AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್ ಮುದ್ದಿನ ಅಜ್ಜಿ ಕನಕರತ್ನಂ ನಿಧನ; ಮೈಸೂರಲ್ಲಿ ಶೂಟ್ ಬಿಟ್ಟು ತೆರಳಿದ ರಾಮ್ ಚರಣ್  

ಅಲ್ಲು ಅರ್ಜುನ್ ಅವರ ಅಜ್ಜಿ ಅಲ್ಲು ಕನಕರತ್ನಂ ಅವರು ಆಗಸ್ಟ್ 30 ರಂದು 94 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಸಿನಿಮಾ ಶೂಟಿಂಗ್‌ನಿಂದ ಮುಂಬೈನಲ್ಲಿದ್ದ ಅಲ್ಲು ಅರ್ಜುನ್ ಅಜ್ಜಿಯ ಸಾವಿನ ಸುದ್ದಿ ಕೇಳಿ ಹೈದರಾಬಾದ್‌ಗೆ ತೆರಳುತ್ತಿದ್ದಾರೆ.

ಅಲ್ಲು ಅರ್ಜುನ್ ಮುದ್ದಿನ ಅಜ್ಜಿ ಕನಕರತ್ನಂ ನಿಧನ; ಮೈಸೂರಲ್ಲಿ ಶೂಟ್ ಬಿಟ್ಟು ತೆರಳಿದ ರಾಮ್ ಚರಣ್  
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on:Aug 30, 2025 | 12:52 PM

Share

ಅಲ್ಲು ಅರ್ಜುನ್ (Allu Arjun) ಅಜ್ಜಿ ಅಲ್ಲು ಕನಕರತ್ನಂ ಅವರು ಇಂದು (ಆಗಸ್ಟ್ 30) ನಿಧನ ಹೊಂದಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಕನಕರತ್ನಂ ಮಗ ಅಲ್ಲು ಅರವಿಂದ್ ಮನೆಯಲ್ಲಿ ಅಂತಿಮ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎನ್ನಲಾಗಿದೆ. ಅಂತಿಮ ವಿಧಿ ವಿಧಾನಗಳು ಇಂದು ಸಂಜೆ ನಡೆಯುವ ಸಾಧ್ಯತೆ ಇದೆ. ಕನಕರತ್ನಂ ಪತಿ ಅಲ್ಲು ರಾಮಲಿಂಗಯ್ಯ ಅವರು ತೆಲುಗಿನ ಲೆಜೆಂಡತಿ ನಟ ಆಗಿದ್ದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಇವರು 2004ರಲ್ಲಿ ನಿಧನ ಹೊಂದಿದ್ದರು.

ಕನಕರತ್ನಂ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಶನಿವಾರ ಅವರು ಕೊನೆಯುಸಿರು ಎಳೆದಿದ್ದಾರೆ. ಸದ್ಯ ಅಲ್ಲು ಅರ್ಜುನ್ ಅವರು ಸಿನಿಮಾ ಶೂಟಿಂಗ್​ಗಾಗಿ ಮುಂಬೈನಲ್ಲಿ ಇದ್ದಾರೆ. ಅಜ್ಜಿ ಸಾವಿನ ಸುದ್ದಿ ಕೇಳಿದ ಬಳಿಕ ಶೂಟ್​ನ ಅರ್ಧಕ್ಕೆ ನಿಲ್ಲಿಸಿ ಹೈದಾರಾಬಾದ್​ಗೆ ಮರಳುತ್ತಿದ್ದಾರೆ. ಮಧ್ಯಾಹ್ನದ ವೇಳೆಗೆ ಅವರು ಹೈದರಾಬಾದ್ ತಲುಪೋ ಸಾಧ್ಯತೆ ಇದೆ.

ರಾಮ್ ಚರಣ್ ಅವರು ಕೂಡ ಮೈಸೂರಿನಲ್ಲಿ ಶೂಟಿಂಗ್ ಮಾಡುತ್ತಿದ್ದಾರೆ. ಬುಚಿ ಬಾಬು ಸನಾ ಸಿನಿಮಾ ‘ಪೆದ್ದಿ’ಯ ಭಾಗ ಆಗಿದ್ದಾರೆ. ಅವರು ಕೂಡ ಶೂಟ್ ಕ್ಯಾನ್ಸಲ್ ಮಾಡಿ ಹೈದರಾಬಾದ್​ಗೆ ಬರುತ್ತಿದ್ದಾರೆ.  ಸಂಜೆ ವೇಳೆ ಅಂತಿಮ ವಿಧಿ ವಿಧಾನ ನಡೆಯಲಿದೆ.

ಇದನ್ನೂ ಓದಿ
Image
ಗರ್ಲ್​ಫ್ರೆಂಡ್​ಗೆ ಮನೆ ಕೊಟ್ಟು ಬಾಡಿಗೆ ಪಡೆದ ಹೃತಿಕ್ ರೋಷನ್
Image
ಸೋಶಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ ರಾಜ್ ಬಿ. ಶೆಟ್ಟಿ; ಕಾರಣ ಏನು?
Image
ಧೂಳೆಬ್ಬಿಸಿದ ರಾಜ್ ಹಂಚಿಕೆ ಮಾಡ್ತಿರೋ ‘ಲೋಕಃ’ ಸಿನಿಮಾ; 9.5 ರೇಟಿಂಗ್
Image
Bigg Boss ಟೈಟಲ್​ನಲ್ಲಿ ಹೆಚ್ಚುವರಿ G ಏಕೆ? ಸಂಖ್ಯಾಶಾಸ್ತ್ರದ ಲೆಕ್ಕಾಚಾರ

ರಾಮ್ ಚರಣ್ ಹಾಗೂ ಅಲ್ಲು ಅರ್ಜುನ್ ಸೋದರ ಸಂಬಂಧಿಗಳು. ಅಲ್ಲು ಅರವಿಂದ್ ಸಹೋದರಿಯನ್ನು ಚಿರಂಜೀವಿಗೆ ಕೊಟ್ಟು ವಿವಾಹ ಮಾಡಲಾಗಿದೆ. ಚಿರಂಜೀವಿ ಅವರು ಸದ್ಯ ಅಲ್ಲು ಅರವಿಂದ್ ಜೊತೆ ಇದ್ದಾರೆ. ಅಂತಿಮ ವಿಧಿ ವಿಧಾನಕ್ಕೆ ಸಿದ್ಧತೆ ಮಾಡಲಾಗುತ್ತಿದೆ.  ಪವನ್ ಕಲ್ಯಾಣ್ ಹಾಗೂ ನಾಗ ಬಾಬು ವಿಶಾಖಪಟ್ಟಣದಲ್ಲಿ ಇದ್ದಾರೆ. ಅವರು ಸಾರ್ವಜನಿಕ ರ‍್ಯಾಲಿಯೊಂದರಲ್ಲಿ ಭಾಗಿ ಆಗಿದ್ದಾರೆ. ಹೀಗಾಗಿ, ಅವರು ಭಾನುವಾರ ಬಂದು ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್-ಅಟ್ಲಿ ಸಿನಿಮಾಕ್ಕೆ ಮತ್ತೊಬ್ಬ ಸ್ಟಾರ್ ನಟ ಎಂಟ್ರಿ

ಕನಕರತ್ನಂ ಅವರು ಅಲ್ಲು ಅರ್ಜುನ್​ನ ಮುದ್ದಿನ ಅಜ್ಜಿ ಆಗಿದ್ದರು.. ‘ಪಷ್ಪ 2’ ಚಿತ್ರದ ಶೋ ವೇಳೆ ನಡೆದ ಕಾಲ್ತುಳಿತದಲ್ಲಿ ಅಲ್ಲು ಅರ್ಜುನ್ ಜೈಲಿಗೆ ಹೋಗಿ ಬಂದಿದ್ದರು. ಅವರು ಮನೆಗೆ ಮರಳಿದಾಗ ಕನಕರತ್ನಂ ಭಾವುಕರಾಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:37 pm, Sat, 30 August 25

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್