Altina Schinasi: ಅಮೆರಿಕದ ಕಿರು ಸಾಕ್ಷ್ಯಚಿತ್ರ ನಿರ್ಮಾಪಕಿ ಆಲ್ಟಿನಾಗೆ ಗೂಗಲ್ ಡೂಡಲ್ ಗೌರವ ಸಲ್ಲಿಕೆ

ಕ್ಯಾಟ್ ಐ ಕನ್ನಡಕದ ಫ್ರೇಮ್​ನ ಕಂಡು ಹಿಡಿದ ಖ್ಯಾತಿ ಆಲ್ಟಿನಾಗೆ ಸಲ್ಲಿಕೆ ಆಗುತ್ತದೆ. ವಿವಿಧ ಕ್ಷೇತ್ರದಲ್ಲಿ ಅವರು ಗುರುತಿಸಿಕೊಂಡಿದ್ದಾರೆ.

Altina Schinasi: ಅಮೆರಿಕದ ಕಿರು ಸಾಕ್ಷ್ಯಚಿತ್ರ ನಿರ್ಮಾಪಕಿ ಆಲ್ಟಿನಾಗೆ ಗೂಗಲ್ ಡೂಡಲ್ ಗೌರವ ಸಲ್ಲಿಕೆ
ಆಲ್ಟಿನಾ
Follow us
ರಾಜೇಶ್ ದುಗ್ಗುಮನೆ
|

Updated on: Aug 04, 2023 | 10:05 AM

ಅಮೆರಿಕದ ಡಿಸೈನರ್, ಕಿರು ಸಾಕ್ಷ್ಯಚಿತ್ರ ನಿರ್ಮಾಪಕಿ ಆಲ್ಟಿನಾ ಚಿನಾಸಿಗೆ (Altina Schinasi) ಇಂದು (ಆಗಸ್ಟ್ 4) ಜನ್ಮದಿನ. ಈ ವಿಶೇಷ ದಿನದಂದು ಗೂಗಲ್​ ಕಡೆಯಿಂದ ಅವರಿಗೆ ಗೌರವ ಸಲ್ಲಿಕೆ ಆಗಿದೆ. ಡೂಡಲ್​​ ಮೂಲಕ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗಿದೆ. ಫ್ಯಾಷನ್​ ಲೋಕಕ್ಕೆ ಅವರು ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಸೋಶಿಯಲ್ ಮೀಡಿಯಾದಲ್ಲೂ (Social Media) ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. 1907ರಲ್ಲಿ ಆಲ್ಟಿನಾ ಜನಿಸಿದ್ದರು. ಅವರು ಹುಟ್ಟಿದ್ದು ಅಮೆರಿಕದ ನ್ಯೂಯಾರ್ಕ್​ ನಗರದಲ್ಲಿ.

ಕ್ಯಾಟ್ ಐ ಕನ್ನಡಕದ ಫ್ರೇಮ್​ನ ಕಂಡು ಹಿಡಿದ ಖ್ಯಾತಿ ಆಲ್ಟಿನಾಗೆ ಸಲ್ಲಿಕೆ ಆಗುತ್ತದೆ. ವಿವಿಧ ಕ್ಷೇತ್ರದಲ್ಲಿ ಅವರು ಗುರುತಿಸಿಕೊಂಡಿದ್ದಾರೆ. ‘ಜಾರ್ಜ್ ಗ್ರೋಸ್ಜ್ ಇಂಟರ್​ಗಂಮ್’ ಹೆಸರಿನ ಕಿರು ಸಾಕ್ಷ್ಯಚಿತ್ರವನ್ನು  ನಿರ್ಮಾಣ ಮಾಡಿದರು. ಈ ಕಿರುಚಿತ್ರ 1960ರಲ್ಲಿ ರಿಲೀಸ್ ಆಯಿತು. ಇದು ಅಕಾಡೆಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿತ್ತು. ವೆನಿಸ್ ಚಲನಚಿತ್ರೋತ್ಸವದಲ್ಲಿ ಮೊದಲ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಕಿರುಸಾಕ್ಷ್ಯ ಚಿತ್ರವನ್ನು ಅಕಾಡೆಮಿಯವರು ಸಂರಕ್ಷಿಸಿ ಇಟ್ಟಿದ್ದಾರೆ.

ಇದನ್ನೂ ಓದಿ: ಸಿನಿಪ್ರಿಯರಿಗೆ ಈ ಬಾರಿಯ ದಸರಾ ಹಬ್ಬ ಭರ್ಜರಿ; ಯಾವೆಲ್ಲ ಚಿತ್ರಗಳು ರಿಲೀಸ್?

ಮಹಿಳೆಯರಿಗೆ ಹೆಚ್ಚಿನ ಡಿಸೈನ್​ನ ಕನ್ನಡಕ ಇಲ್ಲ ಎಂಬುದು ಆಲ್ಟಿನಾ ಗಮನಿಸಿದರು. ಈ ಕಾರಣಕ್ಕೆ ಅವರು ಬೆಕ್ಕಿನ ಕಣ್ಣಿನ ಮಾದರಿಯ ಕನ್ನಡಕವನ್ನು ಕಂಡು ಹಿಡಿದರು. ಇಂದಿಗೂ ಈ ಕನ್ನಡಕ ಸಾಕಷ್ಟು ಖ್ಯಾತಿ ಪಡೆದುಕೊಂಡಿದೆ. ಇವರು ಅನೇಕ ಮಹಿಳೆಯರಿಗೆ ಸ್ಫೂರ್ತಿ ಆಗಿದ್ದಾರೆ. 1999ರಲ್ಲಿ ಆಗಸ್ಟ್ 19ರಂದು ಮೃತಪಟ್ಟರು. ಆಗ ಅವರಿಗೆ 92 ವರ್ಷ ವಯಸ್ಸಾಗಿತ್ತು. ಅವರು ನಮ್ಮನ್ನು ಅಗಲಿದರೂ ಅವರು ಮಾಡಿದ ಕೆಲಸ ಹಾಗೆಯೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್