AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷವೇ ಅನಿರುದ್ಧ್ ರವಿಚಂದರ್, ಕಾವ್ಯಾ ಮಾರನ್ ಮದುವೆ? ಜೋರಾಗಿದೆ ಗಾಸಿಪ್

ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮತ್ತು ಎಸ್‌ಆರ್‌ಹೆಚ್ ತಂಡದ ಸಿಇಒ ಕಾವ್ಯ ಮಾರನ್ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನಿರುದ್ಧ್ ಮತ್ತು ಕಾವ್ಯ ಮಾರನ್ ನಡುವೆ ಏನೋ ನಡೆಯುತ್ತಿದೆ ಎಂಬ ವದಂತಿಗಳು ಹೊಸದೇನಲ್ಲ.

ಈ ವರ್ಷವೇ ಅನಿರುದ್ಧ್ ರವಿಚಂದರ್, ಕಾವ್ಯಾ ಮಾರನ್ ಮದುವೆ? ಜೋರಾಗಿದೆ ಗಾಸಿಪ್
Kavya Maran, Anirudh Ravichander
ಮದನ್​ ಕುಮಾರ್​
|

Updated on: May 21, 2026 | 6:41 PM

Share

ಸಿನಿಮಾ ಸಂಗೀತ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿರುವ ಅನಿರುದ್ಧ್ ರವಿಚಂದರ್ (Anirudh Ravichander) ಮತ್ತು ಐಪಿಎಲ್ ಫ್ರಾಂಚೈಸ್ ಸನ್‌ರೈಸರ್ಸ್ ಹೈದರಾಬಾದ್ ಸಿಇಒ ಕಾವ್ಯಾ ಮಾರನ್ (Kavya Maran) ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಟಾಲಿವುಡ್, ಕಾಲಿವುಡ್ ಹಾಗೂ ಕ್ರಿಕೆಟ್ ವಲಯಗಳಲ್ಲಿ ವೈರಲ್ ಆಗಿದೆ. ಕಳೆದ ಕೆಲವು ದಿನಗಳಿಂದ ಅವರ ಸಂಬಂಧ ಮತ್ತು ವಿವಾಹದ ಬಗ್ಗೆ ಅನೇಕ ಅಂತೆ-ಕಂತೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಈಗ ಮತ್ತೆ ಗಾಸಿಪ್ ಜೋರಾಗಿದೆ.

ಕಾಲಿವುಡ್ ಮಾಧ್ಯಮದ ಇತ್ತೀಚಿನ ವರದಿಗಳ ಪ್ರಕಾರ, ಇಬ್ಬರೂ ಈ ವರ್ಷದ ದ್ವಿತೀಯಾರ್ಧದಲ್ಲಿ ಮದುವೆಯಾಗಲು ಪ್ಲ್ಯಾನ್ ಮಾಡುತ್ತಿದ್ದಾರೆ. ಅಲ್ಲದೇ, ಶೀಘ್ರದಲ್ಲೇ ಎರಡೂ ಕುಟುಂಬಗಳಿಂದ ಅಧಿಕೃತ ಘೋಷಣೆ ಬರುವ ಸಾಧ್ಯತೆಯಿದೆ ಎಂಬ ಊಹಾಪೋಹಗಳು ಹರಡಿವೆ. ಅನಿರುದ್ಧ್ ಮತ್ತು ಕಾವ್ಯಾ ಮಾರನ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹೊಸದೇನಲ್ಲ.

ಕಳೆದ ವರ್ಷ ಜೂನ್‌ನಿಂದ ಎಕ್ಸ್ ಮತ್ತು ರೆಡ್ಡಿಟ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಇಬ್ಬರ ಡೇಟಿಂಗ್ ವದಂತಿಗಳು ಹರಿದಾಡುತ್ತಿವೆ. ಲಾಸ್ ವೇಗಸ್‌ನಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡರು. ಅಲ್ಲಿ ಅವರು ಡಿನ್ನರ್ ಡೇಟ್‌ಗಳನ್ನು ಆನಂದಿಸುತ್ತಿರುವ ಫೋಟೋಗಳು ವೈರಲ್ ಆಗಿದ್ದವು. ಇದಲ್ಲದೇ, ಕಾವ್ಯಾ ಮಾರನ್ ಅವರ ತಂದೆ ಮತ್ತು ಮಾಧ್ಯಮ ದೊರೆ ಕಲಾನಿಧಿ ಮಾರನ್ ಒಡೆತನದ ಸನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಅನಿರುದ್ಧ್ ಹಲವಾರು ದೊಡ್ಡ ಚಿತ್ರಗಳಿಗೆ ಸಂಗೀತ ನೀಡುತ್ತಿದ್ದಾರೆ. ವದಂತಿಗೆ ಇದು ಹೆಚ್ಚಿನ ಬಲವನ್ನು ನೀಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿರುವ ಸುದ್ದಿಯೆಂದರೆ ಅನಿರುದ್ಧ್ ರವಿಚಂದರ್ ಅವರ ಸಂಬಂಧಿ, ಸೂಪರ್‌ಸ್ಟಾರ್ ರಜನಿಕಾಂತ್ ಅವರು ಈ ಮದುವೆಗೆ ಸಹಾಯ ಮಾಡಲು ಮುಂದೆ ಬಂದಿದ್ದಾರೆ ಎಂದು ವರದಿಯಾಗಿದೆ. ರಜನಿಕಾಂತ್ ಅವರೇ ಕಲಾನಿಧಿ ಮಾರನ್ ಅವರೊಂದಿಗೆ ಮಾತನಾಡಿ ಈ ಜೋಡಿಯನ್ನು ಆಶೀರ್ವದಿಸುವಂತೆ ಕೇಳಿಕೊಂಡಿದ್ದಾರೆ ಮತ್ತು ಎರಡೂ ಕಡೆಯ ಹಿರಿಯರು ಮದುವೆಗೆ ಬಹುತೇಕ ಹಸಿರು ನಿಶಾನೆ ತೋರಿಸಿದ್ದಾರೆ ಎಂಬ ವದಂತಿಗಳು ಹರಡುತ್ತಿವೆ. ಆದಾಗ್ಯೂ, ಈ ಕುಟುಂಬಗಳ ಸದಸ್ಯರು ಈ ವಿಷಯಗಳ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: ಕನ್ನಡದಲ್ಲಿ ಯಾವ ಮ್ಯೂಸಿಕ್ ಡೈರೆಕ್ಟರ್​ಗಳೂ ಕೇಳದಷ್ಟು ಸಂಭಾವನೆ ಪಡೆದ ಅನಿರುದ್ಧ್ ರವಿಚಂದರ್

ಪ್ರಸ್ತುತ, ಕಾವ್ಯಾ ಮತ್ತು ಅನಿರುದ್ಧ್ ಅವರು ತಮ್ಮ ವೃತ್ತಿಜೀವನದ ಮೇಲೆ ಸಂಪೂರ್ಣವಾಗಿ ಗಮನಹರಿಸಿದ್ದಾರೆ. ಅನಿರುದ್ಧ್ ಅವರು ಬಹುಬೇಡಿಕೆಯ ಸಂಗೀತ ನಿರ್ದೇಶಕರಾಗಿದ್ದಾರೆ. ‘ಜೈಲರ್ 2’, ‘ಜನ ನಾಯಗನ್’, ‘ಕಿಂಗ್’ ರೀತಿಯ ದೊಡ್ಡ ಚಿತ್ರಗಳಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ಮತ್ತೊಂದೆಡೆ, ಕಾವ್ಯಾ ಮಾರನ್ ಅವರು ಉದ್ಯಮಿಯಾಗಿ ಬ್ಯುಸಿಯಾಗಿದ್ದಾರೆ. ಇವರ ಮದುವೆಯ ಗಾಸಿಪ್ ನಿಜವಾಗುತ್ತೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ