AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕ ರಾಜಮೌಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ ‘ದಿ ಕಾಶ್ಮೀರ್ ಫೈಲ್ಸ್​’ ನಟ ಅನುಪಮ್ ಖೇರ್

ರಾಜಮೌಳಿ ಅವರು ಹೈದರಾಬಾದ್​ನಲ್ಲಿ ವಾಸವಾಗಿದ್ದಾರೆ. ಅವರ ಮನೆಗೆ ಅನುಪಮ್ ಖೇರ್ ಅವರು ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ರಾಜಮೌಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ್ದಾರೆ.

ನಿರ್ದೇಶಕ ರಾಜಮೌಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ ‘ದಿ ಕಾಶ್ಮೀರ್ ಫೈಲ್ಸ್​’ ನಟ ಅನುಪಮ್ ಖೇರ್
ರಾಜಮೌಳಿ-ಅನುಪಮ್ ಖೇರ್
TV9 Web
| Edited By: |

Updated on:Aug 03, 2022 | 9:34 PM

Share

ನಟ ಅನುಪಮ್ ಖೇರ್ (Anupam Kher)​ ಹಾಗೂ ನಿರ್ದೇಶಕ ಎಸ್​​.ಎಸ್​. ರಾಜಮೌಳಿ (SS Rajamouli) ಇಬ್ಬರೂ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇಬ್ಬರೂ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅನುಪಮ್ ಖೇರ್ ನಟನೆಯ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಚಿತ್ರ (RRR Movie) ಗೆದ್ದು ಬೀಗಿದೆ. ಈಗ ರಾಜಮೌಳಿ ಮನೆಗೆ ಅನುಪಮ್ ಖೇರ್ ಭೇಟಿ ನೀಡಿದ್ದಾರೆ. ಖ್ಯಾತ ನಿರ್ದೇಶಕನಿಗೆ ಶಾಲು ಹೊದಿಸಿ ಅವರು ಸನ್ಮಾನ ಮಾಡಿದ್ದಾರೆ. ಈ ವಿಡಿಯೋವನ್ನು ಅನುಪಮ್ ಖೇರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ರಾಜಮೌಳಿ ಅವರ ಸರಳತೆಯನ್ನು ಕೊಂಡಾಡಿದ್ದಾರೆ.

ರಾಜಮೌಳಿ ಅವರು ಹೈದರಾಬಾದ್​ನಲ್ಲಿ ವಾಸವಾಗಿದ್ದಾರೆ. ಅವರ ಮನೆಗೆ ಅನುಪಮ್ ಖೇರ್ ಅವರು ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ರಾಜಮೌಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ್ದಾರೆ. ರಾಜಮೌಳಿ ಅವರ ಸರಳತೆ ಕಂಡು ಅನುಪ್​ ಖೇರ್ ಅವರು ಅಚ್ಚರಿ ಹೊರಹಾಕಿದ್ದಾರೆ.

‘ರಾಮಾಜಿ ಹಾಗೂ ರಾಜಮೌಳಿ, ನಿಮ್ಮ ಪ್ರೀತಿಗೆ, ರುಚಿಯಾದ ಮಧ್ಯಾಹ್ನದ ಊಟಕ್ಕೆ ಧನ್ಯವಾದಗಳು. ನಿಮ್ಮದೇ ಮನೆಯಲ್ಲಿ ಶಾಲು ಹೊದಿಸಿ ನಿಮ್ಮನ್ನು ಸ್ವಾಗತಿಸಲು ನನಗೆ ಸಂತೋಷವಿದೆ. ನಿಮ್ಮ ಸರಳತೆ ಮತ್ತು ನಮ್ರತೆ ನನಗೆ ಇಷ್ಟವಾಯಿತು. ನಿಮ್ಮಿಬ್ಬರಿಂದ ಕಲಿಯುವುದು ತುಂಬಾ ಇದೆ’ ಎಂದು ಅನುಪಮ್ ಖೇರ್ ಅವರು ಬರೆದುಕೊಂಡಿದ್ದಾರೆ.

ಚಿತ್ರರಂಗದಲ್ಲಿ ಗುರುತಿಸಿಕೊಂಡ ಇಬ್ಬರು ಭೇಟಿ ಆದರೆ ಆ ಬಗ್ಗೆ ಸಾಕಷ್ಟು ಕುತೂಹಲಗಳು ಹುಟ್ಟಿಕೊಳ್ಳುತ್ತವೆ. ಅದೇ ರೀತಿ ಇವರ ಭೇಟಿ ಕೂಡ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ‘ನೀವಿಬ್ಬರೂ ಹೊಸ ಪ್ರಾಜೆಕ್ಟ್​​ಗಾಗಿ ಒಂದಾಗುತ್ತಿದ್ದೀರಾ?’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.  ಇನ್ನೂ ಕೆಲವರು ಅನುಪಮ್ ಖೇರ್ ಹಾಗೂ ರಾಜಮೌಳಿ ಇಬ್ಬರ ಸರಳತೆಯನ್ನು ಕೊಂಡಾಡಿದ್ದಾರೆ.

View this post on Instagram

A post shared by Anupam Kher (@anupampkher)

ಇದನ್ನೂ ಓದಿ: ‘ವಿಕ್ರಾಂತ್​ ರೋಣ’ ರಿಲೀಸ್​ಗೂ ಮುನ್ನ ಸುದೀಪ್​ಗೆ ಪ್ರೀತಿಯಿಂದ ವಿಶ್ ಮಾಡಿದ ನಿರ್ದೇಶಕ ರಾಜಮೌಳಿ

ಕಾಶ್ಮೀರಿ ಪಂಡಿತರ ವಲಸೆ ಹಾಗೂ ಹತ್ಯೆ ಆಧರಿಸಿ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡಿದೆ. ಒಟಿಟಿಯಲ್ಲೂ ಚಿತ್ರ ಸಾಕಷ್ಟು ಒಳ್ಳೆಯ ವಿಮರ್ಶೆ ಪಡೆದುಕೊಂಡಿದೆ. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 1000+ ಕೋಟಿ ರೂಪಾಯಿ ಗಳಿಕೆ ಮಾಡಿದೆ ಅನ್ನೋದು ವಿಶೇಷ.

Published On - 9:33 pm, Wed, 3 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್