ಶಾರುಖ್, ಸಲ್ಮಾನ್​ಗೂ ಸಿಗಲ್ಲ; ‘ಪುಷ್ಪ 2’ ಚಿತ್ರಕ್ಕೆ ಅಲ್ಲು ಅರ್ಜುನ್ 300 ಕೋಟಿ ರೂ. ಸಂಭಾವನೆ?  

Allu Arjun remuneration: ‘ಪುಷ್ಪ’ ಚಿತ್ರ 300 ಕೋಟಿ ಗಳಿಕೆ ಮಾಡಿರುವುದರಿಂದ ‘ಪುಷ್ಪ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡುವುದರಲ್ಲಿ ಅನುಮಾನವೇ ಇಲ್ಲ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ.

ಶಾರುಖ್, ಸಲ್ಮಾನ್​ಗೂ ಸಿಗಲ್ಲ; ‘ಪುಷ್ಪ 2’ ಚಿತ್ರಕ್ಕೆ ಅಲ್ಲು ಅರ್ಜುನ್ 300 ಕೋಟಿ ರೂ. ಸಂಭಾವನೆ?   
ಅಲ್ಲು ಅರ್ಜುನ್

Updated on: Nov 27, 2023 | 9:52 AM

ಅಲ್ಲು ಅರ್ಜುನ್ (Allu Arjun) ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಮೊದಲ ಪಾರ್ಟ್ ಯಶಸ್ಸು ಕಂಡಿರುವುದರಿಂದ ಎರಡನೇ ಪಾರ್ಟ್​ ಮೇಲೆ ನಿರ್ದೇಶಕರು ಹೆಚ್ಚು ಗಮನ ನೀಡಿದ್ದಾರೆ. ಅಲ್ಲು ಅರ್ಜುನ್ ಅವರು ಲುಕ್ ಕೂಡ ಬದಲಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈಗ ಅಲ್ಲು ಅರ್ಜುನ್ ಅವರು ಈ ಚಿತ್ರಕ್ಕಾಗಿ ರೆಕಾರ್ಡ್ ಬ್ರೇಕಿಂಗ್ ಸಂಭಾವನೆ ಪಡೆದಿದ್ದಾರೆ ಎಂದು ವರದಿ ಆಗಿದೆ. ಈ ವಿಚಾರದ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

‘ಪುಷ್ಪ’ ಸಿನಿಮಾ ಸಂದರ್ಭದಲ್ಲಿ ಅಲ್ಲು ಅರ್ಜುನ್ ಅವರ ಸಂಭಾವನೆ ನೂರು ಕೋಟಿ ರೂಪಾಯಿ ಇರಲಿಲ್ಲ. ಯಾವಾಗ ‘ಪುಷ್ಪ’ ಸಿನಿಮಾ ಯಶಸ್ಸು ಕಂಡಿತೋ ಅವರ ಲೆವೆಲ್ ಚೇಂಜ್ ಆಗಿದೆ. ‘ಪುಷ್ಪ’ ಚಿತ್ರ 300 ಕೋಟಿ ಗಳಿಕೆ ಮಾಡಿರುವುದರಿಂದ ‘ಪುಷ್ಪ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡುವುದರಲ್ಲಿ ಅನುಮಾನವೇ ಇಲ್ಲ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ. ಮೂಲಗಳ ಪ್ರಕಾರ ಅಲ್ಲು ಅರ್ಜುನ್ ಅವರಿಗೆ ಈ ಚಿತ್ರದಿಂದ 330 ಕೋಟಿ ರೂಪಾಯಿ ಸಂಭಾವನೆ ಸಿಗುತ್ತಿದೆ! ಇದು ಅಚ್ಚರಿ ಎನಿಸಿದರೂ ನಿಜ.

ಅಲ್ಲು ಅರ್ಜುನ್ ಅವರು ಈವರೆಗೆ ‘ಪುಷ್ಪ 2’ ಚಿತ್ರಕ್ಕೆ ಸಂಭಾವನೆ ಪಡೆದಿಲ್ಲ. ಬದಲಿಗೆ ಸಿನಿಮಾ ಬಾಕ್ಸ್ ಆಫೀಸ್ ಕಲೆಕ್ಷನ್, ಒಟಿಟಿ, ಸ್ಯಾಟಲೈಟ್ ಹಕ್ಕು, ಆಡಿಯೋ ರೈಟ್ಸ್ ಸೇರಿ ಎಲ್ಲಾ ಬಿಸ್ನೆಸ್​ನಿಂದ್ ಶೇ. 33 ಲಾಭ ಅಲ್ಲು ಅರ್ಜುನ್ ಪಾಲಾಗಲಿದೆ. ಈ ಚಿತ್ರ ಅನಾಯಸವಾಗಿ 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡಲಿದೆ. ಆ ಬಗ್ಗೆ ತಂಡದವರಿಗೂ ಕಾನ್ಫಿಡೆನ್ಸ್ ಇದೆ. ಹೀಗಾಗಿ, ಅಲ್ಲು ಅರ್ಜುನ್ ಅವರಿಗೆ ಕನಿಷ್ಠ 330 ಕೋಟಿ ರೂಪಾಯಿ ಸಿಗಲಿದೆ.

ಇದನ್ನೂ ಓದಿ: ಪ್ರಭಾಸ್, ಅಲ್ಲು ಅರ್ಜುನ್ ಬದಲಿಗೆ ಯಶ್ ಅನ್ನು ಆರಿಸಿದ ಬಾಲಿವುಡ್ ನಟಿ

ಅಲ್ಲು ಅರ್ಜುನ್ ಸಂಭಾವನೆ ವಿಚಾರ ಹೊಸ ದಾಖಲೆ ಎಂದು ಕರೆಯಲಾಗುತ್ತಿದೆ. ಶಾರುಖ್ ಖಾನ್, ಸಲ್ಮಾನ್ ಖಾನ್ ಕೂಡ ಇಷ್ಟು ದೊಡ್ಡ ಮಟ್ಟದ ಸಂಭಾವನೆ ಪಡೆದಿಲ್ಲ ಅನ್ನೋದು ಅನೇಕರ ಅಭಿಪ್ರಾಯ. ಸದ್ಯ ರಜನಿಕಾಂತ್ ಅವವರು ಹೊಸ ಸಿನಿಮಾಗೆ 210 ಕೋಟಿ ರೂಪಾಯಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಶಾರುಖ್ ಹಾಗೂ ಸಲ್ಲು ಸಂಭಾವನೆ 150-200 ಕೋಟಿ ರೂಪಾಯಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:52 am, Mon, 27 November 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us