ಮದುವೆಯ ಫೋಟೋ ಹಂಚಿಕೊಂಡ ಅನಿರುದ್ಧ್ ರವಿಚಂದರ್, ಕಾವ್ಯಾ ಮಾರನ್

ಗ್ರೀಸ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಅನಿರುದ್ಧ್ ರವಿಚಂದರ್ ಹಾಗೂ ಕಾವ್ಯಾ ಮಾರನ್ ಅವರು ಹಸೆಮಣೆ ಏರಿದ್ದಾರೆ. ಈ ಮದುವೆಗೆ ಕುಟುಂಬದವರು, ಆಪ್ತರು ಹಾಗೂ ಕೆಲವೇ ಕೆಲವು ಗಣ್ಯ ವ್ಯಕ್ತಿಗಳನ್ನು ಆಹ್ವಾನಿಸಲಾಗಿತ್ತು. ಮದುವೆ ಬಳಿಕ ಅನಿರುದ್ಧ್ ರವಿಚಂದರ್ ಅವರು ಮೊದಲ ಬಾರಿಗೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮದುವೆಯ ಫೋಟೋ ಹಂಚಿಕೊಂಡ ಅನಿರುದ್ಧ್ ರವಿಚಂದರ್, ಕಾವ್ಯಾ ಮಾರನ್
Kavya Maran, Anirudh Ravichander
Image Credit source: Instagram/anirudhofficial

Updated on: Nov 11, 2026 | 10:08 PM

ಭಾರತೀಯ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಸನ್‌ ರೈಸರ್ಸ್ ಹೈದರಾಬಾದ್ ಐಪಿಎಲ್ ತಂಡದ ಒಡತಿ, ಸನ್ ಗ್ರೂಪ್ ಮುಖ್ಯಸ್ಥ ಕಲಾನಿಧಿ ಮಾರನ್ ಅವರ ಪುತ್ರಿ ಕಾವ್ಯಾ ಮಾರನ್ ಅದ್ದೂರಿಯಾಗಿ ಹಸೆಮಣೆ ಏರಿದ್ದಾರೆ. ಗ್ರೀಸ್‌ನಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಮದುವೆಯ ಸುಂದರ ಕ್ಷಣಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅನಿರುದ್ಧ್, ‘ನನ್ನ ಜೀವನದ ಏಕೈಕ ಮತ್ತು ಜೀವಮಾನದ ಪಯಣ (11.11)’ ಎಂದು ಶೀರ್ಷಿಕೆ ಬರೆದುಕೊಂಡಿದ್ದಾರೆ.

ನವೆಂಬರ್ 10 ಮತ್ತು 11ರಂದು ಎರಡು ದಿನಗಳ ಕಾಲ ಯುರೋಪ್‌ನ ಗ್ರೀಸ್‌ನಲ್ಲಿ ಮದುವೆ ಸಮಾರಂಭಗಳು ಜರುಗಿದವು. ಅತ್ಯಂತ ಆಪ್ತರು ಹಾಗೂ ಗಣ್ಯ ವ್ಯಕ್ತಿಗಳನ್ನು ವಿಶೇಷ ವಿಮಾನಗಳ ಮೂಲಕ ಈ ಮದುವೆಗೆ ಆಹ್ವಾನಿಸಲಾಗಿತ್ತು. ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ರಜನಿಕಾಂತ್ ಹಾಗೂ ತಮಿಳುನಾಡಿನ ಪ್ರಮುಖ ರಾಜಕೀಯ ಧುರೀಣರು ಸೇರಿದಂತೆ ಕೆಲವು ಗಣ್ಯರು ಈ ಮದುವೆ ಸಮಾರಂಭದಲ್ಲಿ ಭಾಗವಹಿಸಿ ನವಜೋಡಿಗೆ ಆಶೀರ್ವದಿಸಿದರು.

Loading...

ಮದುವೆಯ ವೇಳೆ ಈ ಜೋಡಿ ಸಾಂಪ್ರದಾಯಿಕ ಹಾಗೂ ಇಂಡೋ-ವೆಸ್ಟರ್ನ್ ಶೈಲಿಯ ಉಡುಗೆಯಲ್ಲಿ ಕಂಗೊಳಿಸಿದರು. ಅನಿರುದ್ಧ್ ಅವರು ಕ್ರೀಮ್-ಬೀಜ್ ಬಣ್ಣದ ಕುರ್ತಾ ಹಾಗೂ ಕಸ್ಟಮೈಸ್ಡ್ ಜ್ಯಾಕೆಟ್ ಧರಿಸಿದ್ದರೆ, ಕಾವ್ಯಾ ಮಾರನ್ ಅವರು ಬೆಳ್ಳಿ ಬಣ್ಣದ ಹೂವಿನ ಎಂಬ್ರಾಯ್ಡರಿ ವಿನ್ಯಾಸ ಹೊಂದಿದ್ದ ರೋಸ್-ಪಿಂಕ್ ಬಣ್ಣದ ಗೌನ್‌ನಲ್ಲಿ ದೇವತೆಯಂತೆ ಕಂಗೊಳಿಸುತ್ತಿದ್ದರು.

ಗ್ರೀಸ್‌ನಲ್ಲಿ ಮದುವೆ ಮುಗಿಸಿಕೊಂಡು ಭಾರತಕ್ಕೆ ಮರಳಲಿರುವ ಈ ಜೋಡಿಗೆ ನವೆಂಬರ್ 21ರಂದು ತಮಿಳುನಾಡಿನ ಚೆನ್ನೈನಲ್ಲಿ ಬೃಹತ್ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇತ್ತೀಚೆಗಷ್ಟೇ ಸನ್ ಗ್ರೂಪ್ ಮಾಲೀಕ ಕಲಾನಿಧಿ ಮಾರನ್ ಮತ್ತು ಕಾವೇರಿ ಮಾರನ್ ಅವರು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಮದುವೆಯ ಆರತಕ್ಷತೆಗೆ ಅಧಿಕೃತವಾಗಿ ಆಹ್ವಾನ ನೀಡಿದ್ದರು.

ಇದನ್ನೂ ಓದಿ: ಕನ್ನಡದಲ್ಲಿ ಯಾವ ಮ್ಯೂಸಿಕ್ ಡೈರೆಕ್ಟರ್​ಗಳೂ ಕೇಳದಷ್ಟು ಸಂಭಾವನೆ ಪಡೆದ ಅನಿರುದ್ಧ್ ರವಿಚಂದರ್

ನವೆಂಬರ್ 21ರಂದು ನಡೆಯಲಿರುವ ರಿಸೆಪ್ಷನ್‌ಗೆ ಚಿತ್ರರಂಗದ ಸೆಲೆಬ್ರಿಟಿಗಳು, ಉದ್ಯಮ ಕ್ಷೇತ್ರದ ಹಾಗೂ ರಾಜಕೀಯದ ಗಣ್ಯರು ಸಾಕ್ಷಿಯಾಗಲಿದ್ದಾರೆ. ಈಗ ಅನಿರುದ್ಧ್ ರವಿಚಂದರ್ ಅವರು ಹಂಚಿಕೊಂಡಿರುವ ಫೋಟೋಗಳನ್ನು ನೋಡಿ ಅನೇಕ ಸೆಲೆಬ್ರಿಟಿಗಳು ಕಮೆಂಟ್ ಮೂಲಕ ಅಭಿನಂದನೆ ತಿಳಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us