AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಡ್ಡು ಬಗ್ಗೆ ಮಾತನಾಡಿದ ನಟ ಕಾರ್ತಿಗೆ ಪವನ್ ಕಲ್ಯಾಣ್ ಎಚ್ಚರಿಕೆ

ತಮಿಳು ನಟ ಕಾರ್ತಿ, ಸಿನಿಮಾ ಪ್ರಚಾರದ ಸಮಯದಲ್ಲಿ ತಿರುಪತಿ ಲಡ್ಡು ಬಗ್ಗೆ ಮಾತನಾಡಿರುವುದರ ಬಗ್ಗೆ ನಟ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಅಸಮಾಧಾನ ವ್ಯಕ್ತಪಡಿಸಿದ್ದು, ತಿರುಪತಿ ಲಡ್ಡು ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದು ವಾರ್ನಿಂಗ್ ನೀಡಿದ್ದಾರೆ.

ಲಡ್ಡು ಬಗ್ಗೆ ಮಾತನಾಡಿದ ನಟ ಕಾರ್ತಿಗೆ ಪವನ್ ಕಲ್ಯಾಣ್ ಎಚ್ಚರಿಕೆ
ಮಂಜುನಾಥ ಸಿ.
|

Updated on:Sep 24, 2024 | 2:48 PM

Share

ತಿರುಪತಿ ಲಡ್ಡು ವಿವಾದ ದೇಶದಾದ್ಯಂತ ಕೋಲಾಹಲ ಎಬ್ಬಿಸಿದೆ. ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಪತ್ತೆಯಾಗಿದ್ದು, ಇದು ಹಿಂದುಗಳ ಭಾವನೆಗೆ ತೀವ್ರ ಧಕ್ಕೆ ಉಂಟು ಮಾಡಿದೆ. ಆಂಧ್ರ ಪ್ರದೇಶ ಸರ್ಕಾರ, ಲಡ್ಡುವಿನಲ್ಲಿ ದನದ ಕೊಬ್ಬು ಪತ್ತೆಯಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ದೇವಾಲಯದ ಶುಭ್ರತೆಗೆ ನಿರ್ದೇಶಿಸಿದೆ. ಅಲ್ಲದೆ, ಲಡ್ಡು ಮಾಡಲು ತುಪ್ಪ ಸರಬರಾಜು ಮಾಡುತ್ತಿದ್ದ ಏಜೆನ್ಸಿ ವಿರುದ್ಧ ದೂರು ಸಹ ದಾಖಲಾಗಿದೆ. ಪ್ರಸ್ತುತ ಆಂಧ್ರದಲ್ಲಿ ಲಡ್ಡು ವಿವಾದ ದೊಡ್ಡದಾಗಿದ್ದು, ಆಡಳಿತ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಇದರ ಬೆನ್ನಲ್ಲೆ, ನಟ, ಆಂಧ್ರ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ತಿರುಪತಿ ಲಡ್ಡು ಬಗ್ಗೆ ಮಾತನಾಡುತ್ತಿರುವ ನಟರಿಗೆ ಎಚ್ಚರಿಕೆ ಸಹ ನೀಡಿದ್ದಾರೆ.

ತಮಿಳು ನಟ ಕಾರ್ತಿ ನಟಿಸಿರುವ ತಮಿಳು ಸಿನಿಮಾ ‘ಮೆಯಿಳಾಗನ್’ ಸೆಪ್ಟೆಂಬರ್ 27ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾ ತಮಿಳಿನ ಜೊತೆಗೆ ತೆಲುಗಿನಲ್ಲಿ ‘ಸತ್ಯಂ-ಸುಂದರಂ’ ಹೆಸರಿನಲ್ಲಿ ತೆರೆಗೆ ಬರುತ್ತಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಿರತರಾಗಿರುವ ಕಾರ್ತಿ ಇತ್ತೀಚೆಗಷ್ಟೆ ಹದರಾಬಾದ್​ಗೆ ಆಗಮಿಸಿದ್ದರು. ಈ ವೇಳೆ ನಿರೂಪಕಿ, ‘ಲಡ್ಡು ಬೇಕಾ’ ಎಂದು ಜಾಹೀರಾತಿನ ಡೈಲಾಗ್ ಒಂದನ್ನು ತಮಾಷೆಗೆ ಹೇಳಿದರು. ಅದಕ್ಕೆ ಕಾರ್ತಿ, ‘ಲಡ್ಡು ವಿಷಯ ಈಗ ಬೇಡ, ಅದು ಬಹಳ ಸೆನ್ಸಿಟಿವ್ (ಸೂಕ್ಷ್ಮ) ವಿಷಯ ಆಗಿದೆ, ಲಡ್ಡು ಈಗ ಬೇಡ’ ಎಂದು ನಗುತ್ತಾ ಹೇಳಿದರು, ಅದಕ್ಕೆ ನಿರೂಪಕಿ, ‘ನಿಮಗಾಗಿ ಮೋತಿಚೂರ್ ಲಡ್ಡು ತರಿಸಿಕೊಡುತ್ತೇವೆ’ ಎನ್ನುತ್ತಾರೆ. ಅದಕ್ಕೆ ‘ಕಾರ್ತಿ, ಈಗ ಬೇಡ, ಲಡ್ಡು ಈಗ ಬೇಡ’ ಎಂದು ನಗುತ್ತಾ ಹೇಳಿದ್ದರು.

ಇದನ್ನೂ ಓದಿ:ತಿರುಪತಿ ಲಡ್ಡು ವಿವಾದ: ಪ್ರಾಯಶ್ಚಿತ್ತ ದೀಕ್ಷೆ ಕೈಗೊಂಡ ಪವನ್ ಕಲ್ಯಾಣ್

ಆದರೆ ಇಂದು ಮಾಧ್ಯಮಗಳ ಬಳಿ ಇದೇ ವಿಷಯ ಮಾತನಾಡಿರುವ ಪವನ್ ಕಲ್ಯಾಣ್, ‘ಸಿನಿಮಾ ಮಂದಿಗೆ ನಾನು ಎಚ್ಚರಿಕೆ ನೀಡಲು ಬಯಸುತ್ತೇನೆ. ಲಡ್ಡು ವಿಷಯದ ಬಗ್ಗೆ ಮಾತನಾಡುವುದಾದರೆ ಗಂಭೀರವಾಗಿ ಮಾತನಾಡಿ, ಇಲ್ಲವಾದರೆ ಮೌನವಾಗಿ ಇದ್ದು ಬಿಡಿ. ಅದನ್ನು ಬಿಟ್ಟು ನಿಮಗೆ ಅನಿಸಿದಂತೆ ಅಪಹಾಸ್ಯ ಮಾಡಿದರೆ ಮಾತ್ರ ಪ್ರಜೆಗಳು ನಿಮ್ಮನ್ನು ಕ್ಷಮಿಸರು’ ಎಂದಿದ್ದಾರೆ.

ಮುಂದುವರೆದು, ‘ಇದು ನಮಗೆ ಬಹಳ ತೀವ್ರವಾದ ನೋವು, ನೀವು ಲಡ್ಡು ಬಗ್ಗೆ ಜೋಕ್ ಮಾಡುತ್ತಿದ್ದೀರಿ. ನಿನ್ನೆ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಸಹ ನೋಡಿದ್ದೀನಿ, ‘ಲಡ್ಡು ಸೆನ್ಸಿಟಿವ್ ಇಶ್ಯೂ’ ಎಂದಿದ್ದಾರೆ. ಹಾಗೆ ಮಾತನಾಡಬೇಡಿ, ಎಂದಿಗೂ ಹಾಗೆ ಮಾತನಾಡುವ ಧೈರ್ಯ ಮಾಡಬೇಡಿ. ನಿಮ್ಮನ್ನು ನಟರಾಗಿ ನಾನು ಗೌರವಿಸುತ್ತೀನಿ. ಆದರೆ ಸನಾತನ ಧರ್ಮದ ವಿಷಯ ಬಂದಾಗ ನೀವು ಸಾವಿರ ಬಾರಿ ಯೋಚನೆ ಮಾಡಿ ಮಾತನಾಡಿ’ ಎಂದು ಎಚ್ಚರಿಕೆ ನೀಡಿದ್ದಾರೆ ಪವನ್ ಕಲ್ಯಾಣ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:30 pm, Tue, 24 September 24

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಇಂದೂ ಬೆಂಗಳೂರಿನಲ್ಲಿ ವರುಣನ ಆರ್ಭಟ; ಕೆರೆಯಂತಾದ ರಸ್ತೆಗಳು!
ಇಂದೂ ಬೆಂಗಳೂರಿನಲ್ಲಿ ವರುಣನ ಆರ್ಭಟ; ಕೆರೆಯಂತಾದ ರಸ್ತೆಗಳು!
ಸರ್ವೀಸ್ ರೈಫಲ್‌ನಿಂದ ನಾಲ್ವರು ಸಹೋದ್ಯೋಗಿಗಳನ್ನೇ ಕೊಂದ ಯೋಧ
ಸರ್ವೀಸ್ ರೈಫಲ್‌ನಿಂದ ನಾಲ್ವರು ಸಹೋದ್ಯೋಗಿಗಳನ್ನೇ ಕೊಂದ ಯೋಧ