‘ಕಲ್ಕಿ 2898 ಎಡಿ’ ರಿಲೀಸ್ ಬಗ್ಗೆ ದೊಡ್ಡ ಅಪ್​ಡೇಟ್ ಕೊಟ್ಟ ಅಮಿತಾಭ್ ಬಚ್ಚನ್

ಅಮಿತಾಭ್ ಬಚ್ಚನ್ ಅವರ ವಯಸ್ಸು 81 ಆಗಿದೆ. ಅವರು ಈಗಲೂ ನವ ಯುವಕನಂತೆ ಸಿನಿಮಾ ಮಾಡುತ್ತಿದ್ದಾರೆ. ಅವರು ‘ಕಲ್ಕಿ 2898 ಎಡಿ’ ಚಿತ್ರಕ್ಕಾಗಿ ದೊಡ್ಡ ಕಾಲ್​ಶೀಟ್ ಕೊಟ್ಟಿದ್ದರು. ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಈ ಬಗ್ಗೆ ಅಮಿತಾಭ್ ಅವರು ತಮ್ಮ ಬ್ಲಾಗ್​ನಲ್ಲಿ ಮಾಹಿತಿ ನೀಡಿದ್ದಾರೆ.

‘ಕಲ್ಕಿ 2898 ಎಡಿ’ ರಿಲೀಸ್ ಬಗ್ಗೆ ದೊಡ್ಡ ಅಪ್​ಡೇಟ್ ಕೊಟ್ಟ ಅಮಿತಾಭ್ ಬಚ್ಚನ್
ಅಮಿತಭ್ ಬಚ್ಚನ್
Follow us
ರಾಜೇಶ್ ದುಗ್ಗುಮನೆ
|

Updated on: Mar 14, 2024 | 10:49 AM

ಪ್ರಭಾಸ್ (Prabhas) ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಹಲವು ಸಮಯದಿಂದ ಈ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರದಲ್ಲಿ ಪ್ರಭಾಸ್ ಜೊತೆ ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ನಾಗ್ ಅಶ್ವಿನ್ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಯಾವ ಹಂತದಲ್ಲಿದೆ, ಚಿತ್ರದ ರಿಲೀಸ್ ಯಾವಾಗ ಎನ್ನುವ ಬಗ್ಗೆ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರು ಮಾಹಿತಿ ನೀಡಿದ್ದಾರೆ.

ಅಮಿತಾಭ್ ಬಚ್ಚನ್ ಅವರ ವಯಸ್ಸು 81 ಆಗಿದೆ. ಅವರು ಈಗಲೂ ನವ ಯುವಕನಂತೆ ಸಿನಿಮಾ ಮಾಡುತ್ತಿದ್ದಾರೆ. ಅವರು ‘ಕಲ್ಕಿ 2898 ಎಡಿ’ ಚಿತ್ರಕ್ಕಾಗಿ ದೊಡ್ಡ ಕಾಲ್​ಶೀಟ್ ಕೊಟ್ಟಿದ್ದರು. ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಈ ಬಗ್ಗೆ ಅಮಿತಾಭ್ ಅವರು ತಮ್ಮ ಬ್ಲಾಗ್​ನಲ್ಲಿ ಮಾಹಿತಿ ನೀಡಿದ್ದಾರೆ.

‘ನಿನ್ನೆ ರಾತ್ರಿ ತಡವಾಗಿ ಶೂಟಿಂಗ್​ನಿಂದ ಬಂದೆ. ಕಲ್ಕಿ ಕೆಲಸಗಳು ಮುಗಿದಿವೆ. ಮೊದಲು ತಿಳಿಸಿದಂತೆ ಮೇ 9ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಕೊನೆಯ ಹಂತದ ಕೆಲಸಗಳು ನಡೆಯುತ್ತಿವೆ’ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖಯಷಿಯಾಗಿದ್ದಾರೆ. ಸಿನಿಮಾ ಯಾವ ರೀತಿಯಲ್ಲಿ ಮೂಡಿ ಬರಲಿದೆ ಎನ್ನುವ ಕುತೂಹಲ ಮೂಡಿದೆ.

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಮಹಭಾರತದಿಂದ ಕಥೆ ಆರಂಭ ಆಗಲಿದೆ. 6000 ಸಾವಿರ ವರ್ಷಗಳ ಅವಧಿಯಲ್ಲಿ ಕಥೆ ಸಾಗಲಿದೆ ಎಂದು ನಿರ್ದೇಶಕ ನಾಗ್ ಅಶ್ವಿನ್ ಹೇಳಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಸಿ ಅಶ್ವಿನಿ ದತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಬಿಗ್ ಬಜೆಟ್​ನಲ್ಲಿ ಸಿನಿಮಾ ಮೂಡಿ ಬಂದಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ರಿಲೀಸ್ ದಿನಾಂಕ ತಿಳಿಸಿದ ತಂಡ; ಈ ಡೇಟ್​ ಆಯ್ಕೆಗೆ ಇದೆ ವಿಶೇಷ ಕಾರಣ

‘ಕಲ್ಕಿ 2898 ಎಡಿ’ ಚಿತ್ರ ಮೇ 9ರಂದು ರಿಲೀಸ್ ಆಗಲೂ ಕಾರಣವಿದೆ. ಈ ದಿನ ವೈಜಯಂತಿ ಮೂವೀಸ್ ಸ್ಥಾಪನಾ ದಿನ. ಈ ಮೊದಲು ಮೇ 9ರಂದು ಅಶ್ವಿನಿ ದತ್ ನಿರ್ಮಾಣದ ಹಲವು ಸಿನಿಮಾಗಳು ರಿಲೀಸ್ ಆಗಿ ಯಶಸ್ಸು ಕಂಡಿವೆ. ಈ ಹಿನ್ನೆಲೆಯಲ್ಲಿ ಇದನ್ನು ವಿಶೇಷ ದಿನ ಎಂದು ಪರಿಗಣಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ