ಅನುಷ್ಕಾ ಜೊತೆ ಪ್ರಭಾಸ್ ಇನ್ನೂ ಎಷ್ಟು ಒಳ್ಳೆಯ ಗೆಳೆತನ ಇಟ್ಟುಕೊಂಡಿದ್ದಾರೆ ನೋಡಿ

ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ನಡುವಿನ ಬಾಂಧವ್ಯದ ಕುರಿತು ಹಬ್ಬಿದ್ದ ಎಲ್ಲಾ ವದಂತಿಗಳಿಗೆ ಈಗ ತೆರೆ ಬಿದ್ದಿದೆ. ಇಬ್ಬರೂ ಉತ್ತಮ ಗೆಳೆತನವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಅನುಷ್ಕಾ ಅವರ ಹೊಸ ಸಿನಿಮಾ 'ಕಥನಾರ್' ಟ್ರೇಲರ್​​ಗೆ ಪ್ರಭಾಸ್ ಸೋಷಿಯಲ್ ಮೀಡಿಯಾದಲ್ಲಿ ಬೆಂಬಲ ನೀಡುವ ಮೂಲಕ ತಮ್ಮ ಗೆಳೆತನ ಗಟ್ಟಿಯಾಗಿದೆ ಎಂದು ಸಾಬೀತುಪಡಿಸಿದ್ದಾರೆ.

ಅನುಷ್ಕಾ ಜೊತೆ ಪ್ರಭಾಸ್ ಇನ್ನೂ ಎಷ್ಟು ಒಳ್ಳೆಯ ಗೆಳೆತನ ಇಟ್ಟುಕೊಂಡಿದ್ದಾರೆ ನೋಡಿ
ಅನುಷ್ಕಾ-ಪ್ರಭಾಸ್

Updated on: Apr 01, 2026 | 1:05 PM

ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಪರಸ್ಪರ ಪ್ರೀತಿ ಮಾಡಿದರು ನಂತರ ಬೇರೆ ಆದರು, ಈಗ ಒಬ್ಬರ ಮುಖ ಒಬ್ಬರು ನೋಡಿಕೊಳ್ಳುವುದಿಲ್ಲ, ಅನುಷ್ಕಾ ಮೋಸ ಮಾಡಿದರು.. ಹೀಗೆ ವದಂತಿಗಳ ಪಟ್ಟಿ ದೊಡ್ಡದಾಗುತ್ತಲೇ ಹೋಗುತ್ತದೆ. ಆದರೆ, ಯಾವುದಕ್ಕೂ ಇವರು ಸ್ಪಷ್ಟನೆ ನೀಡಿಲ್ಲ. ಈಗ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಗೆಳೆತನ ಹೇಗಿದೆ ಎಂಬುದರ ಸ್ಪಷ್ಟ ಚಿತ್ರಣ ಸಿಕ್ಕಿದೆ. ಇಬ್ಬರೂ ಒಳ್ಳೆಯ ಬಾಂಧವ್ಯವನ್ನು ಮುಂದುವರಿಸಿಕೊಂಡು ಹೋಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಅನುಷ್ಕಾ ಶೆಟ್ಟಿ ಅವರು ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಬಳಿಕ ಅಪಾರ ಜನಪ್ರಿಯತೆ ಪಡೆದರು. ಅವರಿಗೆ ಸಿಕ್ಕ ಜನಪ್ರಿಯತೆಗೆ ಅವರು ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳಬೇಕಿತ್ತು. ಆದರೆ, ಹಾಗೆ ಮಾಡಿಲ್ಲ. ಬದಲಿಗೆ ಅವರು ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆದರು. ಅಲ್ಲೊಂದು, ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸಿದರು. ಈಗ ಅನುಷ್ಕಾ ಶೆಟ್ಟಿ ಅವರ ಹೊಸ ಸಿನಿಮಾ ‘ಕಥನಾರ್’ ರಿಲೀಸ್​​ಗೆ ರೆಡಿ ಇದೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಇದಕ್ಕೆ ಪ್ರಭಾಸ್ ಬೆಂಬಲ ಕೊಟ್ಟಿದ್ದಾರೆ.

ಇದನ್ನೂ ಓದಿ: ಮಲಯಾಳಂಗೆ ಭರ್ಜರಿ ಎಂಟ್ರಿ ಕೊಟ್ಟ ನಟಿ ಅನುಷ್ಕಾ ಶೆಟ್ಟಿ

‘ಕಥನಾರ್’ ಸಿನಿಮಾದ ಟ್ರೇಲರ್ ಅನ್ನು ಪ್ರಭಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಟ್ರೇಲರ್ ಬಗ್ಗೆ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಈ ಪೋಸ್ಟ್ ಅಲ್ಲಿ ಅವರು ಅನುಷ್ಕಾ ಶೆಟ್ಟಿ ಅವರನ್ನು ಟ್ಯಾಗ್ ಮಾಡಿದ್ದಾರೆ. ಇವರ ಗೆಳೆತನ ನೋಡಿ ಅನೇಕರು ಸಂತಸ ಹೊರಹಾಕಿದ್ದಾರೆ.

ಫ್ಯಾಂಟಸಿ ಶೈಲಿಯಲ್ಲಿ ‘ಕಥನಾರ್’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದಲ್ಲಿ ಜಯಸೂರ್ಯ ನಾಯಕನಾಗಿ ನಟಿಸಿದ್ದಾರೆ. ಅನುಷ್ಕಾ ಶೆಟ್ಟಿ, ನೀಲಿ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಭುದೇವ, ವಿನೀತ್ ಮತ್ತು ಸಂದೀಪ್ ಮಾಸ್ಟರ್ ಸೇರಿದಂತೆ ಇನ್ನೂ ಅನೇಕರು ಸಿನಿಮಾದಲ್ಲಿದ್ದು, ಮೋಹನ್‌ಲಾಲ್ ಅವರು ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ರೋಜನ್ ಥಾಮಸ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:05 pm, Wed, 1 April 26

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us