AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ದರದಲ್ಲಿ ಏಕರೂಪತೆ ತರಲು ಮುಂದಾದ ಆಂಧ್ರ ಸರ್ಕಾರ

Movie ticket price: ಕರ್ನಾಟಕ ಸರ್ಕಾರ ಏಕರೂಪ ಟಿಕೆಟ್ ದರ ತರುವ ಪ್ರಯತ್ನ ಮಾಡಿತ್ತು ಆದರೆ ಕೆಲವು ನಿರ್ಮಾಣ ಸಂಸ್ಥೆಗಳು ಅಡ್ಡಗಾಲು ಹಾಕಿದ್ದರಿಂದ ಆದೇಶಕ್ಕೆ ತಡೆ ಬಿದ್ದಿದೆ. ಇದೀಗ ನೆರೆಯ ಆಂಧ್ರ ಪ್ರದೇಶದಲ್ಲಿ ಇದೇ ರೀತಿಯ ವ್ಯವಸ್ಥೆ ತರಲು ಅಲ್ಲಿನ ಸರ್ಕಾರ ಸಜ್ಜಾಗಿದೆ. ಈಗಾಗಲೇ ಸಂಬಂಧಪಟ್ಟವರೊಡನೆ ಸಭೆ ಸಹ ನಡೆದಿದೆ.

ಟಿಕೆಟ್ ದರದಲ್ಲಿ ಏಕರೂಪತೆ ತರಲು ಮುಂದಾದ ಆಂಧ್ರ ಸರ್ಕಾರ
Theater
ಮಂಜುನಾಥ ಸಿ.
|

Updated on: Dec 26, 2025 | 7:04 PM

Share

ಸಿನಿಮಾ (Cinema) ಟಿಕೆಟ್ ದರಗಳ ಬಗ್ಗೆ ಇತ್ತೀಚೆಗೆ ಹಲವು ರಾಜ್ಯಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಈ ಚರ್ಚೆ ಜೋರಿದೆ. ಕರ್ನಾಟಕದಲ್ಲಿ ಏಕರೂಪ ಟಿಕೆಟ್ ದರವನ್ನು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು, ಆದರೆ ನ್ಯಾಯಾಲಯ ಅದಕ್ಕೆ ತಡೆ ನೀಡಿದೆ. ಇದೀಗ ನೆರೆಯ ಆಂಧ್ರ ಪ್ರದೇಶದಲ್ಲಿ ಇದೇ ಕೂಗು ಕೇಳಿ ಬರುತ್ತಿದೆ. ಹೊಸ ಸಿನಿಮಾಗಳು ಬಿಡುಗಡೆ ಆದಾಗಲೆಲ್ಲ ಸಿನಿಮಾ ಟಿಕೆಟ್ ದರಗಳನ್ನು ಏರಿಸಲಾಗುತ್ತಿತ್ತು, ಇದರಿಂದ ಜನ ಬೇಸತ್ತು ಹೋಗಿದ್ದರು. ಇದಕ್ಕೆಲ್ಲ ಅಂತ್ಯ ಹಾಡಲು ಆಂಧ್ರ ಸರ್ಕಾರ ಮುಂದಾಗಿದೆ.

ಆಂಧ್ರ ಮತ್ತು ತೆಲಂಗಾಣಗಳಲ್ಲಿ ಟಿಕೆಟ್ ದರಗಳು ತುಸು ಕಡಿಮೆಯೇ ಇವೆ. ಆದರೆ ಪ್ರತಿ ಬಾರಿ ದೊಡ್ಡ ಬಜೆಟ್​ನ ಸಿನಿಮಾಗಳು ಬಿಡುಗಡೆ ಆಗುವ ಸಮಯದಲ್ಲೆಲ್ಲ ಟಿಕೆಟ್ ದರಗಳನ್ನು ಐದು ದಿನ, ಒಂದು ವಾರ ಹೀಗೆ ಹೆಚ್ಚಿಸಲಾಗುತ್ತದೆ. ಇದಕ್ಕೆ ಸಿನಿಮಾ ತಂಡಗಳು ಸರ್ಕಾರದ ಬಳಿ ಅರ್ಜಿ ಹಾಕಿ ಅನುಮತಿಯನ್ನು ಪಡೆದುಕೊಳ್ಳುತ್ತವೆ. ಆದರೆ ಪ್ರತಿ ಬಾರಿ ಹೀಗೆ ಟಿಕೆಟ್ ದರ ಏರಿಕೆ ಮಾಡಿದಾಗಲೂ ಸಿನಿಮಾ ಪ್ರೇಮಿಗಳು ಟೀಕೆ ಮಾಡುತ್ತಿದ್ದರು. ಇದೇ ಕಾರಣಕ್ಕೆ ಇದಕ್ಕೆ ಅಂತ್ಯ ಹಾಡಲು ಆಂಧ್ರ ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ:ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ಶಿವಣ್ಣ, ರಜನಿಕಾಂತ್: ಬಾಯ್ಬಿಟ್ಟ ಸ್ಟಾರ್ ನಟ

ಆಂಧ್ರ ಪ್ರದೇಶದ ಸಿನಿಮಾಟೊಗ್ರಫಿ ಸಚಿವ ಕಂಡುಲ ದುರ್ಗೇಶ್ ಈ ಬಗ್ಗೆ ಮಾತನಾಡಿದ್ದು, ‘ಏಕರೂಪ ಟಿಕೆಟ್ ದರವನ್ನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಯುತ್ತಿವೆ. ಟಿಕೆಟ್ ದರಗಳು ಸಿನಿಮಾ ರಂಗ ಹಾಗೂ ಪ್ರೇಕ್ಷಕರ ಇಬ್ಬರಿಗೂ ಅನುಕೂಲಕರವಾಗಿ ಇರುವಂತೆ ನೋಡಿಕೊಳ್ಳಲಾಗುತ್ತದೆ’ ಎಂದಿದ್ದಾರೆ. ಸಿನಿಮಾಟೊಗ್ರಫಿ ಸಚಿವರು ಈಗಾಗಲೇ ಕೆಲವು ಪ್ರಮುಖ ಅಧಿಕಾರಿಗಳೊಟ್ಟಿಗೆ ಸಭೆ ನಡೆಸಿದ್ದು, ಸಭೆಯಲ್ಲಿ ತೆಲುಗು ಚಿತ್ರರಂಗದ ಕೆಲ ಪ್ರಮುಖರು ಸಹ ಭಾಗವಹಿಸಿದ್ದರು.

ಪದೇ ಪದೇ ಟಿಕೆಟ್ ದರ ಹೆಚ್ಚಳದ ಬಗ್ಗೆ ಸಿನಿಮಾ ಪ್ರೇಮಿಗಳು ಮಾತ್ರವಲ್ಲ ಕೆಲ ಸಿನಿಮಾ ಮಂದಿ ಸಹ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಟಿಕೆಟ್ ದರ ಹೆಚ್ಚಳದಿಂದ ಸಣ್ಣ ಸಿನಿಮಾಗಳಿಗೆ ಭಾರಿ ಹಾನಿ ಆಗುತ್ತಿದೆ. ಜನ ಹಣವನ್ನು ದೊಡ್ಡ ಸಿನಿಮಾಗಳಿಗೆ ಖರ್ಚು ಮಾಡಿ, ಸಣ್ಣ ಸಿನಿಮಾಗಳು ಬಂದಾಗ ನಿರ್ಲಕ್ಷ್ಯ ತೋರುತ್ತಿದ್ದಾರೆ ಅಲ್ಲದೆ, ಈ ರೀತಿ ಕೆಲವು ಸಿನಿಮಾಗಳಿಗೆ ಮಾತ್ರವೇ ಟಿಕೆಟ್ ದರ ಹೆಚ್ಚಿಸುವುದು, ಬೇರೆ ಸಿನಿಮಾ ತಂಡಗಳಿಗೆ ಮಾಡುವ ಅನ್ಯಾಯದಂತೆ ತೋರುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೇ ಕಾರಣಕ್ಕೆ ಇದೀಗ ಸರ್ಕಾರ, ಇದಕ್ಕೊಂದು ಅಂತ್ಯ ಹಾಡಲು ಮುಂದಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ