ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ (Prabhas) ನಡುವಿನ ರಿಲೇಶನ್ಶಿಪ್ ಮುರಿದುಬಿದ್ದಿದೆ ಅನ್ನೋದು ಹಳೆಯ ವಿಚಾರ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿತ್ತು. ಆದರೆ, ಇತ್ತೀಚೆಗೆ ಇವರು ಎಲ್ಲಿಯೂ ಒಟ್ಟಾಗಿ ಕಾಣಿಸಿಕೊಂಡಿಲ್ಲ. ಹೀಗಾಗಿ, ಇದು ಕ್ಲೋಸ್ ಆದ ಕೇಸ್ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಇವರ ಮಧ್ಯೆ ಮತ್ತೆ ಎಲ್ಲವೂ ಸರಿ ಆಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣವೂ ಇದೆ. ಪ್ರಭಾಸ್ ಅವರನ್ನು ನಿಕ್ನೇಮ್ನಿಂದ ಅನುಷ್ಕಾ ಶೆಟ್ಟಿ (Anushka Shetty) ಕರೆದಿದ್ದಾರೆ. ಇದು ಹಲವು ಅನುಮಾನ ಹುಟ್ಟುಹಾಕಿದೆ.
ಅನುಷ್ಕಾ ಹಾಗೂ ಪ್ರಭಾಸ್ ‘ಮಿರ್ಚಿ’ ಮೊದಲಾದ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಇವರು ಒಟ್ಟಾಗಿ ನಟಿಸಿದ ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಸಿನಿಮಾ ದೊಡ್ಡ ಯಶಸ್ಸು ಕಂಡಿತು. ಈ ಚಿತ್ರದಲ್ಲಿ ಪ್ರಭಾಸ್ ಹಾಗೂ ಅನುಷ್ಕಾ ಶೆಟ್ಟಿ ಕೆಮಿಸ್ಟ್ರಿ ಕೆಲಸ ಮಾಡಿತು. ಇವರಿಬ್ಬರ ಮಧ್ಯೆ ಪ್ರೀತಿ ಇದೆ ಎನ್ನುವ ಸುದ್ದಿ ಹುಟ್ಟಿದ್ದು ಆಗಲೇ. ಆದರೆ, ಪ್ರಭಾಸ್ ಆಗಲಿ ಅನುಷ್ಕಾ ಆಗಲಿ ಈ ಬಗ್ಗೆ ಮಾತನಾಡಿಲ್ಲ. ಈ ವಿಚಾರ ಅಧಿಕೃತ ಆಗುವುದಕ್ಕೂ ಮೊದಲೇ ಇವರ ಸಂಬಂಧ ಮುರಿದುಬಿತ್ತು.
ಅನುಷ್ಕಾ ಶೆಟ್ಟಿ ಅವರು ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪ್ರಭಾಸ್ ಈ ಸಿನಿಮಾದ ಟೀಸರ್ ರಿಲೀಸ್ ಮಾಡಿ ವಿಶ್ ಮಾಡಿದ್ದಾರೆ. ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ ಟೀಸರ್ ಎಂಟರ್ಟೇನಿಂಗ್ ಆಗಿದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ’ ಎಂದು ಅವರು ಕೊರಿದ್ದಾರೆ. ಇದನ್ನು ಅನುಷ್ಕಾ ತಮ್ಮ ಇನ್ಸ್ಟಾಗ್ರಾಮ್ ಸ್ಟೇಟಸ್ನಲ್ಲಿ ಪೋಸ್ಟ್ ಮಾಡಿಕೊಂಡಿದ್ದು, ‘ಧನ್ಯವಾದ ಪಪ್ಸು’ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ವೈರಲ್ ಆಗುತ್ತಿದೆ.
ಇದನ್ನೂ ಓದಿ: ತಂದೆಯ ಕೆನ್ನೆಗೆ ಮುತ್ತಿಟ್ಟು ಬರ್ತ್ಡೇ ವಿಶ್ ತಿಳಿಸಿದ ನಟಿ ಅನುಷ್ಕಾ ಶೆಟ್ಟಿ
ಅನುಷ್ಕಾ ಶೆಟ್ಟಿ ಬೇರೆಯವರ ಜೊತೆ ಸುತ್ತಾಟ ನಡೆಸಿದ್ದಕ್ಕೆ ಪ್ರಭಾಸ್ ಬ್ರೇಕಪ್ ಮಾಡಿಕೊಂಡರು ಎನ್ನುವ ಸುದ್ದಿಯೂ ಇದೆ. ಆದರೆ, ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಈಗ ಪ್ರಭಾಸ್ ಮತ್ತು ಅನುಷ್ಕಾ ಮಧ್ಯೆ ಮತ್ತೆ ಪ್ರೀತಿ ಹುಟ್ಟಿದೆಯೇ ಎನ್ನುವ ಅನುಮಾನ ಮೂಡಿದೆ.
ಅನುಷ್ಕಾ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಪ್ರಭಾಸ್ ಸಾಲು ಸಾಲು ಸಿನಿಮಾ ಒಪ್ಪಿಕೊಂಡು ನಟಿಸಿದ್ದಾರೆ. ‘ಆದಿಪುರುಷ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ‘ಸಲಾರ್’, ‘ಪ್ರಾಜೆಕ್ಟ್ ಕೆ’ ಸಿನಿಮಾ ಶೂಟಿಂಗ್ ಪ್ರಗತಿಯಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:03 am, Tue, 2 May 23