AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮೇಲೆ ಬರಲಿದೆ ಬಯೋಪಿಕ್?

ಈಗ ಅಣ್ಣಾಮಲೈ ಕುರಿತು ಬಯೋಪಿಕ್ ಸಿದ್ಧವಾಗಲಿದೆ ಎಂದು ವರದಿ ಆಗಿದೆ. ವಿಶೇಷ ಎಂದರೆ ತಮಿಳು ನಟ ವಿಶಾಲ್ ಅವರು ಈ ಪಾತ್ರ ಮಾಡಲಿದ್ದಾರಂತೆ. ಸದ್ಯ ಎಲ್ಲವೂ ಆರಂಭ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಎಲ್ಲವೂ ಫೈನಲ್ ಆಗಲಿದೆಯಂತೆ.

ಬಿಜೆಪಿ ನಾಯಕ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮೇಲೆ ಬರಲಿದೆ ಬಯೋಪಿಕ್?
ನರೇಂದ್ರ ಮೋದಿ, ಅಣ್ಣಾಮಲೈImage Credit source: ABP Live
ರಾಜೇಶ್ ದುಗ್ಗುಮನೆ
|

Updated on: May 04, 2024 | 6:10 PM

Share

ಅಣ್ಣಾಮಲೈ (Annamalai) ಅವರು ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು. ಆ ಬಳಿಕ ಅವರು ರಾಜಕೀಯಕ್ಕೆ ಕಾಲಿಟ್ಟರು. ಬಿಜೆಪಿ ಸೇರ್ಪಡೆ ಆಗಿರುವ ಅವರು ಲೋಕಸಭಾ ಚುನಾವಣೆಯಲ್ಲಿ ಕೊಯಿಮತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಆಗಿ ಸ್ಪರ್ಧೆ ಮಾಡಿದ್ದಾರೆ. ಈಗ ಅವರ ಮೇಲೆ ಬಯೋಪಿಕ್ ಮಾಡಲು ತಮಿಳು ಚಿತ್ರರಂಗದಲ್ಲಿ ಸಿದ್ಧತೆ ನಡೆದಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಸಿನಿಪ್ರಿಯರಲ್ಲಿ ಕುತೂಹಲ ಹೆಚ್ಚಿದೆ.

ಕರೂರಿನ ಮೂಲದ ಅಣ್ಣಾಮಲೈ ಅವರು ಕೃಷಿ ಹಿನ್ನೆಲೆಯಿಂದ ಬಂದವರು. ಅವರು ಐಪಿಎಸ್ ಅಧಿಕಾರಿಯಾಗಿ ಆಯ್ಕೆ ಆದರು. ಅವರು ಕರ್ನಾಟಕದಲ್ಲಿ ಸೇವೆ ಸಲ್ಲಿಸಿ, ಸಿಂಘಂ ಎಂದೇ ಫೇಮಸ್ ಆದರು. ಆ ಬಳಿಕ ಅವರು ತಮ್ಮ ಪೋಸ್ಟ್​ನಿಂದ ನಿವೃತ್ತಿ ಪಡೆದರು. 2020ರಲ್ಲಿ ಅವರು ಬಿಜೆಪಿ ಸೇರಿದರು. ಅವರು ತಮಿಳುನಾಡು ಬಿಜೆಪಿಯ ಅಧ್ಯಕ್ಷರಾದರು. ತಮಿಳುನಾಡು ಅಧ್ಯಕ್ಷ ಸ್ಥಾನ ಪಡೆದ ಕಿರಿಯ ವ್ಯಕ್ತಿ ಎನ್ನುವ ಹೆಗ್ಗಳಿಕೆ ಅವರಿಗೆ ಸಿಕ್ಕಿದೆ.

ಈಗ ಅಣ್ಣಾಮಲೈ ಕುರಿತು ಬಯೋಪಿಕ್ ಸಿದ್ಧವಾಗಲಿದೆ ಎಂದು ವರದಿ ಆಗಿದೆ. ವಿಶೇಷ ಎಂದರೆ ತಮಿಳು ನಟ ವಿಶಾಲ್ ಅವರು ಈ ಪಾತ್ರ ಮಾಡಲಿದ್ದಾರಂತೆ. ಸದ್ಯ ಎಲ್ಲವೂ ಆರಂಭ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಎಲ್ಲವೂ ಫೈನಲ್ ಆಗಲಿದೆಯಂತೆ. ಅಣ್ಣಾಮಲೈ ಪಾತ್ರಕ್ಕೆ ವಿಶಾಲ್ ಸಾಕಷ್ಟು ಹೊಂದಿಕೆ ಆಗುತ್ತಾರೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ಇತ್ತೀಚೆಗೆ ವಿಶಾಲ್ ಕೂಡ ರಾಜಕೀಯಕ್ಕೆ ಸೇರುವ ಸೂಚನೆ ನೀಡಿದ್ದಾರೆ. ಆದರೆ, ಯಾವ ಪಕ್ಷಕ್ಕೆ ಅವರು ಸೇರ್ಪಡೆ ಆಗುತ್ತಾರೆ ಎನ್ನುವ ಮಾಹಿತಿ ಸಿಕ್ಕಿಲ್ಲ. ಅವರು ರಾಜಕೀಯಕ್ಕೆ ಸೇರುವುದಕ್ಕೂ ಮೊದಲು ಅಣ್ಣಾಮಲೈ ಬಯೋಪಿಕ್ ಮಾಡುತ್ತಾರಾ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: ಬಿಜೆಪಿಯು ಹೊಸ ರಾಜಕೀಯ ಸಮೀಕರಣಕ್ಕೆ ಭಾಷ್ಯ ಬರೆಯಲು ಮುಂದಾಗಿರುವ ತಮಿಳುನಾಡಿನಲ್ಲಿ ನಾಳೆ ಮತದಾನ

ಚುನಾವಣೆ ಸಂದರ್ಭದಲ್ಲಿ ರಾಜಕೀಯ ನಾಯಕರ ಬಯೋಪಿಕ್ ಮಾಡುವ ವಿಚಾರ ಚರ್ಚೆಗೆ ಬರುತ್ತದೆ. ಚುನಾವಣೆ ಮುಗಿದ ಬಳಿಕ ಆ ಬಗ್ಗೆ ಸೈಲೆಂಟ್ ಆಗುತ್ತಾರೆ. ಅಣ್ಣಾಮಲೈ ವಿಚಾರದಲ್ಲೂ ಇದೇ ರೀತಿ ಆಗುತ್ತದೆಯೇ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ