AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಚಿತ್ರರಂಗದಲ್ಲಿ ಅಪರೂಪದ ಸಾಧನೆ ಮಾಡಿದ ಅಲ್ಲು ಅರ್ಜುನ್; ಅವರು ನಡೆದು ಬಂದ ಹಾದಿ ಇಲ್ಲಿದೆ..

Allu Arjun Film Journey: ‘ಪುಷ್ಪ’ ಸಿನಿಮಾ 2021ರ ಡಿಸೆಂಬರ್​ನಲ್ಲಿ ರಿಲೀಸ್ ಆಯಿತು. ಈ ಚಿತ್ರ ನೋಡಿದ ಎಲ್ಲರೂ ಸಿನಿಮಾ ಬಗ್ಗೆ ಮೆಚ್ಚುಗೆ ತಿಳಿಸಿದರು. ಅಲ್ಲು ಅರ್ಜುನ್​ ಅವರ ಮೇಕೋವರ್ ಗಮನ ಸೆಳೆದಿತ್ತು. ಅವರ ಮ್ಯಾನರಿಸಂ ಈ ಚಿತ್ರದಲ್ಲಿ ಬೇರೆಯದೇ ರೀತಿ ಇತ್ತು. ಅವರ ನಟನೆಗೆ ಜನರು ಭೇಷ್ ಎಂದರು. ಈಗ ಅವರ ನಟನೆಗೆ ರಾಷ್ಟ್ರಪ್ರಶಸ್ತಿ ದೊರೆತಿದ್ದು ಎಲ್ಲರಿಗೂ ಖುಷಿಕೊಟ್ಟಿದೆ.

ತೆಲುಗು ಚಿತ್ರರಂಗದಲ್ಲಿ ಅಪರೂಪದ ಸಾಧನೆ ಮಾಡಿದ ಅಲ್ಲು ಅರ್ಜುನ್; ಅವರು ನಡೆದು ಬಂದ ಹಾದಿ ಇಲ್ಲಿದೆ..
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Aug 25, 2023 | 10:52 AM

Share

69ನೇ ಸಾಲಿನ ರಾಷ್ಟ್ರ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಆಗಸ್ಟ್ 24ರಂದು ಘೋಷಣೆ ಮಾಡಲಾಯಿತು. ಅಲ್ಲು ಅರ್ಜುನ್ ಅವರಿಗೆ ‘ಪುಷ್ಪ’ ಸಿನಿಮಾ (Pushpa Movie) ನಟನೆಗೆ ‘ಅತ್ಯುತ್ತಮ ನಟ ಪ್ರಶಸ್ತಿ’ ಸಿಕ್ಕಿದೆ. ತೆಲುಗು ಕಲಾವಿದರೊಬ್ಬರು ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆಯುತ್ತಿರುವುದು ಇದೇ ಮೊದಲು. ಈ ಮೂಲಕ ಅಲ್ಲು ಅರ್ಜುನ್ ಅವರು ಇತಿಹಾಸ ಬರೆದಿದ್ದಾರೆ. ಅವರಿಗೆ ಎಲ್ಲಾ ಕಡೆಗಳಿಂದ ಶುಭಾಶಯ ಬರುತ್ತಿದೆ. ಈ ಪ್ರಶಸ್ತಿಯಿಂದ ಅವರ ಚೈತನ್ಯ ಹೆಚ್ಚಿದೆ. ಅಲ್ಲು ಅರ್ಜುನ್ ಸಿನಿಪಯಣದ ಬಗ್ಗೆ ಇಲ್ಲಿದೆ ಮಾಹಿತಿ.

‘ಪುಷ್ಪ’ ಸಿನಿಮಾ 2021ರ ಡಿಸೆಂಬರ್​ನಲ್ಲಿ ರಿಲೀಸ್ ಆಯಿತು. ಈ ಚಿತ್ರ ನೋಡಿದ ಎಲ್ಲರೂ ಸಿನಿಮಾ ಬಗ್ಗೆ ಮೆಚ್ಚುಗೆ ತಿಳಿಸಿದರು. ಅಲ್ಲು ಅರ್ಜುನ್​ ಅವರ ಮೇಕೋವರ್ ಗಮನ ಸೆಳೆದಿತ್ತು. ಅವರ ಮ್ಯಾನರಿಸಂ ಈ ಚಿತ್ರದಲ್ಲಿ ಬೇರೆಯದೇ ರೀತಿ ಇತ್ತು. ಅವರ ನಟನೆಗೆ ಜನರು ಭೇಷ್ ಎಂದರು. ಈಗ ಅವರ ನಟನೆಗೆ ರಾಷ್ಟ್ರಪ್ರಶಸ್ತಿ ದೊರೆತಿದ್ದು ಎಲ್ಲರಿಗೂ ಖುಷಿಕೊಟ್ಟಿದೆ. ಈ ಮೂಲಕ ತಾವು ಅದ್ಭುತ ನಟ ಎಂಬುದನ್ನು ಅವರು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.

ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್. ಹಲವು ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅಲ್ಲು ಅರ್ಜುನ್ ಅವರು ಜನಿಸಿದ್ದು ಏಪ್ರಿಲ್ 8, 1993ರಂದು. ಸಿನಿಮಾ ಹಿನ್ನೆಲೆ ಇರುವು ಕುಟುಂಬದಲ್ಲಿ ಹುಟ್ಟಿದ್ದರಿಂದ ಸಹಜವಾಗಿಯೇ ಅವರಿಗೆ ಸುಲಭದಲ್ಲಿ ಆಫರ್​ಗಳು ಸಿಕ್ಕವು. ಆದರೆ, ಅವರು ತಂದೆಯ ನೆರಳಲ್ಲಿ ಬೆಳೆಯದೇ ಪ್ರತ್ಯೇಕವಾಗಿ ಗುರುತಿಸಿಕೊಂಡರು. ಬಾಲ ನಟನಾಗಿ ಚಿತ್ರರಂಗಕ್ಕೆ ಬಂದ ಅಲ್ಲು ಅರ್ಜುನ್ ಅವರು, ಬಳಿಕ ‘ಗಂಗೋತ್ರಿ’ (2003) ಚಿತ್ರದ ಮೂಲಕ ಹೀರೋ ಆದರು. ಈ ಚಿತ್ರವನ್ನು ರಾಘವೇಂದ್ರ ರಾವ್ ನಿರ್ದೇಶನ ಮಾಡಿದ್ದರು. 2004ರಲ್ಲಿ ರಿಲೀಸ್ ಆದ ‘ಆರ್ಯ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಸುಕುಮಾರ್. ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಲು ಈ ಚಿತ್ರ ಸಹಕಾರಿ ಆಯಿತು. ಬಳಿಕ ‘ಬನ್ನಿ’, ‘ರೇಸ್​ ಗುರಮ್’, ‘ಸರೈನೋಡು’, ‘ಆರ್ಯ 2’, ‘ವೇದಂ’, ‘ಅಲಾ ವೈಕುಂಟಪುರಮುಲೋ’ ಸೇರಿ ಅನೇಕ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ.

ಅಲ್ಲು ಅರ್ಜುನ್ ತೆಲುಗು ಮಂದಿಗೆ ಪರಿಚಿತರಾಗಿದ್ದರು. ಅವರ ಯಾವ ಚಿತ್ರಗಳೂ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿರಲಿಲ್ಲ. ‘ಪುಷ್ಪ’ ಸಿನಿಮಾ ತೆಲುಗು ಜೊತೆ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿಗೆ ಡಬ್ ಆಗಿ ರಿಲೀಸ್ ಆಯಿತು. ಪುಷ್ಪರಾಜ್ ಪಾತ್ರದಲ್ಲಿ ಅಲ್ಲು ಅರ್ಜುನ್ ಮಿಂಚಿದರು. ಈ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ 300 ಕೋಟಿ ರೂಪಾಯಿ ದಾಟಿದೆ. ಹಿಂದಿ ಒಂದರಲ್ಲೇ ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರದಿಂದ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದರು.

ಇದನ್ನೂ ಓದಿ: Allu Arjun: ‘ಜವಾನ್​’ ಸಿನಿಮಾದಲ್ಲಿ ನಟಿಸಲ್ವಾ ಅಲ್ಲು ಅರ್ಜುನ್​? ಶಾರುಖ್​ ಖಾನ್​ ಚಿತ್ರದ ಬಗ್ಗೆ ಹತ್ತಾರು ಗಾಸಿಪ್​

ಅಲ್ಲು ಅರ್ಜುನ್ ಅವರು ಎಷ್ಟೇ ದೊಡ್ಡ ಯಶಸ್ಸು ಪಡದರೂ ಗರ್ವದಿಂದ ಬೀಗಿದವರಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಫೋಟೋ ಹಾಗೂ ವಿಡಿಯೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. ಅಲ್ಲು ಅರ್ಜುನ್ ಅವರು ಈ ಮೊದಲು ಐದು ಫಿಲ್ಮ್​ಫೇರ್, ಎರಡು ನಂದಿ ಅವಾರ್ಡ್ ಪಡೆದಿದ್ದಾರೆ.  ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಇನ್ನೂ ಕೆಲವು ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಸಿನಿಮಾದ ರಿಲೀಸ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್