ಕಲೆಕ್ಷನ್​ ವಿಚಾರದಲ್ಲಿ ಎಲ್ಲಾ ದಾಖಲೆ ಪುಡಿ ಮಾಡಿದ ‘ಅಣ್ಣಾಥೆ’; ಇಲ್ಲಿದೆ ರಜನಿ ಚಿತ್ರದ ಮೊದಲ ದಿನದ ಗಳಿಕೆ

‘ಅಣ್ಣಾಥೆ' ಚಿತ್ರ ವಿಶ್ವಾದ್ಯಂತ ಸುಮಾರು 2200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ತಮಿಳುನಾಡು ಒಂದರಲ್ಲೇ 800ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಜನಿಕಾಂತ್ ಸಿನಿಮಾ ತೆರೆಗೆ ಬಂದಿದೆ.

ಕಲೆಕ್ಷನ್​ ವಿಚಾರದಲ್ಲಿ ಎಲ್ಲಾ ದಾಖಲೆ ಪುಡಿ ಮಾಡಿದ ‘ಅಣ್ಣಾಥೆ’; ಇಲ್ಲಿದೆ ರಜನಿ ಚಿತ್ರದ ಮೊದಲ ದಿನದ ಗಳಿಕೆ
ರಜನಿಕಾಂತ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 05, 2021 | 5:22 PM

ರಜನಿಕಾಂತ್​ ನಟನೆಯ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ. ಅವರಿಗೆ ಇರುವ ದೊಡ್ಡ ಫ್ಯಾನ್​ಬೇಸ್​ ಇದಕ್ಕೆಲ್ಲ ಕಾರಣ. ಈಗ ದೀಪಾವಳಿ ನಿಮಿತ್ತ ನವೆಂಬರ್​ 4ರಂದು ರಿಲೀಸ್​ ಆಗಿರುವ ‘ಅಣ್ಣಾಥೆ’ ಸಿನಿಮಾ ಕಲೆಕ್ಷನ್​ ವಿಚಾರದಲ್ಲಿ ಬಾಕ್ಸ್​ ಆಫೀಸ್​ ಉಡೀಸ್​ ಮಾಡಿದೆ. ಮೊದಲ ದಿನವೇ ಈ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಹಾಗಾದರೆ, ರಜನಿ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ಅಣ್ಣಾಥೆ’ ಚಿತ್ರ ವಿಶ್ವಾದ್ಯಂತ ಸುಮಾರು 2200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ತಮಿಳುನಾಡು ಒಂದರಲ್ಲೇ 800ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಜನಿಕಾಂತ್ ಸಿನಿಮಾ ತೆರೆಗೆ ಬಂದಿದೆ. ಕರ್ನಾಟಕ ಹಾಗೂ ಆಂಧ್ರ ಸೇರಿ ಮತ್ತಿತರ ರಾಜ್ಯಗಳಲ್ಲೂ ಈ ಸಿನಿಮಾ ದೊಡ್ಡ ಮಟ್ಟದಲ್ಲೇ ರಿಲೀಸ್​ ಆಗಿದೆ. ಮೊದಲ ದಿನ ಈ ಚಿತ್ರ ಗಳಿಕೆ ಮಾಡಿದ್ದು ಬರೋಬ್ಬರಿ 34.92 ಕೋಟಿ ರೂ. ಎನ್ನಲಾಗಿದೆ. ಈ ಮೂಲಕ ರಜನಿ ಸಿನಿಮಾ ಎಲ್ಲಾ ದಾಖಲೆಗಳನ್ನು ಪುಡಿ ಮಾಡಿದೆ. ತಮಿಳುನಾಡಿನಲ್ಲಿ ಮೊದಲ ದಿನ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎಂಬ ಖ್ಯಾತಿ ‘ಅಣ್ಣಾಥೆ’ ಪಾಲಾಗಿದೆ.

ರಜನಿಕಾಂತ್‌ ನಟನೆಯ  ಈ ಹಿಂದಿನ ಚಿತ್ರಗಳು ಒಳ್ಳೆಯ ಗಳಿಕೆ ಮಾಡಿದ್ದವು. ಆದರೆ, ಈ ಮಟ್ಟದ ಕಲೆಕ್ಷನ್​ ಆಗಿರಲಿಲ್ಲ. ಅವರ ನಟನೆಯ ‘2.0′ ಸಿನಿಮಾ ಮೊದಲ ದಿನ ತಮಿಳುನಾಡಿನಲ್ಲಿ 33.58 ಕೋಟಿ ರೂ. ಗಳಿಸಿತ್ತು. ಹಾಗೆಯೇ, ದಳಪತಿ ವಿಜಯ್  ನಟನೆಯ ‘ಸರ್ಕಾರ್’ ಸಿನಿಮಾ 31.62 ಕೋಟಿ ರೂ. ಗಳಿಸಿತ್ತು. ಉಳಿದ ಯಾವ ಸಿನಿಮಾಗಳು ‘ಅಣ್ಣಾಥೆ’ ಮಟ್ಟಕ್ಕೆ ಗಳಿಕೆ ಮಾಡಿಲ್ಲ. ‘ಅಣ್ಣಾಥೆ’ ಸಿನಿಮಾ ರಜನಿ ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್ ಆಗಿದೆ.

‘ಅಣ್ಣಾಥೆ’ ಸಿನಿಮಾವನ್ನು ಸನ್​ ಪಿಕ್ಚರ್ಸ್​ ನಿರ್ಮಾಣ ಮಾಡಿದೆ. ರಜನಿಕಾಂತ್​, ಕೀರ್ತಿ ಸುರೇಶ್​, ನಯನತಾರಾ, ಮೀನಾ, ಖುಷ್ಬು, ಪ್ರಕಾಶ್ ರಾಜ್, ಜಗಪತಿ ಬಾಬು ಮೊದಲಾದವರು ಪಾತ್ರವರ್ಗದಲ್ಲಿದ್ದಾರೆ. ದೀಪಾವಳಿ ನಿಮಿತ್ತ ಈ ಸಿನಿಮಾ ನವೆಂಬರ್​ 4ರಂದು ತೆರೆಗೆ ಬಂದಿದೆ. ಈಗ ಸಾಲು ಸಾಲು ರಜೆ ಇರುವುದರಿಂದ ಸಿನಿಮಾ ಗಳಿಕೆ ಅನಾಯಾಸವಾಗಿ 50 ಕೋಟಿ ರೂಪಾಯಿ ದಾಟಲಿದೆ.

ಇದನ್ನೂ ಓದಿ:Puneeth Rajkumar: ಪುನೀತ್​ ಆಸ್ಪತ್ರೆಗೆ ಹೊರಟಾಗ ಮನೆಯಲ್ಲಿ ಮೂಡಿತ್ತು ಆತಂಕದ ವಾತಾವರಣ; ಇಲ್ಲಿದೆ ಸಿಸಿಟಿವಿ ದೃಶ್ಯಾವಳಿ 

ಅಣ್ಣಾಥೆ ಶೂಟಿಂಗ್ ಮುಗಿದ ಬೆನ್ನಲ್ಲೇ ಕೊವಿಡ್ ಎರಡನೇ ಡೋಸ್ ಲಸಿಕೆ ಪಡೆದ ರಜನಿಕಾಂತ್

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್