‘ಅಮರನ್’ ಚಿತ್ರಕ್ಕಾಗಿ ಶಿವಕಾರ್ತಿಕೇಯನ್ ಹಾಗೂ ಸಾಯಿ ಪಲ್ಲವಿ ಪಡೆದ ಸಂಭಾವನೆ ಎಷ್ಟು?

Amaran Movie: ತಮಿಳಿನ ಶಿವಕಾರ್ತಿಕೇಯನ್, ಸಾಯಿ ಪಲ್ಲವಿ ನಟಿಸಿರುವ ‘ಅಮರನ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಸಿನಿಮಾಕ್ಕೆ ಶಿವಕಾರ್ತಿಕೇಯನ್ ಹಾಗೂ ಸಾಯಿ ಪಲ್ಲವಿ ಪಡೆದಿರುವ ಸಂಭಾವನೆ ಎಷ್ಟು ಕೋಟಿ?

‘ಅಮರನ್’ ಚಿತ್ರಕ್ಕಾಗಿ ಶಿವಕಾರ್ತಿಕೇಯನ್ ಹಾಗೂ ಸಾಯಿ ಪಲ್ಲವಿ ಪಡೆದ ಸಂಭಾವನೆ ಎಷ್ಟು?
Follow us
ಮಂಜುನಾಥ ಸಿ.
|

Updated on: Nov 17, 2024 | 12:00 PM

ದೀಪಾವಳಿ ಉಡುಗೊರೆಯಾಗಿ ಅಕ್ಟೋಬರ್ 31 ರಂದು ಬಿಡುಗಡೆಯಾದ ಅಮರನ್ ಚಿತ್ರ ಸೂಪರ್ ಹಿಟ್ ಆಗಿದ್ದು ಗೊತ್ತೇ ಇದೆ. ಮೇಜರ್ ಮುಕುಂದ್ ವರದರಾಜನ್ ಅವರ ಜೀವನಾಧಾರಿತ ಈ ಚಿತ್ರಕ್ಕೆ ಎಲ್ಲಾ ವರ್ಗದ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಮರನ್ ಈ ವರ್ಷ ತಮಿಳಿನಲ್ಲಿ ದೊಡ್ಡ ಹಿಟ್ ಆಗಿದೆ. ಈ ಚಿತ್ರವು ತೆಲುಗಿನಲ್ಲೂ ಸಕಾರಾತ್ಮಕ ವಿಮರ್ಶೆಗಳನ್ನು ಚಿತ್ರ ಪಡೆದಿದೆ. ಕಾಲಿವುಡ್ ಹೀರೋ ಶಿವಕಾರ್ತಿಕೇಯನ್ ಅವರು ಮುಕುಂದ್ ಪಾತ್ರದಲ್ಲಿ ನಟಿಸಿದ್ದರೆ, ಸಾಯಿ ಪಲ್ಲವಿ ಅವರ ಪತ್ನಿ ಇಂದೂ ರೆಬೆಕಾ ವರ್ಗೀಸ್ ಪಾತ್ರದಲ್ಲಿ ನಟಿಸಿದ್ದಾರೆ. ನಿರ್ದೇಶಕ ರಾಜ್‌ಕುಮಾರ್ ಪೆರಿಯಸ್ವಾಮಿ ನಿರ್ದೇಶನದ ಈ ಚಿತ್ರ 175 ಕೋಟಿ ರೂಪಾಯಿ ಸಂಗ್ರಹಿಸಿದೆ. ಶಿವಕಾರ್ತಿಕೇಯನ್ ಅವರ ವೃತ್ತಿಜೀವನದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಇದಾಗಿದೆ. ಇವರ ಸಂಭಾವನೆ ಬಗ್ಗೆ ಈ ಸ್ಟೋರಿಯಲ್ಲಿ ನೋಡೋಣ.

ಈ ಸಿನಿಮಾ ಹಿಟ್ ಆದ ಬಳಿಕ ಸದ್ಯ ಸಾಯಿಪಲ್ಲವಿ ಹಾಗೂ ಶಿವಕಾರ್ತಿಕೇಯನ್ಗೆ ಸಾಕಷ್ಟು ಆಫರ್ಗಳು ಬರುತ್ತಿವೆ. ಶಿವಕಾರ್ತಿಕೇಯನ್ ಅವರು ಚಲನಚಿತ್ರಗಳಿಗೆ ಪ್ರವೇಶಿಸುವ ಮೊದಲು ತಮಿಳು ಟಿವಿ ನಿರೂಪಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 2012ರಲ್ಲಿ ಪಾಂಡಿರಾಜ್ ನಿರ್ದೇಶನದ ‘ಮರೀನಾ’ ಚಿತ್ರದ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡಿದರು. ಈ ಸಿನಿಮಾದ ನಂತರ 3 ಸಿನಿಮಾಗಳಲ್ಲಿ ಪೋಷಕ ನಟನಾಗಿ ನಟಿಸಿದ್ದು, ನಾಯಕನಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮಾನ್ ಕರಾಟೆ, ಖಾಕಿ ಸತ್ತೈ, ರಜನಿ ಮುರುಗನ್, ರೆಮೋ ಮುಂತಾದ ಸಿನಿಮಾಗಳು ಜನಮನ್ನಣೆ ತಂದುಕೊಟ್ಟವು. ಸದ್ಯ ಸುಧಾ ಕೊಂಗರ ನಿರ್ದೇಶನದಲ್ಲಿ ‘ಪುರನಾನೂರು’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ:‘ಅಮರನ್’ ಸಿನಿಮಾ ಪ್ರದರ್ಶಿಸುತ್ತಿದ್ದ ಚಿತ್ರಮಂದಿರದ ಮೇಲೆ ಪೆಟ್ರೋಲ್ ಬಾಂಬ್ ದಾಳಿ

‘ಪ್ರೇಮಂ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪರಿಚಯವಾದ ಸಾಯಿ ಪಲ್ಲವಿ ನಂತರ ‘ಫಿದಾ’, ‘ಶ್ಯಾಮ್ ಸಿಂಘರಾಯ್’, ‘ವಿರಾಟಪರ್ವಂ’ ಚಿತ್ರಗಳಲ್ಲಿ ನಟಿಸಿದ್ದರು. ತೆಲುಗು ಮತ್ತು ತಮಿಳಿನಲ್ಲಿ ಅನೇಕ ಹಿಟ್‌ಗಳನ್ನು ನೀಡಿದರು. ಇದೀಗ ಅಮರನ್ ಚಿತ್ರದ ಮೂಲಕ ಮತ್ತೊಮ್ಮೆ ಪ್ರೇಕ್ಷಕರ ಮನಗೆದ್ದಿದ್ದಾರೆ.

ಶಿವಕಾರ್ತಿಕೇಯನ್ ಈ ಚಿತ್ರಕ್ಕಾಗಿ 3 ಕೋಟಿ ರೂ ಪಡೆದಿದ್ದಾರೆ. ಸಾಯಿ ಪಲ್ಲವಿ ತಮ್ಮ ಸಂಭಾವನೆ ಹೆಚ್ಚಿಸಿಕೊಂಡಿದ್ದು, 6 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ
ಮಣಿಪುರ ಹಿಂಸಾಚಾರ, ಮುಖ್ಯಮಂತ್ರಿ, ಶಾಸಕರ ಮನೆಗೆ ನುಗ್ಗಲು ಯತ್ನ
ಮಣಿಪುರ ಹಿಂಸಾಚಾರ, ಮುಖ್ಯಮಂತ್ರಿ, ಶಾಸಕರ ಮನೆಗೆ ನುಗ್ಗಲು ಯತ್ನ
ಪತಿ-ಪತ್ನಿ ಒಂದೇ ರಾಶಿಯವರಾಗಿದ್ದರೆ ಏನರ್ಥ? ವಿಡಿಯೋ ನೋಡಿ
ಪತಿ-ಪತ್ನಿ ಒಂದೇ ರಾಶಿಯವರಾಗಿದ್ದರೆ ಏನರ್ಥ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 18 ರಿಂದ 24ರವರೆಗೆ ವಾರ ಭವಿಷ್
ವಾರ ಭವಿಷ್ಯ: ನವೆಂಬರ್​ 18 ರಿಂದ 24ರವರೆಗೆ ವಾರ ಭವಿಷ್
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಖರೀದಿಸುವ ಯೋಗವಿದೆ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಖರೀದಿಸುವ ಯೋಗವಿದೆ
ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ
ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್