AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೀಸ್​​ನಲ್ಲಿ ಅನಿರುದ್ಧ್​-ಕಾವ್ಯಾ ಮದುವೆ? ಚೆನ್ನೈನಲ್ಲಿ ಅದ್ದೂರಿ ರಿಸೆಪ್ಷನ್

ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಮಾಲೀಕಿ ಕಾವ್ಯಾ ಮಾರನ್ ನವೆಂಬರ್‌ನಲ್ಲಿ ವಿವಾಹವಾಗಲಿದ್ದಾರೆ. ಗ್ರೀಸ್‌ನಲ್ಲಿ ಮದುವೆ ಹಾಗೂ ಚೆನ್ನೈನಲ್ಲಿ ಅದ್ದೂರಿ ರಿಸೆಪ್ಷನ್ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಹಲವು ಪ್ರಮುಖ ಗಣ್ಯರು ಈ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಗ್ರೀಸ್​​ನಲ್ಲಿ ಅನಿರುದ್ಧ್​-ಕಾವ್ಯಾ ಮದುವೆ? ಚೆನ್ನೈನಲ್ಲಿ ಅದ್ದೂರಿ ರಿಸೆಪ್ಷನ್
ಕಾವ್ಯಾ-ಅನಿರುದ್ಧ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 28, 2026 | 7:57 AM

Share

ಮುಖ್ಯಾಂಶಗಳು

  • ಗ್ರೀಸ್‌ನಲ್ಲಿ ಹಸೆಗೊಳ್ಳಲಿದ್ದಾರೆ ಕಾವ್ಯಾ-ಅನಿರುದ್ಧ್
  • ಅತ್ಯಂತ ಆಪ್ತರ ಸಮ್ಮುಖದಲ್ಲಿ ನಡೆಯಲಿದೆ ಖಾಸಗಿ ವಿವಾಹ
  • ಚೆನ್ನೈನಲ್ಲಿ ರಾಯಲ್ ರಿಸೆಪ್ಷನ್

ತಮಿಳು ಚಿತ್ರರಂಗದ ಪ್ರಸಿದ್ಧ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಲೀಕರಾದ ಕಾವ್ಯಾ ಮಾರನ್ ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬರುವ ನವೆಂಬರ್ ತಿಂಗಳಲ್ಲಿ ಇವರ ಅದ್ದೂರಿ ಮದುವೆ ನೆರವೇರಲಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಇವರ ಮದುವೆಯ ಆರತಕ್ಷತೆ ಆಹ್ವಾನ ಪತ್ರಿಕೆ ಸಖತ್ ವೈರಲ್ ಆಗುತ್ತಿದ್ದು, ರಾಜಕೀಯ ಮತ್ತು ಸಿನಿಮಾ ರಂಗದ ಗಣ್ಯರಲ್ಲಿ ಭಾರೀ ಕುತೂಹಲ ಮೂಡಿಸಿದೆ.

ವರದಿಗಳ ಪ್ರಕಾರ ಈ ಜೋಡಿಯ ವಿವಾಹ ಮಹೋತ್ಸವ ನವೆಂಬರ್ 10 ಮತ್ತು 11 ರಂದು ಗ್ರೀಸ್​ನಲ್ಲಿ ನಡೆಯಲಿದೆ. ಅತ್ಯಂತ ಆಪ್ತರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಈ ಸಮಾರಂಭ ನೆರವೇರಲಿದೆ. ಮಾರನ್ ಕುಟುಂಬವು ಗ್ರೀಸ್‌ನಲ್ಲಿ ನಡೆಯುವ ಮದುವೆಯ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಅತಿಥಿಗಳ ಪ್ರಯಾಣ ಮತ್ತು ವಸತಿ ವ್ಯವಸ್ಥೆಯನ್ನು ಅವರೇ ನೋಡಿಕೊಳ್ಳುತ್ತಿದ್ದಾರೆ.

ಮದುವೆಯ ಬಳಿಕ ನವೆಂಬರ್ 21ರಂದು ಚೆನ್ನೈನಲ್ಲಿ ಅದ್ದೂರಿ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಗಾಗಲೇ ಆಹ್ವಾನ ನೀಡಲಾಗಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಹಾಗೂ ಮಾಜಿ ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಅವರಿಗೂ ಆಹ್ವಾನ ಪತ್ರಿಕೆ ನೀಡಲಾಗಿದೆ. ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ನಿರ್ಮಲಾ ಸೀತಾರಾಮನ್ ಮತ್ತು ಎನ್. ಚಂದ್ರಬಾಬು ನಾಯ್ಡು ಸೇರಿದಂತೆ ಪ್ರಮುಖ ರಾಜಕಾರಣಿಗಳು ಭಾಗವಹಿಸಲಿದ್ದಾರೆ.

ಸಿನಿಮಾ ರಂಗದ ದಿಗ್ಗಜರು ಕೂಡ ಈ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಅನಿರುದ್ಧ್ ಅವರ ಮಾವ, ಸೂಪರ್ ಸ್ಟಾರ್ ರಜನಿಕಾಂತ್ ಪ್ರಮುಖ ಆಕರ್ಷಣೆಯಾಗಿದ್ದಾರೆ. ಇವರ ಜೊತೆಗೆ ಸಂಗೀತ ಮಾಂತ್ರಿಕ ಎ. ಆರ್. ರೆಹಮಾನ್, ನಟ ಶಿವಕಾರ್ತಿಕೇಯನ್, ತಮಿಳು ನಟ ಅಜಿತ್ ಕುಮಾರ್, ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಮತ್ತು ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಅವರಿಗೆ ಆಹ್ವಾನ ನೀಡಲಾಗಿದೆ.

ಇದನ್ನೂ ಓದಿ: ಅನಿರುದ್ಧ್​-​ಕಾವ್ಯಾ ಮಾರನ್​ ಮದುವೆ: ಸಿಎಂ ಡಿಕೆ ಶಿವಕುಮಾರ್‌ಗೆ ಆಹ್ವಾನ ಪತ್ರಿಕೆ ನೀಡಿದ ಕಲಾನಿಧಿ ಮಾರನ್ ದಂಪತಿ!

ಅನಿರುದ್ಧ್ ರವಿಚಂದರ್ ದಕ್ಷಿಣ ಭಾರತದ ಅತ್ಯಂತ ಬೇಡಿಕೆಯ ಸಂಗೀತ ನಿರ್ದೇಶಕರಾಗಿ ಹೊರಹೊಮ್ಮಿದ್ದಾರೆ. ಕಾವ್ಯಾ ಮಾರನ್ ಅವರು ಸನ್ ಟಿವಿ ನೆಟ್‌ವರ್ಕ್ ಮುಖ್ಯಸ್ಥ ಕಲಾನಿಧಿ ಮಾರನ್ ಅವರ ಪುತ್ರಿಯಾಗಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ಐಪಿಎಲ್ ತಂಡದ ಸಿಇಒ ಆಗಿ ಕಾವ್ಯಾ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಇಬ್ಬರು ಗಣ್ಯರ ಮಿಲನವು ತಮಿಳುನಾಡು ಹಾಗೂ ಕ್ರಿಕೆಟ್ ವಲಯದಲ್ಲಿ ದೊಡ್ಡ ಸುದ್ದಿಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:54 am, Wed, 28 October 26

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More