AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಕ್ ನೇಮ್​ನಿಂದ ಪ್ರಭಾಸ್​ನ ಕರೆದ ಅನುಷ್ಕಾ ಶೆಟ್ಟಿ; ನಟಿ ಪ್ರೀತಿಯಿಂದ ಇಟ್ಟ ಹೆಸರೇನು?

Anushka Shetty: ಅನುಷ್ಕಾ ಶೆಟ್ಟಿ ಅವರು ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪ್ರಭಾಸ್ ಈ ಸಿನಿಮಾದ ಟೀಸರ್​ ರಿಲೀಸ್ ಮಾಡಿ ವಿಶ್ ಮಾಡಿದ್ದಾರೆ.

ನಿಕ್ ನೇಮ್​ನಿಂದ ಪ್ರಭಾಸ್​ನ ಕರೆದ ಅನುಷ್ಕಾ ಶೆಟ್ಟಿ; ನಟಿ ಪ್ರೀತಿಯಿಂದ ಇಟ್ಟ ಹೆಸರೇನು?
ಪ್ರಭಾಸ್-ಅನುಷ್ಕಾ
ರಾಜೇಶ್ ದುಗ್ಗುಮನೆ
|

Updated on:May 02, 2023 | 9:16 AM

Share

ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ (Prabhas) ನಡುವಿನ ರಿಲೇಶನ್​ಶಿಪ್ ಮುರಿದುಬಿದ್ದಿದೆ ಅನ್ನೋದು ಹಳೆಯ ವಿಚಾರ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿತ್ತು. ಆದರೆ, ಇತ್ತೀಚೆಗೆ ಇವರು ಎಲ್ಲಿಯೂ ಒಟ್ಟಾಗಿ ಕಾಣಿಸಿಕೊಂಡಿಲ್ಲ. ಹೀಗಾಗಿ, ಇದು ಕ್ಲೋಸ್ ಆದ ಕೇಸ್ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಇವರ ಮಧ್ಯೆ ಮತ್ತೆ ಎಲ್ಲವೂ ಸರಿ ಆಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣವೂ ಇದೆ. ಪ್ರಭಾಸ್ ಅವರನ್ನು ನಿಕ್​ನೇಮ್​ನಿಂದ ಅನುಷ್ಕಾ ಶೆಟ್ಟಿ (Anushka Shetty) ಕರೆದಿದ್ದಾರೆ. ಇದು ಹಲವು ಅನುಮಾನ ಹುಟ್ಟುಹಾಕಿದೆ.

ಅನುಷ್ಕಾ ಹಾಗೂ ಪ್ರಭಾಸ್ ‘ಮಿರ್ಚಿ’ ಮೊದಲಾದ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಇವರು ಒಟ್ಟಾಗಿ ನಟಿಸಿದ ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಸಿನಿಮಾ ದೊಡ್ಡ ಯಶಸ್ಸು ಕಂಡಿತು. ಈ ಚಿತ್ರದಲ್ಲಿ ಪ್ರಭಾಸ್ ಹಾಗೂ ಅನುಷ್ಕಾ ಶೆಟ್ಟಿ ಕೆಮಿಸ್ಟ್ರಿ ಕೆಲಸ ಮಾಡಿತು. ಇವರಿಬ್ಬರ ಮಧ್ಯೆ ಪ್ರೀತಿ ಇದೆ ಎನ್ನುವ ಸುದ್ದಿ ಹುಟ್ಟಿದ್ದು ಆಗಲೇ. ಆದರೆ, ಪ್ರಭಾಸ್ ಆಗಲಿ ಅನುಷ್ಕಾ ಆಗಲಿ ಈ ಬಗ್ಗೆ ಮಾತನಾಡಿಲ್ಲ. ಈ ವಿಚಾರ ಅಧಿಕೃತ ಆಗುವುದಕ್ಕೂ ಮೊದಲೇ ಇವರ ಸಂಬಂಧ ಮುರಿದುಬಿತ್ತು.

ಅನುಷ್ಕಾ ಶೆಟ್ಟಿ ಅವರು ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪ್ರಭಾಸ್ ಈ ಸಿನಿಮಾದ ಟೀಸರ್​ ರಿಲೀಸ್ ಮಾಡಿ ವಿಶ್ ಮಾಡಿದ್ದಾರೆ. ‘ಮಿಸ್​ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ ಟೀಸರ್ ಎಂಟರ್​ಟೇನಿಂಗ್ ಆಗಿದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ’ ಎಂದು ಅವರು ಕೊರಿದ್ದಾರೆ. ಇದನ್ನು ಅನುಷ್ಕಾ ತಮ್ಮ ಇನ್​ಸ್ಟಾಗ್ರಾಮ್ ಸ್ಟೇಟಸ್​​ನಲ್ಲಿ ಪೋಸ್ಟ್​ ಮಾಡಿಕೊಂಡಿದ್ದು, ‘ಧನ್ಯವಾದ ಪಪ್ಸು’ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ವೈರಲ್ ಆಗುತ್ತಿದೆ.

ಇದನ್ನೂ ಓದಿ:  ತಂದೆಯ ಕೆನ್ನೆಗೆ ಮುತ್ತಿಟ್ಟು ಬರ್ತ್​ಡೇ ವಿಶ್ ತಿಳಿಸಿದ ನಟಿ ಅನುಷ್ಕಾ ಶೆಟ್ಟಿ

ಅನುಷ್ಕಾ ಶೆಟ್ಟಿ ಬೇರೆಯವರ ಜೊತೆ ಸುತ್ತಾಟ ನಡೆಸಿದ್ದಕ್ಕೆ ಪ್ರಭಾಸ್ ಬ್ರೇಕಪ್ ಮಾಡಿಕೊಂಡರು ಎನ್ನುವ ಸುದ್ದಿಯೂ ಇದೆ. ಆದರೆ, ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಈಗ ಪ್ರಭಾಸ್ ಮತ್ತು ಅನುಷ್ಕಾ ಮಧ್ಯೆ ಮತ್ತೆ ಪ್ರೀತಿ ಹುಟ್ಟಿದೆಯೇ ಎನ್ನುವ ಅನುಮಾನ ಮೂಡಿದೆ.

ಅನುಷ್ಕಾ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಪ್ರಭಾಸ್ ಸಾಲು ಸಾಲು ಸಿನಿಮಾ ಒಪ್ಪಿಕೊಂಡು ನಟಿಸಿದ್ದಾರೆ. ‘ಆದಿಪುರುಷ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ‘ಸಲಾರ್’, ‘ಪ್ರಾಜೆಕ್ಟ್​ ಕೆ’ ಸಿನಿಮಾ ಶೂಟಿಂಗ್ ಪ್ರಗತಿಯಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:03 am, Tue, 2 May 23

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ