AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾ ಟೀಸರ್ ಬಗ್ಗೆ ಅನುರಾಗ್ ಕಶ್ಯಪ್ ಹೇಳಿದ್ದೇನು?

Toxic movie teaser: ‘ಟಾಕ್ಸಿಕ್’ ಸಿನಿಮಾ ಟೀಸರ್ ನೋಡಿದವರು ಸಿನಿಮಾದ ರಿಚ್​​ಬೆಸ್, ಬೋಲ್ಡ್​​ನೆಸ್ ಅನ್ನು ಕೊಂಡಾಡಿದ್ದರು. ಆದರೆ ಇನ್ನು ಕೆಲವರು ಸಿನಿಮಾದ ಟೀಸರ್​​ನಲ್ಲಿರುವ ಕೆಲ ದೃಶ್ಯಗಳಿಗೆ ಆಕ್ಷೇಪ ಎತ್ತಿದ್ದರು. ‘ಟಾಕ್ಸಿಕ್’ ಸಿನಿಮಾದ ಟೀಸರ್ ಅಶ್ಲೀಲವಾಗಿದೆ, ಪುರುಷ ಅಹಂಕಾರದಿಂದ ತುಂಬಿದೆ ಎಂದೆಲ್ಲ ವಿಮರ್ಶೆ ಮಾಡಲಾಗಿತ್ತು. ಇದೀಗ ಬಾಲಿವುಡ್​ನ ಜನಪ್ರಿಯ ನಿರ್ದೇಶಕ ಅನುರಾಗ್ ಕಶ್ಯಪ್ ‘ಟಾಕ್ಸಿಕ್’ ಟೀಸರ್ ಬಗ್ಗೆ ಮಾತನಾಡಿದ್ದಾರೆ.

‘ಟಾಕ್ಸಿಕ್’ ಸಿನಿಮಾ ಟೀಸರ್ ಬಗ್ಗೆ ಅನುರಾಗ್ ಕಶ್ಯಪ್ ಹೇಳಿದ್ದೇನು?
Toxic Teaser
ಮಂಜುನಾಥ ಸಿ.
|

Updated on: Feb 01, 2026 | 9:17 PM

Share

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್​​ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿ ಭಾರಿ ವೈರಲ್ ಆಗಿತ್ತು. ಅತ್ಯಂತ ಕಡಿಮೆ ಅವಧಿಯಲ್ಲಿ ದಾಖಲೆ ಸಂಖ್ಯೆಯ ವೀಕ್ಷಣೆಗಳನ್ನು ‘ಟಾಕ್ಸಿಕ್’ ಸಿನಿಮಾ ಟೀಸರ್ ಗಳಿಸಿಕೊಂಡಿತ್ತು. ಸಿನಿಮಾದ ಟೀಸರ್ ನೋಡಿದವರು ಸಿನಿಮಾದ ರಿಚ್​​ಬೆಸ್, ಬೋಲ್ಡ್​​ನೆಸ್ ಅನ್ನು ಕೊಂಡಾಡಿದ್ದರು. ಆದರೆ ಇನ್ನು ಕೆಲವರು ಸಿನಿಮಾದ ಟೀಸರ್​​ನಲ್ಲಿರುವ ಕೆಲ ದೃಶ್ಯಗಳಿಗೆ ಆಕ್ಷೇಪ ಎತ್ತಿದ್ದರು. ‘ಟಾಕ್ಸಿಕ್’ ಸಿನಿಮಾದ ಟೀಸರ್ ಅಶ್ಲೀಲವಾಗಿದೆ, ಪುರುಷ ಅಹಂಕಾರದಿಂದ ತುಂಬಿದೆ ಎಂದೆಲ್ಲ ವಿಮರ್ಶೆ ಮಾಡಲಾಗಿತ್ತು. ಇದೀಗ ಬಾಲಿವುಡ್​ನ ಜನಪ್ರಿಯ ನಿರ್ದೇಶಕ ಅನುರಾಗ್ ಕಶ್ಯಪ್ ‘ಟಾಕ್ಸಿಕ್’ ಟೀಸರ್ ಬಗ್ಗೆ ಮಾತನಾಡಿದ್ದಾರೆ.

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಏರ್ಪಡಿಸಲಾಗಿದ್ದ ಸಂವಾದದಲ್ಲಿ ಮಾತನಾಡಿದ ಅನುರಾಗ್ ಕಶ್ಯಪ್ ಅವರು, ‘ಟಾಕ್ಸಿಕ್’ ಸಿನಿಮಾದ ಟೀಸರ್ ಅನ್ನು ‘ಒಂದು ಧೈರ್ಯಶಾಲಿ ಯತ್ನ’ ಎಂದು ಬಣ್ಣಿಸಿದ್ದಾರೆ. ‘ಟೀಸರ್ ವಿರುದ್ಧ ವ್ಯಕ್ತವಾಗಿರುವ ಆಕ್ರೋಶ ನಮ್ಮ ಸಮಾಜದ ಸಾಂಸ್ಕೃತಿಕ ಬೂಟಾಟಿಕೆಯನ್ನು ಬಹಿರಂಗಪಡಿಸುತ್ತಿದೆ. ಪುರುಷ ನಟರು ಪರದೆಯ ಮೇಲೆ ಶರ್ಟ್‌ ಧರಿಸದೆ ಬರಿಮೈಯಲ್ಲಿ ಕಾಣಿಸಿಕೊಂಡಾಗ ಅಥವಾ ಅತಿಯಾದ ಪುರುಷತ್ವವನ್ನು ಪ್ರದರ್ಶಿಸಿದಾಗ, ಯಾರೂ ಅದನ್ನು ಪ್ರಶ್ನಿಸುವುದಿಲ್ಲ. ಆದರೆ ಒಬ್ಬ ಮಹಿಳೆ ತನ್ನ ಲೈಂಗಿಕತೆಯನ್ನು ಆಚರಿಸಿದಾಗ, ಅದನ್ನು ಒಪ್ಪಿಕೊಳ್ಳುವುದಿಲ್ಲ’ ಎಂದು ಕಶ್ಯಪ್ ಹೇಳಿದ್ದಾರೆ.

ಇದನ್ನೂ ಓದಿ:‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಕನ್ನಡದ ಮಹಿಳಾ ನಿರ್ದೇಶಕಿ

‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆದ ಬಳಿಕ ಕೆಲವರು ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ದಾಖಲಿಸಿದ್ದು, ಟೀಸರ್​​ನಲ್ಲಿ ಮಹಿಳೆಯರನ್ನು ಭೋಗದ ವಸ್ತುಗಳನ್ನಾಗಿ ತೋರಿಸಲಾಗಿದೆ ಎಂದಿದ್ದಾರೆ. ಒಬ್ಬ ಸಾಮಾಜಿಕ ಕಾರ್ಯಕರ್ತರಂತೂ ಸಿಬಿಎಫ್​​ಸಿಗೆ ದೂರು ನೀಡಿದ್ದು, ‘ಟಾಕ್ಸಿಕ್’ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಬಾರದು ಎಂದು ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಹ ಹಲವಾರು ಮಂದಿ ‘ಟಾಕ್ಸಿಕ್’ ನಿಜಕ್ಕೂ ಟಾಕ್ಸಿಕ್ ಆಗಿದೆ ಎಂದು ಮೂಗು ಮುರಿದಿದ್ದಾರೆ.

‘ಟಾಕ್ಸಿಕ್’ ಟೀಸರ್​​ನಲ್ಲಿ ಯಶ್, ಮಹಿಳೆಯೊಬ್ಬರೊಟ್ಟಿಗೆ ಲೈಂಗಿಕತೆಯಲ್ಲಿ ತೊಡಗಿರುವ ದೃಶ್ಯವಿದೆ. ಇದು ಹಲವರ ಟೀಕೆಗೆ ಕಾರಣವಾಗಿದೆ. ಆದರೆ ಇನ್ನು ಕೆಲವರು ಸಿನಿಮಾನಲ್ಲಿ ಇದೆಲ್ಲ ಸಾಮಾನ್ಯ ಎಂದಿದ್ದಾರೆ. ಟೀಸರ್ ನೋಡಿ, ಸಿನಿಮಾ ಹೀಗೆಯೇ ಇರಲಿದೆ ಎಂದು ಊಹಿಸುವಂತಿಲ್ಲ ಎಂದಿದ್ದಾರೆ.

‘ಟಾಕ್ಸಿಕ್’ ಸಿನಿಮಾವನ್ನು ಗೀತು ಮೋಹನ್​​ದಾಸ್ ನಿರ್ದೇಶನ ಮಾಡಿದ್ದು, ಸಿನಿಮಾನಲ್ಲಿ ಯಶ್ ಜೊತೆಗೆ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಹಲವು ಹಾಲಿವುಡ್ ನಟ-ನಟಿಯರು ಸಹ ಈ ಸಿನಿಮಾನಲ್ಲಿದ್ದಾರೆ. ಸಿನಿಮಾಕ್ಕೆ ಕೆವಿಎನ್ ಮತ್ತು ಯಶ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us