AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳಕ್ಕೆ ಬರಲಿರುವ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್: ಯಾವಾಗ? ಏಕೆ?

Pawan Kalyan: ಆಂಧ್ರ ಪ್ರದೇಶ ರಾಜ್ಯದ ಉಪ ಮುಖ್ಯಮಂತ್ರಿ ಮತ್ತು ತೆಲುಗು ಚಿತ್ರರಂಗದ ಸ್ಟಾರ್ ನಟರೂ ಆಗಿರುವ ಪವನ್ ಕಲ್ಯಾಣ್ ಅವರು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಪರವಾಗಿ ತಮ್ಮ ನಿಲುವು ಪ್ರಕಟಿಸಲೆಂದೇ ಪವನ್ ಕಲ್ಯಾಣ್ ಅವರು ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಧರ್ಮಸ್ಥಳಕ್ಕೆ ಬರಲಿರುವ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್: ಯಾವಾಗ? ಏಕೆ?
Pawan Kalyan
ಮಂಜುನಾಥ ಸಿ.
| Edited By: |

Updated on:Sep 09, 2025 | 11:59 AM

Share

ಪುಣ್ಯಕ್ಷೇತ್ರ, ಭಕ್ತಿ ಕೇಂದ್ರವಾಗಿದ್ದ ಧರ್ಮಸ್ಥಳ ಇತ್ತೀಚೆಗೆ ಬೇರೆ ಬೇರೆ ಕಾರಣಕ್ಕೆ ಸುದ್ದಿಯಲ್ಲಿದೆ. ಧರ್ಮಸ್ಥಳದ ಘನತೆಯನ್ನು ಮಣ್ಣುಪಾಲು ಮಾಡುವ ಪ್ರಯತ್ನ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಇದೀಗ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿದವರಿಗೆ ನೊಟೀಸ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದ ಚಿನ್ನಯ್ಯ ಎಂಬಾತನನ್ನು ಬಂಧಿಸಲಾಗಿದ್ದು, ವಿಚಾರಣೆ ಚಾಲ್ತಿಯಲ್ಲಿದೆ. ಇದರ ನಡುವೆ ನೆರೆಯ ರಾಜ್ಯದ ಉಪಮುಖ್ಯಮಂತ್ರಿ ಮತ್ತು ಸ್ಟಾರ್ ನಟ ಪವನ್ ಕಲ್ಯಾಣ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.

ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಸ್ಟಾರ್ ನಟರಾಗಿರುವ ಪವನ್ ಕಲ್ಯಾಣ್ ಅವರು ಸೆಪ್ಟೆಂಬರ್ 11 ರಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಧರ್ಮಸ್ಥಳದ ಪರವಾಗಿ ನಿಲುವು ಪ್ರಕಟಿಸಲೆಂದೇ ಪವನ್ ಕಲ್ಯಾಣ್ ಅವರು ಕರ್ನಾಟಕಕ್ಕೆ ಬರುತ್ತಿದ್ದಾರೆ. ಸೆಪ್ಟೆಂಬರ್ 11 ರಂದು ಸಂಜೆ ಐದು ಗಂಟೆ ವೇಳೆಗೆ ಪವನ್ ಕಲ್ಯಾಣ್ ಅವರು ಧರ್ಮಸ್ಥಳಕ್ಕೆ ಆಗಮಿಸಲಿದ್ದು, ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಪವನ್ ಕಲ್ಯಾಣ್ ಮಾಡಿಸಲಿದ್ದಾರೆ. ಅದೇ ದಿನ ದೇವಾಲಯದ ಮುಂಭಾಗ ಆರತಿ ಸೇವೆಯನ್ನು ಸಹ ಪವನ್ ಕಲ್ಯಾಣ್ ಮಾಡಲಿದ್ದಾರೆ. ಧರ್ಮಾಧಿಕಾರಿಯವರನ್ನು ಸಹ ಪವನ್ ಅವರು ಭೇಟಿ ಆಗುವ ಸಾಧ್ಯತೆ ಇದೆ.

ಪವನ್ ಕಲ್ಯಾಣ್ ಅವರು ಜನಸೇನಾ ಪಕ್ಷದ ಸಂಸ್ಥಾಪಕರಾಗಿದ್ದು ಪ್ರಸ್ತುತ ಆಂಧ್ರದ ಟಿಡಿಪಿ ಹಾಗೂ ಬಿಜೆಪಿ ಜೊತೆ ಮೈತ್ರಿ ಸರ್ಕಾರದ ಭಾಗವಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದಲೂ ಹಿಂದೂಪರ ನಿಲುವು ಪ್ರಕಟಿಸುತ್ತಾ ಬಂದಿರುವ ಪವನ್ ಕಲ್ಯಾಣ್, ತಿರುಪತಿ ಪ್ರಸಾದದಲ್ಲಿ ದನದ ಕೊಬ್ಬು ಪತ್ತೆ ಆದಾಗಲೂ ಸಹ ತಿರುಪತಿಗೆ ಭೇಟಿ ನೀಡಿ ಅಲ್ಲಿ ಸ್ವಚ್ಛತೆ ಕಾರ್ಯದಲ್ಲಿ ಭಾಗಿಯಾಗಿದ್ದರು. ಅಲ್ಲದೆ ಬಹಿರಂಗ ಸಭೆಯಲ್ಲಿ ವೀರಾವೇಶದಿಂದ ತಾವೊಬ್ಬ ‘ಸನಾತನಿ ಹಿಂದೂ’ ಎಂದು ಹೇಳಿದ್ದರು.

ಇದನ್ನೂ ಓದಿ:ಪವನ್ ಕಲ್ಯಾಣ್​ಗಾಗಿ ದಾರಿ ಬಿಟ್ಟುಕೊಟ್ಟ ಬಾಲಕೃಷ್ಣ

ಇದೀಗ ಧರ್ಮಸ್ಥಳ ಪ್ರಕರಣವು ಮಗ್ಗುಲು ತಿರುಗಿದ್ದು, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂಬ ಅಂಶಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದ್ದು, ಧರ್ಮಸ್ಥಳದ ವಿರುದ್ಧ ಆರೋಪ ಮಾಡಿದವರನ್ನು ಪೊಲೀಸರು ತನಿಖೆ ಮಾಡುತ್ತಿರುವ ಹೊತ್ತಿನಲ್ಲಿ ಪವನ್ ಕಲ್ಯಾಣ್, ಧರ್ಮಸ್ಥಳದ ಪರವಾಗಿ ನಿಲುವು ಪ್ರಕಟಿಸಲೆಂದು ಇದೀಗ ಧರ್ಮಸ್ಥಳಕ್ಕೆ ಬರುತ್ತಿದ್ದಾರೆ. ಈ ಹಿಂದೆ ಕರ್ನಾಟಕದ ಕೆಲ ರಾಜಕಾರಣಿಗಳು ಸಹ ಧರ್ಮಸ್ಥಳಕ್ಕೆ ಭೇಟಿ ನೀಡಿ ತಾವು ಕ್ಷೇತ್ರದ ಪರವಾಗಿರುವುದಾಗಿ ಹೇಳಿದ್ದರು. ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಇನ್ನೂ ಕೆಲವು ಬಿಜೆಪಿ ರಾಜಕಾರಣಿಗಳು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:48 am, Tue, 9 September 25

ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು