‘ಮೈಕಲ್​ ಜಾಕ್ಸನ್​ ಬಯೋಪಿಕ್​ ಮಾಡುವ ಆಸೆ ಇದೆ’: ಸಂದೀಪ್​ ರೆಡ್ಡಿ ವಂಗಾ

3 ಚಿತ್ರಗಳು ಸೂಪರ್​ ಹಿಟ್​ ಆದ ನಂತರ ಸಂದೀಪ್​ ರೆಡ್ಡಿ ವಂಗಾ ಅವರಿಗೆ ಭಾರಿ ಬೇಡಿಕೆ ಸೃಷ್ಟಿ ಆಗಿದೆ. ಅವರೊಂದಿಗೆ ಸಿನಿಮಾ ಮಾಡಬೇಕೆಂದು ಹಲವು ಸ್ಟಾರ್​ ನಟರು ಕಾಯುತ್ತಿದ್ದಾರೆ. ಮಾಧ್ಯಮವೊಂದಕ್ಕೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಸಂದೀಪ್​ ರೆಡ್ಡಿ ವಂಗಾ ಒಂದು ಬಯಕೆ ತೋಡಿಕೊಂಡಿದ್ದಾರೆ. ಮೈಕಲ್​ ಜಾಕ್ಸನ್​ ಜೀವನದ ಕಥೆಯ ಕುರಿತು ಅವರಿಗೆ ಬಹಳ ಆಸಕ್ತಿ ಇದೆ.

‘ಮೈಕಲ್​ ಜಾಕ್ಸನ್​ ಬಯೋಪಿಕ್​ ಮಾಡುವ ಆಸೆ ಇದೆ’: ಸಂದೀಪ್​ ರೆಡ್ಡಿ ವಂಗಾ
ಸಂದೀಪ್​ ರೆಡ್ಡಿ ವಂಗಾ, ಮೈಕಲ್​ ಜಾಕ್ಸನ್​
Follow us
ಮದನ್​ ಕುಮಾರ್​
|

Updated on: Apr 09, 2024 | 7:35 PM

ಸಂದೀಪ್​ ರೆಡ್ಡಿ ವಂಗಾ (Sandeep Reddy Vanga) ನಿರ್ದೇಶನ ಮಾಡುವ ಸಿನಿಮಾಗಳ ಬಗ್ಗೆ ಸಿಕ್ಕಾಪಟ್ಟೆ ಟೀಕೆ ಎದುರಾಗುತ್ತದೆ ಎಂಬುದು ನಿಜ. ಹಾಗಿದ್ದರೂ ಕೂಡ ಅವರ ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ಸೂಪರ್​ ಹಿಟ್​ ಆಗುತ್ತವೆ. ಟಾಲಿವುಡ್​ನ ‘ಅರ್ಜುನ್​ ರೆಡ್ಡಿ’, ಬಾಲಿವುಡ್​ನ ‘ಕಬೀರ್​ ಸಿಂಗ್​’ ಹಾಗೂ ‘ಅನಿಮಲ್​’ (Animal) ಸಿನಿಮಾಗಳೇ ಈ ಮಾತಿಗೆ ಸಾಕ್ಷಿ. ಈಗ ಸಂದೀಪ್ ರೆಡ್ಡಿ ವಂಗಾ ಅವರು ಪ್ರಭಾಸ್​ ನಟನೆಯ ‘ಸ್ಪಿರಿಟ್​’ ಸಿನಿಮಾದ ಪ್ರೀ-ಪ್ರೊಡಕ್ಷನ್​ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ವಿಶೇಷ ಏನೆಂದರೆ, ಮೈಕಲ್​ ಜಾಕ್ಸನ್​ ಬಯೋಪಿಕ್​ಗೆ (Michael Jackson Biopic) ನಿರ್ದೇಶನ ಮಾಡಬೇಕು ಎಂಬ ಆಸೆ ಸಂದೀಪ್​ ರೆಡ್ಡಿ ವಂಗಾ ಅವರಿಗೆ ಇದೆ.

ಮೂರು ಸಿನಿಮಾಗಳು ಸೂಪರ್​ ಹಿಟ್​ ಆದ ಬಳಿಕ ಸಂದೀಪ್​ ರೆಡ್ಡಿ ವಂಗಾ ಅವರಿಗೆ ಸಖತ್​ ಬೇಡಿಕೆ ಸೃಷ್ಟಿ ಆಗಿದ್ದು, ಅವರ ಜೊತೆ ಸಿನಿಮಾ ಮಾಡಲು ಅನೇಕ ಸ್ಟಾರ್​ ನಟರು ಕಾದಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಂದೀಪ್​ ರೆಡ್ಡಿ ವಂಗಾ ಅವರು ಒಂದು ಬಯಕೆಯನ್ನು ತೋಡಿಕೊಂಡಿದ್ದಾರೆ. ಮೈಕಲ್​ ಜಾಕ್ಸನ್​ ಅವರ ಜೀವನದ ಕಥೆ ಬಗ್ಗೆ ಸಂದೀಪ್​ ಅವರಿಗೆ ಸಖತ್​ ಆಸಕ್ತಿ ಇದೆ.

‘ಆಸೆ ಇದೆ. ಆದರೆ, ಮೈಕಲ್​ ಜಾಕ್ಸನ್​ ಪಾತ್ರವನ್ನು ಯಾರು ಮಾಡ್ತಾರೆ ಎಂಬುದೇ ಪ್ರಶ್ನೆ. ಸೂಕ್ತವಾದ ನಟ ಸಿಕ್ಕರೆ ಹಾಲಿವುಡ್​ನಲ್ಲಿ ಸಿನಿಮಾ ಮಾಡಬಹುದು. ಮೈಕಲ್​ ಜಾಕ್ಸನ್​ ಅವರ ಜೀವನ ತುಂಬ ಇಂಟರೆಸ್ಟಿಂಗ್​ ಆಗಿತ್ತು. ಅವರ ಬಾಲ್ಯದ ದಿನಗಳು, ಮೈ ಬಣ್ಣ ಬದಲಾಯಿಸಿಕೊಂಡಿದ್ದು.. ಅದೆಲ್ಲವೂ ಒಂದು ದೊಡ್ಡ ಜರ್ನಿ, ದೊಡ್ಡ ಕಥೆ. ಅದೊಂದು ಕನಸು. ಆ ಸಿನಿಮಾ ಮಾಡಿದರೆ ಎಲ್ಲರೂ ಟಿಕೆಟ್​ ಖರೀದಿಸುತ್ತಾರೆ. ಯಾರೇ ನಿರ್ದೇಶನ ಮಾಡಿದರೂ ನಾನು ಟಿಕೆಟ್​ ಖರೀಸಿದಿ ಸಿನಿಮಾ ನೋಡುತ್ತೇನೆ. ಯಾಕೆಂದ್ರೆ ನಾನು ಕೂಡ ತಿಳಿದುಕೊಳ್ಳಬೇಕು’ ಎಂದು ಸಂದೀಪ್​ ರೆಡ್ಡಿ ವಂಗಾ ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ದಿನವೇ ‘ಸ್ಪಿರಿಟ್​’ ಚಿತ್ರ 150 ಕೋಟಿ ರೂ. ಗಳಿಸುತ್ತೆ ಎಂದ ಸಂದೀಪ್​ ರೆಡ್ಡಿ ವಂಗಾ

ಪ್ರಭಾಸ್​ ಅವರು ಈಗ ‘ಕಲ್ಕಿ 2898 ಎಡಿ’, ‘ರಾಜಾ ಸಾಬ್​’ ಸಿನಿಮಾಗಳ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ನಂತರ ಅವರು ಸಂದೀಪ್​ ರೆಡ್ಡಿ ವಂಗಾ ಜೊತೆಗಿನ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ. ಆ ಸಿನಿಮಾ ಮೊದಲ ದಿನವೇ 150 ಕೋಟಿ ರೂಪಾಯಿ ಕಲೆಕ್ಷನ್​ ಮಾಡಲಿದೆ ಎಂದು ಸಂದೀಪ್​ ಅವರು ಈಗಲೇ ಭವಿಷ್ಯ ನುಡಿದಿದ್ದಾರೆ. ‘ಸ್ಪಿರಿಟ್​’ ಸಿನಿಮಾ ಹೇಗಿರಲಿದೆ ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್