32 ವರ್ಷಗಳ ಬಳಿಕ ಮತ್ತೆ ಒಂದಾಗುತ್ತಿರುವ ದಿಗ್ಗಜರು: ರಜಿನಿ-ಬಚ್ಚನ್ ಒಂದು ಮಾಡುತ್ತಿರುವುದು ಯಾರು?

Rajinikanth-Bachchan: ಭಾರತೀಯ ಚಿತ್ರರಂಗದ ಇಬ್ಬರು ದಿಗ್ಗಜರಾದ ರಜನೀಕಾಂತ್ ಹಾಗೂ ಅಮಿತಾಬ್ ಬಚ್ಚನ್ 32 ವರ್ಷಗಳ ಬಳಿಕ ಒಟ್ಟಿಗೆ ನಟಿಸಿದ್ದಾರೆ. ಈ ಇಬ್ಬರು ದಿಗ್ಗಜರನ್ನು ಒಟ್ಟಿಗೆ ತರುತ್ತಿರುವವರು ಯಾರು?

32 ವರ್ಷಗಳ ಬಳಿಕ ಮತ್ತೆ ಒಂದಾಗುತ್ತಿರುವ ದಿಗ್ಗಜರು: ರಜಿನಿ-ಬಚ್ಚನ್ ಒಂದು ಮಾಡುತ್ತಿರುವುದು ಯಾರು?
ರಜನೀಕಾಂತ್-ಬಚ್ಚನ್
Follow us
ಮಂಜುನಾಥ ಸಿ.
|

Updated on:Jun 10, 2023 | 4:42 PM

ದುಬಾರಿ ಸಿನಿಮಾ ಬಜೆಟ್​ ಕಾಲದಲ್ಲಿ ಮಲ್ಟಿಸ್ಟಾರರ್ (Multistarrer) ಸಿನಿಮಾಗಳೆಂದರೆ ನಿರ್ಮಾಪಕರು (Producer) ಬೆಚ್ಚಿ ಬೀಳುವಂತಾಗಿದೆ. ಅದರಲ್ಲಿಯೂ ಇಬ್ಬರು ಸೂಪರ್ ಸ್ಟಾರ್​ಗಳನ್ನು ಒಟ್ಟಿಗೆ ಸೇರಿಸುವುದಕ್ಕೆ ಎಂಟು ಗುಂಡಿಗೆಯ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ಮಾತ್ರವೇ ಸಾಧ್ಯ. ಅಂಥಹಾ ಸಾಹಸವೊಂದಕ್ಕೆ ಭಾರತೀಯ ಚಿತ್ರರಂಗ ಸಾಕ್ಷಿಯಾಗುತ್ತಿದೆ. ಭಾರತೀಯ ಚಿತ್ರರಂಗದ ದಿಗ್ಗಜರಾದ ಅಮಿತಾಬ್ ಬಚ್ಚನ್ (Amitabh Bachchan) ಹಾಗೂ ರಜನೀಕಾಂತ್ (Rajinikath) ಅವರುಗಳು ಒಟ್ಟಿಗೆ ನಟಿಸುತ್ತಿದ್ದಾರೆ. ಅದೂ 32 ವರ್ಷಗಳ ನಂತರ.

ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಅಭೂತಪೂರ್ವ ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, ರೋಬೋ 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ ಹೂಡುತ್ತಿದೆ. ವಿಶೇಷ ಅಂದರೆ ಈ ಸಿನಿಮಾದಲ್ಲಿ ರಜನಿ ಜೊತೆ ಬಾಲಿವುಡ್ ದಂತಕಥೆ ಅಮಿತಾಬ್ ಬಚ್ಚನ್ ಕೂಡ ನಟಿಸುತ್ತಿದ್ದಾರೆ.

ರಜನಿಕಾಂತ್ ಹಾಗೂ ಅಮಿತಾಬ್ ಬಚ್ಚನ್ ಇಬ್ಬರೂ ಭಾರತೀಯ ಚಿತ್ರರಂಗದ ಅತಿ ದೊಡ್ಡ ಸ್ಟಾರ್ ನಟರು. ಈ ಇಬ್ಬರು ತಾರೆಯರು ಈ ಹಿಂದೆ ಕೆಲವು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಅಂದಾ ಕಾನೂನ್, ಗಿರಫ್ತಾರ್ ಮತ್ತು ಹಮ್ ಸಿನಿಮಾಗಳಲ್ಲಿ ಈ ಜೋಡಿ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಂಡಿದೆ. ದಶಕಗಳಷ್ಟು ಹಿಂದಿನ ಈ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದ್ದವು. ರಜನಿ, ಬಚ್ಚನ್ ಅಭಿನಯಕ್ಕೂ ಮೆಚ್ಚುಗೆಯ ಮಹಾಪೂರ ಹರಿದು ಬಂದಿತ್ತು. ಈ ಸಿನಿಮಾಗಳ ಯಶಸ್ಸಿನ ನಂತರ ಇದೀಗ 32 ವರ್ಷದ ಬಳಿಕ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಲೈಕಾ ಪ್ರೊಡಕ್ಷನ್ ಹಣ ಹಾಕುತ್ತಿದೆ. ಬಹಳ ಅದ್ಧೂರಿಯಾಗಿ ಮೂಡಿ ಬರಲಿರುವ ಈ ಪ್ರಾಜೆಕ್ಟ್ ಮುಂದಿನ ತಿಂಗಳ ಅಂತ್ಯಕ್ಕೆ ಟೇಕಾಫ್ ಆಗಲಿದೆ.

ಇದನ್ನೂ ಓದಿ:Rajinikanth: ಆ ಸಿನಿಮಾ ಬಳಿಕ ರಜನೀಕಾಂತ್ ನಟನೆಯಿಂದ ನಿವೃತ್ತಿ?

ರಜನಿ-ಬಚ್ಚನ್ ನಟಿಸಲಿರುವ, ಲೈಕಾ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ‘ಜೈ ಭೀಮ್’ ಸಿನಿಮಾ ಖ್ಯಾತಿಯ ಟಿಜೆ ಜ್ಞಾನವೇಲ್ ನಿರ್ದೇಶಿಸಲಿದ್ದಾರೆ. ಜೈ ಭೀಮ್ ಮೂಲಕ ಇಂಡಿಯನ್ ಸಿನಿಲೋಕದಲ್ಲಿ ಸಂಚಲನ ಸೃಷ್ಟಿಸಿದ್ದ ಜ್ಞಾನವೇಲ್ ರಜನಿ ಹಾಗೂ ಬಚ್ಚನ್ ನಂತಹ ಸೂಪರ್ ಸ್ಟಾರ್ಸ್ ಗೆ ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಹೆಚ್ಚಿದೆ.

ರಜನೀಕಾಂತ್ ಪ್ರಸ್ತುತ ಜೈಲರ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾದಲ್ಲಿ ಶಿವರಾಜ್ ಕುಮಾರ್, ಜಾಕಿ ಶ್ರಾಫ್, ಮೋಹನ್​ಲಾಲ್, ತೆಲುಗಿನ ಸುನಿಲ್ ಇನ್ನೂ ಕೆಲವು ದೊಡ್ಡ ನಟರು ನಟಿಸಿದ್ದಾರೆ. ಈ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ಅದಾದ ಬಳಿಕ ಬಚ್ಚನ್-ರಜನೀ ಸಿನಿಮಾ ಸೆಟ್ಟೇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:15 pm, Sat, 10 June 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ