ಕಾನ್​ ಸಿನಿಮೋತ್ಸವದಲ್ಲಿ ಅನುಷ್ಕಾ ಶರ್ಮಾ; ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಲಿದ್ದಾರೆ ನಟಿ

Cannes Film Festival: ದೀಪಿಕಾ ಪಡುಕೋಣೆ ಅವರು ಕಳೆದ ವರ್ಷ ಕಾನ್​ ಫಿಲ್ಮ್​ ಫೆಸ್ಟಿವಲ್​ನಲ್ಲಿ ಭಾಗಿ ಆಗಿದ್ದರು. ವಿವಿಧ ರೀತಿಯ ಡ್ರೆಸ್ ಧರಿಸಿ ಅವರು ಮಿಂಚಿದ್ದರು. ಈ ಬಾರಿ ಅನುಷ್ಕಾ ಶರ್ಮಾ ಅವರಿಗೆ ಆಹ್ವಾನ ಬಂದಿದೆ.

ಕಾನ್​ ಸಿನಿಮೋತ್ಸವದಲ್ಲಿ ಅನುಷ್ಕಾ ಶರ್ಮಾ; ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಲಿದ್ದಾರೆ ನಟಿ
ಅನುಷ್ಕಾ ಶರ್ಮಾ
Follow us
ರಾಜೇಶ್ ದುಗ್ಗುಮನೆ
|

Updated on:May 05, 2023 | 8:13 AM

ಫ್ರಾನ್ಸ್​ನಲ್ಲಿ ನಡೆಯುವ ಕಾನ್ ಸಿನಿಮೋತ್ಸವಕ್ಕೆ ಹಲವು ದೇಶಗಳಿಂದ ಸೆಲೆಬ್ರಿಟಿಗಳು ಬರುತ್ತಾರೆ. ಕೆಂಪುಹಾಸಿನ ಮೇಲೆ ಹೆಜ್ಜೆ ಹಾಕಿ ಗಮನ ಸೆಳೆಯುತ್ತಾರೆ. 2023ನೇ ಸಾಲಿನ ಕಾನ್ ಸಿನಿಮೋತ್ಸವ (Cannes Film Festival) ಮೇ 16ರಿಂದ ಆರಂಭವಾಗಿ ಮೇ 27ರವರೆಗೆ ನಡೆಯಲಿದೆ. ಈ ವರ್ಷ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರಿಗೆ ಆಹ್ವಾನ ಸಿಕ್ಕಿದೆ. ಅವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವ ವಿಚಾರವನ್ನು ಭಾರತದಲ್ಲಿರುವ ಫ್ರೆಂಚ್ ರಾಯಭಾರಿ ಇಮ್ಯಾನ್ಯುವೆಲ್ ಲುನಾ ಅವರು ಖಚಿತಪಡಿಸಿದ್ದಾರೆ. ಅನುಷ್ಕಾ ಶರ್ಮಾ ಹಾಗೂ ಅವರ ಪತಿ, ಕ್ರಿಕೆಟರ್ ವಿರಾಟ್ ಕೊಹ್ಲಿಯನ್ನು (Virat Kohli) ಭೇಟಿ ಆಗಿದ್ದಾರೆ.

ದೀಪಿಕಾ ಪಡುಕೋಣೆ ಅವರು ಕಳೆದ ವರ್ಷ ಕಾನ್​ ಫಿಲ್ಮ್​ ಫೆಸ್ಟಿವಲ್​ನಲ್ಲಿ ಭಾಗಿ ಆಗಿದ್ದರು. ವಿವಿಧ ರೀತಿಯ ಡ್ರೆಸ್ ಧರಿಸಿ ಅವರು ಮಿಂಚಿದ್ದರು. ಈ ಬಾರಿ ಅನುಷ್ಕಾ ಶರ್ಮಾ ಅವರಿಗೆ ಆಹ್ವಾನ ಬಂದಿದೆ. ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗುತ್ತಿರುವುದು ಇದೇ ಮೊದಲು ಅನ್ನೋದು ವಿಶೇಷ.

ಟ್ವಿಟರ್​ನಲ್ಲಿ ಈ ಬಗ್ಗೆ ಇಮ್ಯಾನ್ಯುವೆಲ್ ಅವರು ಬರೆದುಕೊಂಡಿದ್ದಾರೆ. ‘ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಅವರನ್ನು ಭೇಟಿ ಮಾಡಿದ್ದು ಖುಷಿ ನೀಡಿತು. ವಿರಾಟ್ ಹಾಗೂ ಟೀಂ ಇಂಡಿಯಾಗೆ ನಾನು ವಿಶ್ ಮಾಡಿದೆ. ಕಾನ್ ಸಿನಿಮೋತ್ಸವದ ಕುರಿತು ಅನುಷ್ಕಾ ಜೊತೆ ಚರ್ಚೆ ಮಾಡಿದೆ’ ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ದಂಪತಿ ಜೊತೆ ಇರುವ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

‘ಈ ಸುದ್ದಿಯನ್ನು ತಿಳಿಸಿದ್ದಕ್ಕೆ ಧನ್ಯವಾದ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು, ‘ಸಂತೋಷದ ಸುದ್ದಿ’ ಎಂದು ಬರೆದುಕೊಂಡಿದ್ದಾರೆ. ಹಲವರು ವಿರಾಟ್ ಹಾಗೂ ಅನುಷ್ಕಾ ಅವರನ್ನು ‘ಕಿಂಗ್ ಆ್ಯಂಡ್ ಕ್ವೀನ್’ ಎಂದು ಕರೆದಿದ್ದಾರೆ.

ಸದ್ಯ ವಿರಾಟ್ ಕೊಹ್ಲಿ ಅವರು ಐಪಿಎಲ್​ನಲ್ಲಿ ಬ್ಯುಸಿ ಇದ್ದಾರೆ. ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿದ್ದಾರೆ. ಹೀಗಾಗಿ, ಅವರು ಅನುಷ್ಕಾ ಶರ್ಮಾಗೆ ಜೊತೆ ಆಗೋದು ಅನುಮಾನವೆ. ಆದರೆ, ಅನುಷ್ಕಾ ಶರ್ಮಾ ಅವರು ಈ ಅವಕಾಶ ಬಿಟ್ಟುಕೊಳ್ಳುತ್ತಿಲ್ಲ. ಅವರು ಈ ಸಿನಿಮೋತ್ಸವದಲ್ಲಿ ಭಾಗಿ ಆಗಲಿದ್ದಾರೆ.

ಇದನ್ನೂ ಓದಿ: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಅನುಷ್ಕಾ ಶರ್ಮಾ; ‘ಎಂದೆಂದಿಗೂ ನೀವೇ ನಮ್ಮ ಫೇವರಿಟ್​’ ಎಂದ ಫ್ಯಾನ್ಸ್​

ಪ್ರತಿವರ್ಷದಂತೆ ಫ್ರಾನ್ಸ್​ನಲ್ಲಿ 76ನೇ ಸಾಲಿನ ಫಿಲ್ಮ್​ ಫೆಸ್ಟಿವಲ್ ನಡೆಯಲಿದೆ. ಈಗಾಗಲೇ ಶರ್ಮಿಳಾ ಠಾಗೋರ್, ಐಶ್ವರ್ಯಾ ರೈ, ವಿದ್ಯಾ ಬಾಲನ್, ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾ, ಸೋನಂ ಕಪೂರ್, ಅದಿತಿ ರಾವ್ ಹೈದರಿ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿ ಕೆಂಪು ಹಾಸಿನ ಮೇಲೆ ನಡೆದಿದ್ದರು. ಈ ವರ್ಷ ಅನುಷ್ಕಾ ಶರ್ಮಾ ಅವರಿಗೆ ಈ ಅವಕಾಶ ಒಲಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:06 am, Fri, 5 May 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ