AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR: ಅಮಿತ್​ ಶಾ ಎದುರು ಕೈ ಕಟ್ಟಿ ಕುಳಿತ ಜ್ಯೂ. ಎನ್​ಟಿಆರ್​; ಅಚ್ಚರಿ ಮೂಡಿಸಿತು ಗೃಹ ಸಚಿವರ ಭೇಟಿ

Amit Shah Meets Jr NTR: ಜ್ಯೂ. ಎನ್​ಟಿಆರ್​ ಮತ್ತು ಅಮಿತ್​ ಶಾ ಭೇಟಿ ಆಗಿದ್ದಾರೆ. ಸೂಕ್ತ ಕಾರಣ ಇಲ್ಲದೆ ಇಂಥ ಭೇಟಿ ನಡೆಯಲು ಸಾಧ್ಯವಿಲ್ಲ ಎಂದು ಫ್ಯಾನ್ಸ್​ ಮಾತನಾಡಿಕೊಳ್ಳುತ್ತಿದ್ದಾರೆ.

Jr NTR: ಅಮಿತ್​ ಶಾ ಎದುರು ಕೈ ಕಟ್ಟಿ ಕುಳಿತ ಜ್ಯೂ. ಎನ್​ಟಿಆರ್​; ಅಚ್ಚರಿ ಮೂಡಿಸಿತು ಗೃಹ ಸಚಿವರ ಭೇಟಿ
ಅಮಿತ್ ಶಾ - ಜ್ಯೂ. ಎನ್​ಟಿಆರ್​
TV9 Web
| Edited By: |

Updated on:Aug 22, 2022 | 10:49 AM

Share

ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ ಈ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್​ಟಿಆರ್ (Jr NTR) ಅಭಿಮಾನಿಗಳಿಗೂ ಹಾಗೆಯೇ ಆಗಿದೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರನ್ನು ಜ್ಯೂ. ಎನ್​ಟಿಆರ್​ ಭೇಟಿ ಆಗಿದ್ದಾರೆ. ಭಾನುವಾರ (ಆಗಸ್ಟ್​ 21) ನಡೆದ ಈ ಭೇಟಿಯ ಸಂದರ್ಭದಲ್ಲಿ ತೆಗೆದ ಫೋಟೋಗಳು (Amit Shah Jr NTR Photos) ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಅಮಿತ್​ ಶಾ (Amit Shah) ಎದುರು ಜ್ಯೂ. ಎನ್​ಟಿಆರ್​ ಕೈ ಕಟ್ಟಿ ಕುಳಿತುಕೊಂಡಿದ್ದಾರೆ. ಅವರ ವಿನಯವಂತ ವ್ಯಕ್ತಿತ್ವಕ್ಕೆ ಫ್ಯಾನ್ಸ್​ ಭೇಷ್​ ಎನ್ನುತ್ತಿದ್ದಾರೆ.

ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್​ನಲ್ಲಿ ಜ್ಯೂ. ಎನ್​ಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಕೆಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಜ್ಯೂ. ಎನ್​ಟಿಆರ್​ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Jr NTR: ಪತ್ನಿ ಜೊತೆ ಕಳೆದ ಸುಂದರ ಕ್ಷಣಗಳ ಫೋಟೋ ಹಂಚಿಕೊಂಡ ನಟ ಜ್ಯೂನಿಯರ್ ಎನ್​ಟಿಆರ್​
Image
Jr NTR: ರಸ್ತೆ ಅಪಘಾತದಲ್ಲಿ ಜ್ಯೂ. ಎನ್​ಟಿಆರ್​ ಅಭಿಮಾನಿ ನಿಧನ; ಸ್ಟಾರ್​ ನಟನ ಪ್ರಾರ್ಥನೆಯೂ ಫಲಿಸಲಿಲ್ಲ
Image
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಜ್ಯೂ. ಎನ್​ಟಿಆರ್​; ‘ಬಾಲ ರಾಮಾಯಣಂ’ ನೆನಪಿಸಿದ ಫೋಟೋಗಳು
Image
Alia Bhatt: ‘ದಯವಿಟ್ಟು ನಿಮ್ಮ ಅಭಿಮಾನಿಗಳನ್ನು ನನಗೆ ಕೊಟ್ಟುಬಿಡಿ’; ಜ್ಯೂ ಎನ್​ಟಿಆರ್​ ಬಳಿ ಆಲಿಯಾ ವಿಶೇಷ ಬೇಡಿಕೆ

‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ ಜ್ಯೂ. ಎನ್​ಟಿಆರ್​ ಅವರನ್ನು ಹೈದರಾಬಾದ್​ನಲ್ಲಿ ಭೇಟಿಯಾಗಿ ಮಾತನಾಡಿದ್ದು, ಖುಷಿ ನೀಡಿದೆ’ ಎಂದು ಅಮಿತ್​ ಶಾ ಬರೆದುಕೊಂಡಿದ್ದಾರೆ. ಕೆಲವೇ ಗಂಟೆಗಳಲ್ಲಿ 14 ಸಾವಿರಕ್ಕೂ ಅಧಿಕ ಜನರು ಇದನ್ನು ರೀ-ಟ್ವೀಟ್​ ಮಾಡಿಕೊಂಡಿದ್ದಾರೆ. ‘ನಿಮ್ಮ ಒಳ್ಳೆಯ ಮಾತುಗಳಿಗೆ ಧನ್ಯವಾದಗಳು. ನಿಮ್ಮನ್ನು ಭೇಟಿ ಮಾಡಿ ಮಾತನಾಡಿದ್ದಕ್ಕೆ ಖುಷಿ ಆಯಿತು’  ಎಂದು ಜ್ಯೂ. ಎನ್​ಟಿಆರ್​ ಟ್ವೀಟ್​ ಮಾಡಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ಜ್ಯೂ. ಎನ್​ಟಿಆರ್​ ಅವರಿಗೆ ಭರ್ಜರಿ ಬೇಡಿಕೆ ಇದೆ. ಹಲವು ವರ್ಷಗಳಿಂದ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ಈ ವರ್ಷ ತೆರೆಕಂಡ ‘ಆರ್​ಆರ್​ಆರ್’ ಸಿನಿಮಾದಿಂದ ಅವರ ಖ್ಯಾತಿ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಹೆಚ್ಚಾಗಿದೆ. ಹಿಂದಿ ಪ್ರೇಕ್ಷಕರು ವಲಯದಲ್ಲಿ ಅವರಿಗೆ ಅಭಿಮಾನಿಗಳ ಸಂಖ್ಯೆ ವೃದ್ಧಿಸಿದೆ. ಅವರು ನಟಿಸಲಿರುವ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ.

ಜ್ಯೂ. ಎನ್​ಟಿಆರ್​ ಮತ್ತು ಅಮಿತ್​ ಶಾ ಯಾವ ಕಾರಣಕ್ಕೆ ಭೇಟಿ ಆಗಿದ್ದಾರೆ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಸೂಕ್ತ ಕಾರಣ ಇಲ್ಲದೆ ಇಂಥ ಭೇಟಿ ನಡೆಯಲು ಸಾಧ್ಯವಿಲ್ಲ ಎಂದು ಫ್ಯಾನ್ಸ್​ ಮಾತನಾಡಿಕೊಳ್ಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:49 am, Mon, 22 August 22

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು