AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್​ಗೆ ‘ಗ್ಲೋಬಲ್ ಸ್ಟಾರ್​’ ಪಟ್ಟ ನೀಡಿದ ಆನಂದ್ ಮಹಿಂದ್ರಾ; ಅಭಿಮಾನಿಗಳು ಒಪ್ಪಿದ್ರಾ?

ಎಬಿಸಿ ನಡೆಸಿದ ಜಿಎಂಎ3 ಕಾರ್ಯಕ್ರಮದಲ್ಲಿ ರಾಮ್ ಚರಣ್ ಅವರು ಭಾಗಿ ಆಗಿದ್ದರು. ಈ ಕಾರ್ಯಕ್ರಮದಲ್ಲಿ ‘ನಾಟು ನಾಟು.. ಹಾಡಿನ ಬಗ್ಗೆ ಚರ್ಚೆ ಮಾಡಲಾಯಿತು.

ರಾಮ್ ಚರಣ್​ಗೆ ‘ಗ್ಲೋಬಲ್ ಸ್ಟಾರ್​’ ಪಟ್ಟ ನೀಡಿದ ಆನಂದ್ ಮಹಿಂದ್ರಾ; ಅಭಿಮಾನಿಗಳು ಒಪ್ಪಿದ್ರಾ?
ರಾಮ್ ಚರಣ್​-ಆನಂದ್ ಮಹಿಂದ್ರಾ
ರಾಜೇಶ್ ದುಗ್ಗುಮನೆ
|

Updated on:Feb 27, 2023 | 11:40 AM

Share

ನಟ ರಾಮ್ ಚರಣ್ ಅವರ ಖ್ಯಾತಿ ‘ಆರ್​ಆರ್​ಆರ್​’ (RRR Movie) ಚಿತ್ರದಿಂದ ಹೆಚ್ಚಿದೆ. ಈ ಸಿನಿಮಾ ವಿಶ್ವ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ‘ಆರ್​​ಆರ್​ಆರ್​’ ​ಹಾಲಿವುಡ್ ಅಂಗಳದಲ್ಲಿ ಅವಾರ್ಡ್ ಗೆಲ್ಲುತ್ತಿರುವುದರಿಂದ ಭಾರತೀಯರು ಹೆಮ್ಮೆ ಪಡುವಂತಾಗಿದೆ. ಈಗ ನಟ ರಾಮ್ ಚರಣ್ ಅವರು ವಿದೇಶದಲ್ಲಿ ಸಂದರ್ಶನ ನೀಡುತ್ತಿದ್ದಾರೆ. ಅಲ್ಲಿ ರಾಮ್ ಚರಣ್ ಹಾಗೂ ‘ಆರ್​ಆರ್​ಆರ್​’ನ ಹೊಗಳುವ ಕೆಲಸ ಆಗುತ್ತಿದೆ. ಈಗ ರಾಮ್ ಚರಣ್ (Ram Charan)​ ಸಂದರ್ಶನ ಶೇರ್ ಮಾಡಿಕೊಂಡಿರುವ ಉದ್ಯಮಿ ಆನಂದ್ ಮಹಿಂದ್ರಾ ಅವರು, ರಾಮ್ ಚರಣ್​ಗೆ ಗ್ಲೋಬಲ್ ಸ್ಟಾರ್ ಎನ್ನುವ ಸ್ಟಾರ್ ಪಟ್ಟ ನೀಡಿದ್ದಾರೆ. ಇದನ್ನು ಫ್ಯಾನ್ಸ್ ಖುಷಿಯಿಂದ ಸ್ವೀಕರಿಸಿದ್ದಾರೆ.

ಎಬಿಸಿ ನಡೆಸಿದ ಜಿಎಂಎ3 ಕಾರ್ಯಕ್ರಮದಲ್ಲಿ ರಾಮ್ ಚರಣ್ ಅವರು ಭಾಗಿ ಆಗಿದ್ದರು. ಈ ಕಾರ್ಯಕ್ರಮದಲ್ಲಿ ‘ನಾಟು ನಾಟು.. ಹಾಡಿನ ಬಗ್ಗೆ ಚರ್ಚೆ ಮಾಡಲಾಯಿತು. ರಾಮ್ ಚರಣ್​​ಗೆ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ರಾಮ್ ಚರಣ್​ ಅವರು ‘ಇದು ಆರಂಭ ಮಾತ್ರ’ ಎಂದಿದ್ದರು. ಈ ವಿಡಿಯೋ ಸಖತ್ ವೈರಲ್ ಆಗಿದೆ. 10 ಲಕ್ಷಕ್ಕೂ ಅಧಿಕ ಬಾರಿ ವಿಡಿಯೋ ವೀಕ್ಷಣೆ ಕಂಡಿದೆ. ಈ ವಿಡಿಯೋನ ರೀಟ್ವೀಟ್ ಮಾಡಿಕೊಂಡಿರುವ ಆನಂದ್ ಮಹಿಂದ್ರಾ ಅವರು, ‘ಈ ವ್ಯಕ್ತಿ ಗ್ಲೋಬಲ್​ ಸ್ಟಾರ್​’ ಎಂದು ರಾಮ್​ ಚರಣ್ ಅವರನ್ನು ಕರೆದಿದ್ದಾರೆ.

ಆನಂದ್ ಮಹಿಂದ್ರಾ ಅವರ ಹೊಗಳಿಕೆಯಿಂದ ಫ್ಯಾನ್ಸ್ ಹಾಗೂ ರಾಮ್ ಚರಣ್​ಗೆ ಖುಷಿಯಾಗಿದೆ. ಈ ಟ್ವೀಟ್​ಗೆ ಉತ್ತರಿಸಿರುವ ರಾಮ್ ಚರಣ್​, ‘ಧನ್ಯವಾದ. ಎಲ್ಲಾ ಕ್ಷೇತ್ರಗಳಲ್ಲಿ ಮಿಂಚಲು ಇದು ಭಾರತದ ಸಮಯ’ ಎಂದಿದ್ದಾರೆ. ಈ ಟ್ವೀಟ್ ಸಂಭಾಷಣೆ ಸದ್ಯ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಇದನ್ನೂ ಓದಿ: ಹಾಲಿವುಡ್​ನಲ್ಲಿ ‘ಆರ್​ಆರ್​ಆರ್​’ ಸಾಧನೆ; ಒಂದೇ ವೇದಿಕೆಯಲ್ಲಿ ನಾಲ್ಕು ಪ್ರಶಸ್ತಿ ಬಾಚಿದ ರಾಜಮೌಳಿ ಸಿನಿಮಾ

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಈ ಚಿತ್ರದ ಕಲೆಕ್ಷನ್ 1200 ಕೋಟಿ ರೂಪಾಯಿ ಸಮೀಪಿಸಿದೆ. ಈ ಚಿತ್ರ ಜಪಾನ್​ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಅಲ್ಲಿನ ಜನರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಮಾರ್ಚ್​ 12ರಂದು ಅಮೆರಿಕದ ಲಾಸ್ ಏಂಜಲೀಸ್​​ನಲ್ಲಿ ಆಸ್ಕರ್ ಕಾರ್ಯಕ್ರಮ ನಡೆಯಲಿದೆ. ‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:34 am, Mon, 27 February 23

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು