AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ್ರೋಹದ ಆರೋಪದ ಮೇಲೆ ನಟಿ ಮೆಹರ್ ಶಾನ್ ಬಂಧನ

ಬಾಂಗ್ಲಾದ ಮಾಜಿ ಅಧ್ಯಕ್ಷ ಶೇಖ್ ಮುಜಿಬುರ್ ರೆಹಮಾನ್ ಅವರ ಮನೆಗೆ ಬೆಂಕಿ ಹಚ್ಚಲಾಗಿದೆ. ಈ ಘಟನೆಗಳು ದೇಶದಲ್ಲಿ ಅಶಾಂತಿಯ ವಾತಾವರಣವನ್ನು ಸೃಷ್ಟಿಸಿವೆ. ಇದರ ನಡುವೆ ಪ್ರಸಿದ್ಧ ನಟಿ ಮೆಹರ್ ಅಫ್ರೋಜ್ ಅವರನ್ನು ದೇಶದ್ರೋಹದ ಆರೋಪದ ಮೇಲೆ ಬಂಧಿಸಲಾಗಿದೆ. ಮೆಹರ್ ಅವರ ಬಂಧನ ಅವರ ಅಭಿಮಾನಿಗಳಲ್ಲಿ ಆತಂಕವನ್ನು ಹುಟ್ಟುಹಾಕಿದೆ.

ದೇಶದ್ರೋಹದ ಆರೋಪದ ಮೇಲೆ ನಟಿ ಮೆಹರ್ ಶಾನ್ ಬಂಧನ
ಮೆಹರ್
ರಾಜೇಶ್ ದುಗ್ಗುಮನೆ
|

Updated on:Feb 07, 2025 | 7:02 AM

Share

ಬಾಂಗ್ಲಾದೇಶದಲ್ಲಿ ಗಲಭೆ ಮತ್ತೆ ಭುಗಿಲೆದ್ದಿದೆ. ಮಾಜಿ ಅಧ್ಯಕ್ಷ ಶೇಕ್ ಮುಜಿಬುರ್ ರೆಹಮಾನ್ ಮನೆಗೆ ಬೆಂಕಿ ಹಚ್ಚಲಾಗಿದೆ. ಇದರಿಂದ ಇಡೀ ಬಾಂಗ್ಲಾದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಆಗಿದೆ. ಹೀಗಿರುವಾಗಲೇ ದೇಶದ್ರೋಹದ ಆರೋಪದ ಮೇಲೆ ಬಾಂಗ್ಲಾ ನಟಿ ಮೆಹರ್ ಅಫ್ರೋಜ್ ಶಾನ್ ಅವರನ್ನು ಬಂಧಿಸಲಾಗಿದೆ. ಅವರನ್ನು ಸದ್ಯ ವಿಚಾರಣೆ ನಡೆಸಲಾಗುತ್ತಿದೆ. ಇದು ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಭಾನುವಾರ (ಫೆಬ್ರವರಿ 6) ರಾತ್ರಿ ಮೆಹರ್ ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ರೆಜಾಲ್ ಕರೀಂ ಮಲ್ಲಿಕ್ ಹೇಳಿದ್ದಾರೆ. ದೇಶದ್ರೋಹದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆ ಕುರಿತು ಪ್ರಶ್ನೆ ಮಾಡಲಾಗುತ್ತಿದೆ. ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವನ್ನು ಅವರು ಟೀಕಿಸಿದ್ದರು ಎಂದು ಹೇಳಲಾಗಿದೆ.

ಮನೆಯ ಮೇಲೆ ದಾಳಿ

ಮೆಹರ್ ಬಂಧನಕ್ಕೂ ಮೊದಲು ಬಾಂಗ್ಲಾದ ಜಮಲ್​ಪುರದ ಮನೆಯ ಮೇಲೆ ದಾಳಿ ನಡೆದಿದೆ. ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಮನೆಯ ಬಳಿ ಬಂದು ವಸ್ತುಗಳನ್ನು ಹಾಳು ಮಾಡಿದ್ದಾರೆ. ಈ ಮನೆಯಲ್ಲಿ ಮೆಹರ್ ಅವರ ಕುಟುಂಬದವರು ವಾಸವಾಗಿದ್ದರು. ಆ ಬಳಿಕ ಮೆಹೆರ್ ಬಂಧನ ಆಗಿದೆ. ದಾಳಿಗೆ ಒಳಗಾಗಿರುವ ಮನೆ ಮೆಹರ್ ಅವರ ತಂದೆ ಇಂಜಿನಿಯರ್ ಮೊಹಮದ್ ಅಲಿಗೆ ಸೇರಿದೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ, ಮಾಜಿ ಅಧ್ಯಕ್ಷ ಶೇಕ್ ಮುಜಿಬುರ್ ಮನೆಗೆ ಬೆಂಕಿ

ಮುಜಿಬುರ್ ರೆಹಮಾನ್ ಯಾರು?

ಬಾಂಗ್ಲಾದೇಶದ ಸ್ವಾತಂತ್ರ್ಯ ಚಳುವಳಿಯ ನಾಯಕನಾಗಿ ಶೇಖ್ ಮುಜಿಬುರ್ ರೆಹಮಾನ್ ಗುರುತಿಸಿಕೊಂಡಿದ್ದರು. ಅವರು 1971ರಲ್ಲಿ ಪಾಕಿಸ್ತಾನದಿಂದ ದೇಶವನ್ನು ಬೇರ್ಪಡಿಸುವುದಾಗಿ ಘೋಷಿಸಿದರು. 1975ರಲ್ಲಿ ವಾಸವಿದ್ದ ಮನೆಯಲ್ಲಿ ಅವರನ್ನು ಕೊಲ್ಲಲಾಯಿತು. ನಂತರ ಹಸೀನಾ ಆ ಮನೆಯನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಿದರು. ಇದೇ ಮನೆಗೆ ಈಗ ಬೆಂಕಿ ಇಡುವ ಕೆಲಸ ಆಗಿದೆ.

ನಟಿಯ ಹಿನ್ನೆಲೆ

ಮೆಹರ್ ಅವುರ ಕಿರುತೆರೆಯಲ್ಲಿ ಹೆಚ್ಚು ಗುರುತಿಸಿಕೊಂಡಿದ್ದಾರೆ. ಈಗ ಅವರಿಗೆ 43 ವರ್ಷ ವಯಸ್ಸು. 1988ರಿಂದ ಕಿರುತೆರೆಯ ಜೊತೆ ನಂಟು ಜೊಂದಿದ್ದರು.  2004ರಲ್ಲಿ ಇವರು ವಿವಾಹ ಆದರು. 2012ರಲ್ಲಿ ಪತಿ ನಿಧನ ಹೊಂದಿದರು. ಮೆಹರ್​ಗೆ ಇಬ್ಬರು ಮಕ್ಕಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:02 am, Fri, 7 February 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?