AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಘಟನೆ ಬಳಿಕ ಮೊದಲ ಬಾರಿ ಸಿನಿಮಾ ಕಾರ್ಯಕ್ರಮಕ್ಕೆ ಅಲ್ಲು ಅರ್ಜುನ್. ‘ತಾಂಡೇಲ್’ ಪ್ರಿ ರಿಲೀಸ್ ಇವೆಂಟ್​ಗೆ ಅತಿಥಿ

Allu Arjun: ಸಂಧ್ಯಾ ಥಿಯೇಟರ್ ದುರ್ಘಟನೆ ಬಳಿಕ ಅಲ್ಲು ಅರ್ಜುನ್ ಯಾವುದೇ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ ಆ ದುರ್ಘಟನೆ ಬಳಿಕ ಇದೇ ಮೊದಲ ಬಾರಿಗೆ ಅಲ್ಲು ಅರ್ಜುನ್ ಸಿನಿಮಾ ಸಂಬಂಧಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ನಿರ್ಮಾಣದ ಹೊಸ ಸಿನಿಮಾದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಅಲ್ಲು ಅರ್ಜುನ್ ಭಾಗಿ ಆಗಲಿದ್ದಾರೆ.

ದುರ್ಘಟನೆ ಬಳಿಕ ಮೊದಲ ಬಾರಿ ಸಿನಿಮಾ ಕಾರ್ಯಕ್ರಮಕ್ಕೆ ಅಲ್ಲು ಅರ್ಜುನ್. ‘ತಾಂಡೇಲ್’ ಪ್ರಿ ರಿಲೀಸ್ ಇವೆಂಟ್​ಗೆ ಅತಿಥಿ
Allu Arjun
ಮಂಜುನಾಥ ಸಿ.
|

Updated on:Feb 01, 2025 | 3:16 PM

Share

ಅಲ್ಲು ಅರ್ಜುನ್ ಪಾಲಿಗೆ 2024 ಮಿಸ್ಟರಿ ವರ್ಷವಾಗಿತ್ತು. ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಹಲವು ಹೊಸ ದಾಖಲೆಗಳನ್ನು ಸೃಷ್ಟಿಸಿತು. ಆ ಖುಷಿಯನ್ನು ಸಂಭ್ರಮಿಸುವ ಮುಂಚೆಯೇ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ ಬಂಧನವಾಯ್ತು. ಆ ನಂತರ ಅಲ್ಲು ಅರ್ಜುನ್ ಮನೆ ಮೇಲೆ ದಾಳಿ ಮಾಡಲಾಯ್ತು, ಅಲ್ಲು ಅರ್ಜುನ್ ಬಗ್ಗೆ ಹಲವು ಟೀಕೆಗಳು ಕೇಳಿ ಬಂದವು. ಜಾಮೀನಿನ ಮೇಲೆ ಹೊರಗಿರುವ ಅಲ್ಲು ಅರ್ಜುನ್, ‘ಪುಷ್ಪ 2’ ಸಿನಿಮಾದ ಯಶಸ್ಸನ್ನು ಸರಿಯಾಗಿ ಸಂಭ್ರಮಿಸಲು ಸಹ ಆಗಲಿಲ್ಲ. ಸಂಧ್ಯಾ ಥಿಯೇಟರ್ ದುರ್ಘಟನೆ ಬಳಿಕ ಇದೇ ಮೊದಲ ಬಾರಿಗೆ ಅಲ್ಲು ಅರ್ಜುನ್ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗಿ ಆಗಲಿದ್ದಾರೆ. ಹೊಸ ಸಿನಿಮಾದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಅಲ್ಲು ಅರ್ಜುನ್ ಪಾಲ್ಗೊಳ್ಳಲಿದ್ದಾರೆ.

ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್ ನಿರ್ಮಾಣ ಮಾಡಿ, ನಟ ನಾಗ ಚೈತನ್ಯ, ನಟಿ ಸಾಯಿ ಪಲ್ಲವಿ ಒಟ್ಟಿಗೆ ನಟಿಸಿರುವ ‘ತಾಂಡೇಲ್’ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಂಧ್ಯಾ ಚಿತ್ರಮಂದಿರ ದುರ್ಘಟನೆ ಬಳಿಕ ಅಲ್ಲು ಅರ್ಜುನ್ ಭಾಗಿ ಆಗುತ್ತಿರುವ ಮೊದಲ ಸಾರ್ವಜನಿಕ ಕಾರ್ಯಕ್ರಮ ಇದಾಗಿದೆ. ಹಾಗಾಗಿ ಸಹಜವಾಗಿಯೇ ಕಾರ್ಯಕ್ರಮದ ಬಗ್ಗೆ ಭಾರಿ ಕುತೂಹಲ ಮೂಡಿದ್ದು, ವೇದಿಕೆ ಮೇಲೆ ಅಲ್ಲು ಅರ್ಜುನ್ ಏನು ಮಾತನಾಡಲಿದ್ದಾರೆ ಎಂಬ ಬಗ್ಗೆಯೂ ಅಭಿಮಾನಿಗಳು ಕಾತರರಾಗಿದ್ದಾರೆ.

ಇದನ್ನೂ ಓದಿ:ಪ್ರತಿ ಭಾನುವಾರ ಪೊಲೀಸ್ ಠಾಣೆಗೆ ಹಾಜರಿ: ಅಲ್ಲು ಅರ್ಜುನ್​ಗೆ ವಿನಾಯಿತಿ

ಹೈದರಾಬಾದ್​ನಲ್ಲಿಯೇ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ನಡೆಯಲಿದ್ದು, ಮೊದಲಿಗೆ ಬಹಿರಂಗ ಕಾರ್ಯಕ್ರಮ ಮಾಡಲು ಚಿತ್ರತಂಡ ಉದ್ದೇಶಿಸಿತ್ತು, ಆದರೆ ಪೊಲೀಸರು ಅನುಮತಿ ನಿರಾಕರಿಸಿದ ಕಾರಣ ಇದೀಗ ಹೈದರಾಬಾದ್​ನ ಅನ್ನಪೂರ್ಣ ಸ್ಟುಡಿಯೋನಲ್ಲಿ ಬೃಹತ್ ವೇದಿಕೆ ಹಾಕಿ ಕಾರ್ಯಕ್ರಮ ಮಾಡಲಾಗುತ್ತಿದೆ. ಸಂಧ್ಯಾ ಥಿಯೇಟರ್ ದುರ್ಘಟನೆ ಮರುಕಳಿಸಬಾರದು ಎಂಬ ಕಾರಣಕ್ಕೆ ಭಾರಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೊಲೀಸರ ಸಹಕಾರವನ್ನು ಸಹ ‘ತಾಂಡೇಲ್’ ಚಿತ್ರತಂಡ ಕೇಳಿದೆ. ಆಡಳಿತ ಪಕ್ಷದ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಏನಾದರೂ ಕಿತಾಪತಿ ಮಾಡಬಹುದು ಎಂಬ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

‘ತಾಂಡೇಲ್’ ಸಿನಿಮಾ ಮೀನುಗಾರನೊಬ್ಬನ ಕತೆಯನ್ನು ಒಳಗೊಂಡಿದೆ. ಆಳ ಸಮುದ್ರ ಮೀನುಗಾರಿಕೆಗೆ ವಿಶಾಖಪಟ್ಟಣಂನಿಂದ ಸಮುದ್ರದಲ್ಲಿ ತೆರಳುವಾತನನ್ನು ಪಾಕಿಸ್ತಾನದ ಸೈನಿಕರು ಹಿಡಿದು ಅಲ್ಲಿ ಆತನಿಗೆ ಚಿತ್ರಹಿಂಸೆ ನೀಡುತ್ತಾರೆ, ಅಲ್ಲಿಂದ ಆತ ಹೇಗೆ ತಪ್ಪಿಸಿಕೊಂಡು ಭಾರತಕ್ಕೆ ಬರುತ್ತಾನೆ ಎಂಬುದು ಸಿನಿಮಾದ ಕತೆ. ಸಿನಿಮಾದಲ್ಲಿ ನಾಯಕಿಯಾಗಿ ಸಾಯಿ ಪಲ್ಲವಿ ನಟಿಸಿದ್ದಾರೆ. ಸಿನಿಮಾ ಎರಡು ಹಾಡುಗಳು ಬಿಡುಗಡೆ ಆಗಿದ್ದು, ಆಗಲೇ ಹಿಟ್ ಎನಿಸಿಕೊಂಡಿವೆ. ಫೆಬ್ರವರಿ ಏಳರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Fri, 31 January 25

Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?