AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara Movie: ಬಾಲಿವುಡ್​ನಲ್ಲೂ ಧೂಳೆಬ್ಬಿಸುತ್ತಿರುವ ಕಾಂತಾರ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಭೇಟಿ ಮಾಡಿದ ಚಿತ್ರತಂಡ

Kantara Movie in Hindi: ಸಿನಿಮಾ ಪ್ರೇಕ್ಷಕರು ‘ಕಾಂತಾರ’ ಚಿತ್ರವನ್ನು ನೋಡಿ ಕಥೆ, ರಿಷಭ್ ನಟನೆ ಬಗ್ಗೆ ಹಾಡಿಹೊಗಳುತ್ತಿದ್ದಾರೆ. ಇದರ ನಡುವೆ ನಿರ್ಮಾಪಕ ವಿಜಯ್ ಕುಮಾರ್ ಕಿರಗಂದೂರು ಮತ್ತು ಹೊಂಬಾಳೆ (Hombale Films) ತಂಡದವರು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದಾರೆ.

Kantara Movie: ಬಾಲಿವುಡ್​ನಲ್ಲೂ ಧೂಳೆಬ್ಬಿಸುತ್ತಿರುವ ಕಾಂತಾರ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಭೇಟಿ ಮಾಡಿದ ಚಿತ್ರತಂಡ
Anurag Thakur with Kantara Moovie Team
TV9 Web
| Updated By: Vinay Bhat

Updated on:Oct 15, 2022 | 12:31 PM

Share

ರಿಷಬ್​ ಶೆಟ್ಟಿ (Rishab Shetty) ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ಇದೀಗ ದೇಶದ ಎಲ್ಲೆಡೆ ಹವಾ ಸೃಷ್ಟಿ ಮಾಡಿದೆ. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೆ ‘ಕಾಂತಾರ’ ಕ್ರಾಂತಿ ಬಾಲಿವುಡ್​ನಲ್ಲೂ ಶುರುವಾಗಿದೆ. ಸಿನಿಮಾ ಪ್ರೇಕ್ಷಕರು ‘ಕಾಂತಾರ’ ಚಿತ್ರವನ್ನು ನೋಡಿ ಕಥೆ, ರಿಷಭ್ ನಟನೆ ಬಗ್ಗೆ ಹಾಡಿಹೊಗಳುತ್ತಿದ್ದಾರೆ. ಸೆಪ್ಟೆಂಬರ್ 30ರಂದು ‘ಕಾಂತಾರ’ (Kantara) ರಾಜ್ಯಾದ್ಯಂತ ತೆರೆಕಂಡು ದೊಡ್ಡ ಮಟ್ಟದಲ್ಲಿ ಈಗಲೂ ಸೌಂಡ್ ಮಾಡುತ್ತಿದೆ. ದಿನದಿಂದ ದಿನಕ್ಕೆ ಪ್ರೇಕ್ಷಕ ಸಮೂಹವನ್ನ ಹೆಚ್ಚಿಸಿಕೊಳ್ಳುತ್ತಿರುವ ‘ಕಾಂತಾರ’ದ ಕಲೆಕ್ಷನ್ 100 ಕೋಟಿ ಕ್ಲಬ್ ಸೇರುವ ಎಲ್ಲ ಲಕ್ಷಣಗಳು ಗೋಚರಿಸುತ್ತವೆ. ಇದಕ್ಕೆ ಮುಖ್ಯ ಕಾರಣ ಹಿಂದಿಯಲ್ಲೂ ಕಾಂತಾರ ಅಬ್ಬರ ಜೋರಾಗಿರುವುದು. ಬಾಲಿವುಡ್​ನಲ್ಲಿ ಈ ಸಿನಿಮಾ ಬಿಡುಗಡೆ ಆಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ನಿರ್ಮಾಪಕ ವಿಜಯ್ ಕುಮಾರ್ ಕಿರಗಂದೂರು ಮತ್ತು ಹೊಂಬಾಳೆ (Hombale Films) ತಂಡದವರು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವರು, ”ಹೊಂಬಾಳೆ ಫಿಲಂಸ್ ತಂಡದವರನ್ನು ಭೇಟಿ ಮಾಡಿ, ಚಿತ್ರದ ಯಶಸ್ಸಿಗೆ ಶುಭ ಹಾರೈಸಿದ್ದೇನೆ. ಭಾರತವನ್ನು ಜಗತ್ತಿನ ಸಿನಿಮಾ ಹಬ್ ಮಾಡುವ ಹೊಂಬಾಳೆ ಫಿಲಂಸ್‌ನವರ ಯೋಜನೆಗಳನ್ನು ಕೇಳಿ ಖುಷಿಯಾಗಿದೆ,” ಎಂದು ಬರೆದುಕೊಂಡಿದ್ದಾರೆ. ಭೇಟಿಯ ನಂತರ ಮಾತನಾಡಿದ ವಿಜಯ್ ಕುಮಾರ್ ಕಿರಗಂದೂರು, ”ಕೇಂದ್ರ ಸಚಿವ ಅನುರಾಗ ಠಾಕೂರ್ ಅವರೊಂದಿಗೆ ಬಹಳ ಅದ್ಭುತವಾದ ಸಭೆಯಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿತು. ನಮ್ಮ ಸಂಸ್ಕೃತಿಯನ್ನು ಸಿನಿಮಾಗಳ ಮೂಲಕ ಸಾರುವ ಮತ್ತು ಭಾರತವನ್ನು ವಿಶ್ವದ ಸಿನಿಮಾ ಹಬ್ ಮಾಡುವ ವಿಷಯಗಳೂ ಸೇರಿದಂತೆ ಸಾಕಷ್ಟು ವಿಷಯಗಳನ್ನು ಅವರೊಂದಿಗೆ ಚರ್ಚಿಸಲಾಯಿತು,” ಎಂದು ಹೇಳಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ವಿಜಯ್ ಜೊತೆ ಚೆಲುವೇಗೌಡ ಹಾಗೂ ಕಾರ್ತಿಕ್ ಗೌಡ ಕೂಡ ಹಾಜರಿದ್ದರು.

ಇದನ್ನೂ ಓದಿ
Image
Shubhamangala: ‘ಶುಭಮಂಗಳ’ ಸಿನಿಮಾ ವಿಮರ್ಶೆ; ಇದು ಆರು ಪ್ರೇಮಕಥೆಗಳ ಸುಂದರ ಸಂಕಲನ
Image
‘ಜೊತೆ ಜೊತೆಯಲಿ’ ಧಾರಾವಾಹಿ: ಭಾರೀ ಅಪಾಯದ ಮುನ್ಸೂಚನೆ ನೀಡಿದ ಆರ್ಯವರ್ಧನ್​
Image
‘ಕನ್ನಡತಿ’ ಧಾರಾವಾಹಿಯಲ್ಲಿ ಕೊನೆಯಾಗಲಿದೆ ರತ್ನಮಾಲಾ ಪಾತ್ರ? ಅನುಮಾನ ಹುಟ್ಟಿಸಿತು ಆ ಒಂದು ಘಟನೆ
Image
ಹಿರಿಯ ನಟ ಲೋಹಿತಾಶ್ವ ಆರೋಗ್ಯ ಈಗ ಹೇಗಿದೆ? ಅಪ್ಪನ ಹೆಲ್ತ್​ ಅಪ್​ಡೇಟ್​ ಕೊಟ್ಟ ಪುತ್ರ

ಹಿಂದಿಯಲ್ಲಿ ಸುಮಾರು 2500 ಸ್ಕ್ರೀನ್‌ಗಳಲ್ಲಿ ‘ಕಾಂತಾರ’ ರಿಲೀಸ್ ಆಗಿದೆ. ಬಾಲಿವುಡ್​ನಲ್ಲಿ ಕಾಂತಾರಕ್ಕೆ ಮೊದಲ ದಿನದ ರೆಸ್ಪಾನ್ಸ್ ಅದ್ಭುತವಾಗಿದೆ. ಫಸ್ಟ್ ಡೇನೇ ಈ ಸಿನಿಮಾ ಸುಮಾರು 2500 ಸ್ಕ್ರೀನ್‌ಗಳಿಂದ 1.30 ಕೋಟಿ ರೂ. ಯಿಂದ 1.50 ಕೋಟಿ ರೂ. (Net) ಕಲೆಕ್ಷನ್ ಮಾಡಿರಬಹುದು ಎಂದು ಟ್ರೇಡ್ ಅನಲಿಸ್ಟ್‌ಗಳು ಅಂದಾಜು ಮಾಡಿದ್ದಾರೆ. ಒಟ್ಟರೆ ಕರ್ನಾಟಕದಲ್ಲಿ ಕಾಂತಾರ 60 ಕೋಟಿಗೆ ಮೀರಿದ ಕಲೆಕ್ಷನ್ ಅನ್ನ ಎರಡುವಾರಕ್ಕೆ ಮಾಡಿದೆ. ಕರ್ನಾಟಕದಲ್ಲೇ ನಾಲ್ಕು ವಾರ ಮುಗಿಯೋಷ್ಟರಲ್ಲಿ ನೂರು ಕೋಟಿ ‘ಕಾಂತಾರ’ ಕಲೆಕ್ಷನ್ ಮಾಡುತ್ತದೆ ಎಂಬ ಮಾತುಗಳು ಕೇಳಿಬರುತ್ತಿದೆ.

ನಟ ರಿಷಬ್ ಶೆಟ್ಟಿ ಅಭಿನಯಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಕರಾವಳಿ ಭಾಗದ ಸೊಗಡಿನ ದೈವದ ಕಥೆ ಆಧರಿಸಿದ್ದಾಗಿದೆ. ವಿಜಯ್​ ಕಿರಗಂದೂರು ಅವರ ಹೊಂಬಾಳೆ ಫಿಲಂಸ್ ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಸಿನಿಮಾದಲ್ಲಿ ರಿಷಬ್​ ಶೆಟ್ಟಿ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಅಚ್ಯುತ್​ ಕುಮಾರ್​, ಪ್ರಮೋದ್​ ಶೆಟ್ಟಿ, ಕಿಶೋರ್ ಮುಂತಾದವರು ಮುಖ್ಯ ಪಾತ್ರಗಳನ್ನು ನಿಭಾಯಿಸಿದ್ದಾರೆ. ಅಜನೀಶ್​ ಬಿ. ಲೋಕನಾಥ್​ ಅವರ ಸಂಗೀತ, ಅರವಿಂದ್​ ಎಸ್​. ಕಶ್ಯಪ್​ ಅವರ ಛಾಯಾಗ್ರಹಣ ಅದ್ಭುತವಾಗಿ ಮೂಡಿಬಂದಿದೆ.

Published On - 12:30 pm, Sat, 15 October 22

ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ