‘ನನ್ನ ಸೋಶಿಯಲ್ ಮೀಡಿಯಾ, ನಾನು ಏನು ಬೇಕಾದ್ರೂ ಪೋಸ್ಟ್ ಮಾಡ್ತೀನಿ’; ಅನುಪಮಾ ಪರಮೇಶ್ವರನ್

ನಟಿ ಅನುಪಮಾ ಪರಮೇಶ್ವರನ್ ಹಾಗೂ ಧ್ರುವ್ ವಿಕ್ರಮ್ ನಡುವಿನ ಬ್ರೇಕಪ್ ವದಂತಿಗಳಿಗೆ ನಟಿ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ. ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮ ವೈಯಕ್ತಿಕ ಜೀವನದ ಬಗ್ಗೆ ಯಾರಿಗೂ ಏನೂ ತಿಳಿಯದು. ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮಗೆ ಇಷ್ಟ ಬಂದಿದ್ದನ್ನು ಪೋಸ್ಟ್ ಮಾಡುವುದಾಗಿ ಖಡಕ್ ಆಗಿ ಹೇಳಿದ್ದಾರೆ.

‘ನನ್ನ ಸೋಶಿಯಲ್ ಮೀಡಿಯಾ, ನಾನು ಏನು ಬೇಕಾದ್ರೂ ಪೋಸ್ಟ್ ಮಾಡ್ತೀನಿ’; ಅನುಪಮಾ ಪರಮೇಶ್ವರನ್
ಅನುಪಮಾ

Updated on: Aug 03, 2026 | 11:54 AM

ಮಲಯಾಳಂ ಮೂಲದ ಖ್ಯಾತ ನಟಿ ಅನುಪಮಾ ಪರಮೇಶ್ವರನ್ (Anupama Parameshwaran) ಹಾಗೂ ಅವರ ಸಹನಟ ಧ್ರುವ್ ವಿಕ್ರಮ್ ನಡುವೆ ಬ್ರೇಕಪ್ ಆಗಿದೆ ಎಂಬ ವದಂತಿಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದವು. ಅನುಪಮಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸಾಕಷ್ಟು ಕ್ರಿಪ್ಟಿಕ್ ಪೋಸ್ಟ್‌ಗಳನ್ನು ಹಂಚಿಕೊಂಡ ಬೆನ್ನಲ್ಲೇ ಈ ಚರ್ಚೆ ಶುರುವಾಗಿತ್ತು. ಈ ಪೋಸ್ಟ್​​ಗಳ ಬಗ್ಗೆ ನಟಿ ಅನುಪಮಾ ಕಾರ್ಯಕ್ರಮವೊಂದರಲ್ಲಿ ಖಡಕ್ ಉತ್ತರ ನೀಡಿದ್ದಾರೆ.

ಇತ್ತೀಚೆಗೆ ನಡೆದ ಅವರ ಮುಂಬರುವ ಚಿತ್ರದ ಇವೆಂಟ್‌ನಲ್ಲಿ ಮಾಧ್ಯಮದವರು ಈ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ‘ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ನೀವು ಹಂಚಿಕೊಳ್ಳುತ್ತಿರುವ ಪೋಸ್ಟ್‌ಗಳ ಮೂಲಕ ನಿಮ್ಮ ಒಳಗಿನ ನೋವನ್ನು ಹೊರಹಾಕುತ್ತಿದ್ದೀರಾ? ಇದು ನಿಜಕ್ಕೂ ಅಗತ್ಯವಿತ್ತಾ?’ ಎಂದು ಪ್ರಶ್ನಿಸಲಾಗಿದೆ.

ಇದಕ್ಕೆ ಉತ್ತರಿಸಿದ ನಟಿ, ’ಇದು ನನ್ನ ಸೋಶಿಯಲ್ ಮೀಡಿಯಾ ಖಾತೆ. ಅದರಲ್ಲಿ ಏನನ್ನು ಪೋಸ್ಟ್ ಮಾಡಬೇಕು ಎಂಬುದನ್ನು ನಾನೇ ನಿರ್ಧರಿಸುತ್ತೇನೆ. ನಾನು ನನ್ನ ಒಳಗಿನ ಬೇಸರವನ್ನೇನೂ ಹೊರಹಾಕುತ್ತಿರಲಿಲ್ಲ. ಬದಲಿಗೆ, ಮಹಿಳೆಯೊಬ್ಬಳ ಜೀವನದ ಬದಲಾವಣೆಗಳ ಬಗ್ಗೆ ಮಾತನಾಡುತ್ತಿದ್ದೆ. ಹಾಗೆ ಮಾಡಿದ್ದಕ್ಕೆ ನನಗೆ ಹೆಮ್ಮೆ ಇದೆ’ ಎಂದಿದ್ದಾರೆ.

ಇದನ್ನೂ ಓದಿ: ಧ್ರುವ್ ವಿಕ್ರಮ್ ಜೊತೆಗಿನ ಬ್ರೇಕಪ್ ಬಗ್ಗೆ ಮೌನ ಮುರಿದ ಅನುಪಮಾ ಪರಮೇಶ್ವರನ್

‘ಇದು ನಿಮ್ಮ ಎದುರಾಳಿಯನ್ನು ದೂಷಿಸುವ ತಂತ್ರ ಅಲ್ಲವೇ’ ಎಂದು ಮರು ಪ್ರಶ್ನೆ ಮಾಡಲಾಗಿದೆ. ಇದಕ್ಕೆ ನಟಿ ಮತ್ತಷ್ಟು ಗರಂ ಆಗಿದ್ದಾರೆ. ‘ನಿಮಗೆ ನನ್ನ ಬಗ್ಗೆ ಏನು ಗೊತ್ತು? ನನ್ನ ವೈಯಕ್ತಿಕ ಜೀವನದ ಬಗ್ಗೆ ನಿಮಗೆ ಏನು ತಿಳಿದಿದೆ? ಯಾರಿಗೂ ಏನೂ ಗೊತ್ತಿಲ್ಲ. ಆದ್ದರಿಂದ ಇದು ಸರಿ ಅಲ್ಲ. ನನ್ನ ಇನ್‌ಸ್ಟಾಗ್ರಾಮ್‌ನಲ್ಲಿ ನನಗೆ ಇಷ್ಟ ಬಂದಿದ್ದನ್ನು ನಾನು ಪೋಸ್ಟ್ ಮಾಡುತ್ತೇನೆ’ ಎಂದು ಹೇಳುವ ಮೂಲಕ ತಮ್ಮ ವೈಯಕ್ತಿಕ ಜೀವನದ ಬಗ್ಗೆ ವದಂತಿ ಹಬ್ಬಿಸುವವರಿಗೆ ನೇರವಾಗಿಯೇ ತಪರಾಕಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us