ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ

Jana Nayagan Relese Date: ದಳಪತಿ ವಿಜಯ್ ಅವರ 'ಜನ ನಾಯಗನ್' ಚಿತ್ರದ ಬಿಡುಗಡೆಗೆ ತೀವ್ರ ಸಂಕಷ್ಟ ಎದುರಾಗಿದೆ. ಸೆನ್ಸಾರ್ ಮಂಡಳಿ ಮಾಡಿದ ಸಮಸ್ಯೆ ಇದಕ್ಕೆ ಕಾರಣ. ಈ ಬೆನ್ನಲ್ಲೇ ಚಿತ್ರಕ್ಕೆ ಒಟಿಟಿ ಪ್ಲಾಟ್‌ಫಾರ್ಮ್‌ನಿಂದ (ಅಮೇಜಾನ್ ಪ್ರೈಮ್) ಒತ್ತಡ ಹೆಚ್ಚಾಗಿದೆ. ಚುನಾವಣಾ ದಿನಾಂಕ ಘೋಷಣೆಯಾದಲ್ಲಿ ಬಿಡುಗಡೆ ಇನ್ನಷ್ಟು ಕಷ್ಟವಾಗಲಿದೆ.

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ
ಜನ ನಾಯಗನ್

Updated on: Jan 22, 2026 | 9:04 AM

ಜನ ನಾಯಗನ್ (Jana Nayagan) ಸಿನಿಮಾ ಸಂಕಷ್ಟದಲ್ಲಿದೆ. ಈ ಚಿತ್ರ ಜನವರಿ 9ರಂದೇ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಮಂಡಳಿಯಿಂದ ಆದ ಸಮಸ್ಯೆಯಿಂದ ತೊಂದರೆ ಎದುರಾಗುತ್ತಿದೆ.ಸಿನಿಮಾ ರಿಲೀಸ್ ಆದರೆ ಸಾಕು ಎಂಬ ಪರಿಸ್ಥಿತಿಯಲ್ಲಿ ಫ್ಯಾನ್ಸ್ ಇದ್ದಾರೆ. ಈಗ ಚಿತ್ರ ಒಟಿಟಿ ಪ್ಲಾಟ್​​ಫಾರ್ಮ್ ಕಡೆಯಿಂದ ಸಂಕಷ್ಟ ಎದುರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ಇದು ಚಿತ್ರತಂಡದ ಚಿಂತೆ ಹೆಚ್ಚಿಸಿದೆ. ‘ಜನ ನಾಯಗನ್’ ಸಿನಿಮಾ ದಳಪತಿ ವಿಜಯ್ ವೃತ್ತಿ ಜೀವನದ ಕೊನೆಯ ಸಿನಿಮಾ. ಇದಾದ ಬಳಿಕ ಅವರು ರಾಜಕೀಯದ ಕಡೆ ಹೊರಳಲಿದ್ದಾರೆ. ಈಗಾಗಲೇ ಅವರು ಪಕ್ಷ ಕೂಡ ಆರಂಭಿಸಿದ್ದು, ಚುನಾವಣಾ ರ್ಯಾಲಿ ನಡೆಸುತ್ತಿದ್ದಾರೆ.

ಏಷ್ಯಾನೆಟ್ ನ್ಯೂಸ್ ವರದಿ ಪ್ರಕಾರ ಅಮೇಜಾನ್ ಪ್ರೈಮ್ ವಿಡಿಯೋ ‘ಜನ ನಾಯಗನ್’ ಚಿತ್ರದ ಹಕ್ಕನ್ನು 120 ಕೋಟಿ ರೂಪಾಯಿಗೆ ಪಡೆದುಕೊಂಡಿದೆ. ಸಿನಿಮಾದ ಮೂಲ ರಿಲೀಸ್ ದಿನಾಂಕ ಜನವರಿ 9. ಇದಕ್ಕೆ ಅನುಗುಣವಾಗಿ ಅಮೇಜಾನ್ ಅವರು ಒಟಿಟಿ ರಿಲೀಸ್ ದಿನಾಂಕವನ್ನು ನಿಗದಿ ಮಾಡಿಕೊಂಡಿರುತ್ತಾರೆ. ಆದರೆ, ಸಿನಿಮಾ ಇನ್ನೂ ಥಿಯೇಟರ್​​​ನಲ್ಲಿ ರಿಲೀಸ್ ಆಗಿಲ್ಲ. ಇದರಿಂದ ಒಟಿಟಿ ಸಂಸ್ಥೆ ಕಡೆಯಿಂದ ನಿರ್ಮಾಪಕರಿಗೆ ಒತ್ತಡ ಬರುತ್ತಿದೆ ಎಂದು ವರದಿ ಆಗಿದೆ.

ಅಮೇಜಾನ್ ಪ್ರೈಮ್ ವಿಡಿಯೋದವರು ಕಾನೂನಾತ್ಮಕವಾಗಿ ಹೋರಾಡಲು ಮುಂದಾಗಿದ್ದಾರೆ ಎಂದು ವರದಿ ಆಗಿದೆ. ಇಲ್ಲವಾದಲ್ಲಿ ಒಪ್ಪಂದದ ಮೊತ್ತದಲ್ಲಿ ಒಂದಷ್ಟು ಹಣವನ್ನು ಕಡಿತಗೊಳಿಸುವ ಸಾಧ್ಯತೆಯೂ ಇದೆ. ಈ ವಿಷಯದಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂಬುದು ಇನ್ನಷ್ಟೇ ಅಧಿಕೃತವಾಗಬೇಕಿದೆ.

ಇದನ್ನೂ ಓದಿ: ವಿಳಂಬವಾಗುತ್ತಿದೆ ‘ಜನ ನಾಯಗನ್’ ರಿಲೀಸ್; ಚುನಾವಣೆ ಘೋಷಣೆ ಆದರೆ ಸದ್ಯಕ್ಕಿಲ್ಲ ಬಿಡುಗಡೆ

ಜನ ನಾಯಗನ್ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡದೇ ಇರುವ ವಿಷಯದಲ್ಲಿ ತಂಡದವರು ಕೋರ್ಟ್ ಮೊರೆ ಹೋಗಿದ್ದಾರೆ. ಅಲ್ಲಿಯೂ ತಂಡಕ್ಕೆ ಹಿನ್ನಡೆ ಆಗುತ್ತಿದೆ. ಒಂದೊಮ್ಮೆ ತಮಿಳುನಾಡು ಚುನಾವಣಾ ವಿಧಾನಸಭೆ ದಿನಾಂಕ ಘೋಷಣೆ ಆದರೆ, ಸಿನಿಮಾಗೆ ಹಿನ್ನಡೆ ಆಗಲಿದೆ. ಚಿತ್ರ ಪ್ರದರ್ಶನ ಅಸಾಧ್ಯವಾಗಬಹುದು. ಈ ಚಿಂತೆ ಕೂಡ ನಿರ್ಮಾಪಕರನ್ನು ಕಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published On - 9:03 am, Thu, 22 January 26

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us