಳು ಭಾರಿ ಮೊತ್ತಕ್ಕೆ ಮಾರಾಟವಾದ ಬಗ್ಗೆ ಸುದ್ದಿಗಳು ಕೇಳಿಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.