AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶೆಟ್ಟಿಗೆ ಕನ್ನಡದ ಮೇಲೆ ಇದೆ ವಿಶೇಷ ಪ್ರೀತಿ; ಇಲ್ಲಿದೆ ಉದಾಹರಣೆ

Anushka Shetty: ಇಂದು (ನವೆಂಬರ್ 7) ಅನುಷ್ಕಾ ಶೆಟ್ಟಿ ಅವರಿಗೆ ಜನ್ಮದಿನ. ಅನುಷ್ಕಾ ಶೆಟ್ಟಿ ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ತೆಲುಗು ರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದರೂ ಉಳಿದ ಭಾಷೆಯವರಿಗೆ ಅವರ ಪರಿಚಯ ಇದೆ. ಅನುಷ್ಕಾ ಶೆಟ್ಟಿ ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಆ ಬಗ್ಗೆ ಇಲ್ಲಿದೆ ವಿವರ.

ಅನುಷ್ಕಾ ಶೆಟ್ಟಿಗೆ ಕನ್ನಡದ ಮೇಲೆ ಇದೆ ವಿಶೇಷ ಪ್ರೀತಿ; ಇಲ್ಲಿದೆ ಉದಾಹರಣೆ
Anushka Shetty
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 07, 2025 | 3:59 PM

Share

ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ತೆಲುಗು ರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದರೂ ಉಳಿದ ಭಾಷೆಯವರಿಗೆ ಅವರ ಪರಿಚಯ ಇದೆ. ಇಂದು (ನವೆಂಬರ್ 7) ಅನುಷ್ಕಾ ಶೆಟ್ಟಿ ಅವರಿಗೆ ಜನ್ಮದಿನ. ಅನುಷ್ಕಾ ಶೆಟ್ಟಿ ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಆ ಬಗ್ಗೆ ಇಲ್ಲಿದೆ ವಿವರ.

ಅನುಷ್ಕಾ ಶೆಟ್ಟಿ ಅವರು ಪ್ರಭಾಸ್ ಸೇರಿ ಹಲವು ಸೂಪರ್ ಸ್ಟಾರ್​ಗಳ ಜೊತೆ ನಟಿಸಿದ್ದಾರೆ. ಈಗ ಅನುಷ್ಕಾ ಶೆಟ್ಟಿ ನಟನೆಯ ‘ಘಾಟಿ’ ಸಿನಿಮಾ ಈ ವರ್ಷ ರಿಲೀಸ್ ಆಯಿತು. ಆದರೆ, ಈ ಚಿತ್ರದ ಪ್ರಚಾರಕ್ಕೆ ಅವರು ತೆರಳಿಲ್ಲ. ಈ  ಸಿನಿಮಾ ಸೋಲಲು ಇದು ಕೂಡ ಕಾರಣ ಎಂದು ಹೇಳಲಾಗುತ್ತಾ ಇದೆ.

ಮಂಗಳೂರು ಮೂಲದ ಅನುಷ್ಕಾ ಶೆಟ್ಟಿ ಓದಿದ್ದು ಬೆಂಗಳೂರಿನಲ್ಲಿ. ಅವರಿಗೆ ಕನ್ನಡ ಮಾತನಾಡಲು ಬರುತ್ತದೆ. ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಈ ಮೊದಲು ಅನುಷ್ಕಾ ಶೆಟ್ಟಿ ಅವರ ತಾಯಿಗೆ ಜನ್ಮದಿನದ ವಿಶ್ ತಿಳಿಸುವಾಗ ಅವರು ಕನ್ನಡದಲ್ಲೇ ಟ್ವೀಟ್ ಮಾಡಿದ್ದರು ಅನ್ನೋದು ವಿಶೇಷ. ಇದು ಅವರ ಕನ್ನಡದ ಮೇಲಿನ ಪ್ರೀತಿಯನ್ನು ತೋರಿಸುತ್ತದೆ.

ಇದನ್ನೂ ಓದಿ:ಅನುಷ್ಕಾ ಶೆಟ್ಟಿ-ಪ್ರಭಾಸ್ ಕ್ಯೂಟ್ ವಿಡಿಯೋ ಇಲ್ಲಿದೆ ನೋಡಿ

ಅನುಷ್ಕಾ ಶೆಟ್ಟಿ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 2005ರಲ್ಲಿ. ‘ಸೂಪರ್’ ಅವರ ನಟನೆಯ ಮೊದಲ ಸಿನಿಮಾ. ಅವರು ಟಾಲಿವುಡ್​ನಲ್ಲಿ ಭರ್ಜರಿ ಹೆಸರು ಮಾಡಿದರು. ಹಲವು ಸೂಪರ್ ಹಿಟ್​ ಚಿತ್ರಗಳನ್ನು ನೀಡಿದ್ದಾರೆ. ಆದರೆ, ಇತ್ತೀಚೆಗೆ ಸಿನಿಮಾ ಆಯ್ಕೆಯಲ್ಲಿ ಅನುಷ್ಕಾ ಚ್ಯೂಸಿ ಆಗಿದ್ದಾರೆ. ಅವರು ದೊಡ್ಡ ದೊಡ್ಡ ಗೆಲುವು ಕಂಡಿದ್ದಾರೆ. ಸಿನಿಮಾ ಹಿಟ್ ಆದರೆ, ಸಾಲು ಸಾಲು ಚಿತ್ರಗಳನ್ನು ಒಪ್ಪಿಕೊಳ್ಳುತ್ತಾರೆ. ಆದರೆ, ಇದಕ್ಕೆ ಇದಕ್ಕೆ ಅನುಷ್ಕಾ ಶೆಟ್ಟಿ ಅಪವಾದ ಎಂದರೂ ತಪ್ಪಾಗಲಿಕ್ಕಿಲ್ಲ. ‘ಬಾಹುಬಲಿ 2’ ಹಿಟ್ ಆದ ಬಳಿಕ ಅನುಷ್ಕಾ ನಟಿಸಿದ್ದು ಕೆಲವೇ ಸಿನಿಮಾಗಳಲ್ಲಿ ಮಾತ್ರ ಎಂದರೂ ತಪ್ಪಾಗಲಾರದು.

ಅನುಷ್ಕಾ ಶೆಟ್ಟಿ ಅವರ ನಟನೆಯ ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಚಿತ್ರವನ್ನು ‘ಬಾಬಹುಬಲಿ: ದಿ ಎಪಿಕ್ ಆಗಿ ರಿಲೀಸ್ ಮಾಡಲಾಗಿದೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿಲ್ಲ ಎಂಬ ಬೇಸರ ತಂಡದವರಿಗೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ