ಖ್ಯಾತ ನಟ ವಿಜಯ್ ದೇವರಕೊಂಡ (Vijay Devarakonda) ಅಭಿನಯದ ‘ಲೈಗರ್’ ಸಿನಿಮಾ ಬಿಡುಗಡೆಗೂ ಮುನ್ನವೇ ಸಖತ್ ಸದ್ದು ಮಾಡುತ್ತಿದೆ. ಈ ಸಿನಿಮಾವನ್ನು ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಎಂಬುದು ವಿಶೇಷ. ಈ ಹಿಂದೆ ವಿಜಯ್ ದೇವರಕೊಂಡ ನಟಿಸಿದ್ದ ‘ಡಿಯರ್ ಕಾಮ್ರೇಡ್’ ಚಿತ್ರ ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿ ರಿಲೀಸ್ ಆಗಿತ್ತಾದರೂ ಈ ಮಟ್ಟಿಗೆ ಹವಾ ಮಾಡಿರಲಿಲ್ಲ. ಆದರೆ ಈಗ ವಿಜಯ್ ದೇವರಕೊಂಡ ಅವರು ‘ಲೈಗರ್’ (Liger Movie) ಚಿತ್ರದ ಮೂಲಕ ನೇರವಾಗಿ ಬಾಲಿವುಡ್ ಗಲ್ಲಾಪೆಟ್ಟಿಗೆ ಮೇಲೆ ಕಣ್ಣಿಟ್ಟಿದ್ದಾರೆ. ದೇಶದ ವಿವಿಧ ನಗರಗಳಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ. ಹೋದಲ್ಲೆಲ್ಲಾ ಅವರಿಗೆ ಜನರಿಂದ ಅತ್ಯುತ್ತಮ ಸ್ಪಂದನೆ ಸಿಗುತ್ತಿದೆ. ಚಿತ್ರತಂಡದ ಜೊತೆ ಅವರು ಅಹಮದಾಬಾದ್ಗೆ (Ahmedabad) ಭೇಟಿ ನೀಡಿದ್ದಾರೆ.
ಯುವ ಜನತೆಗೆ ವಿಜಯ್ ದೇವರಕೊಂಡ ಎಂದರೆ ಸಖತ್ ಇಷ್ಟ. ಹಾಗಾಗಿ ಅವರನ್ನು ನೇರವಾಗಿ ನೋಡಲು ಅಭಿಮಾನಿಗಳು ಬಯಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಮುಂಬೈನಲ್ಲಿ ಫ್ಯಾನ್ಸ್ ಮೀಟ್ ಮಾಡಿದಾಗ ಜನರು ಕಿಕ್ಕಿರಿದು ಸೇರಿದ್ದರು. ಈಗ ಅಹಮದಾಬಾದ್ನಲ್ಲೂ ಅದೇ ರೀತಿ ಜನ ಸಾಗರವೇ ಹರಿದುಬಂದಿದೆ. ಅಭಿಮಾನಿಗಳು ತೋರುತ್ತಿರುವ ಈ ಪರಿ ಪ್ರೀತಿ ಕಂಡು ವಿಜಯ್ ದೇವರಕೊಂಡ ಫಿದಾ ಆಗಿದ್ದಾರೆ.
‘ಲೈಗರ್’ ಸಿನಿಮಾಗೆ ಪುರಿ ಜಗನ್ನಾಥ್ ನಿರ್ದೇಶನ ಮಾಡಿದ್ದಾರೆ. ಆ ಕಾರಣದಿಂದಲೂ ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಮಾಸ್ ಸಿನಿಮಾಗಳನ್ನು ಮಾಡುವಲ್ಲಿ ಅವರು ಎತ್ತಿದ ಕೈ. ಈ ಚಿತ್ರದಿಂದ ವಿಜಯ್ ದೇವರಕೊಂಡ ಅವರಿಗೆ ದೊಡ್ಡ ಯಶಸ್ಸು ಸಿಗುವ ಸಾಧ್ಯತೆ ದಟ್ಟವಾಗಿದೆ. ಅವರಿಗೆ ಜೋಡಿಯಾಗಿ ಅನನ್ಯಾ ಪಾಂಡೆ ನಟಿಸಿದ್ದಾರೆ. ಆಗಸ್ಟ್ 25ರಂದು ವಿಶ್ವಾದ್ಯಂತ ‘ಲೈಗರ್’ ಬಿಡುಗಡೆ ಆಗಲಿದೆ.
#Liger mania continues! Young Sensation Vijay Deverakonda and Ananya Panday create mass hysteria yet again, as they promote their highly anticipated pan India film – #Liger at a mall in Ahmedabad today! ? pic.twitter.com/JYE5FPlzOB
— Ramesh Bala (@rameshlaus) August 7, 2022
ವಿಶ್ವ ಪ್ರಸಿದ್ಧ ಬಾಕ್ಸರ್ ಮೈಕ್ ಟೈಸನ್ ಅವರು ‘ಲೈಗರ್’ ಚಿತ್ರದಲ್ಲೊಂದು ಪ್ರಮುಖ ಪಾತ್ರ ಮಾಡಿದ್ದಾರೆ. ವಿಜಯ್ ದೇವರಕೊಂಡ ಜೊತೆ ಅವರು ಬಾಕ್ಸಿಂಗ್ ರಿಂಗ್ನಲ್ಲಿ ಕಾದಾಡಲಿದ್ದಾರೆ. ಈ ದೃಶ್ಯಗಳನ್ನು ದೊಡ್ಡ ಪರದೆ ಮೇಲೆ ನೋಡುವ ಕಾತರ ಸಿನಿಪ್ರಿಯರಲ್ಲಿ ಮೂಡಿದೆ. ಕರಣ್ ಜೋಹರ್, ಚಾರ್ಮಿ ಕೌರ್, ಪುರಿ ಜಗನ್ನಾಥ್ ಮುಂತಾದವರು ಜೊತೆಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಹಾಡುಗಳು ಹಿಟ್ ಆಗಿವೆ. ಟ್ರೇಲರ್ ಕೂಡ ಧೂಳೆಬ್ಬಿಸಿದೆ. ಮೊದಲ ದಿನ ಈ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಗಲಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:30 pm, Mon, 8 August 22