AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮುನ್ನೆಲೆಗೆ ಬಂದ ಅನುಷ್ಕಾ ಶೆಟ್ಟಿ ಮದುವೆ ವಿಷಯ; ಹುಡುಗ ಯಾರು?

ಅನುಷ್ಕಾ ಶೆಟ್ಟಿ ಅವರ ಮದುವೆ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. 44 ವರ್ಷದ ಅನುಷ್ಕಾ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿಯಾಗಿದ್ದಾರೆ. ಮೊದಲು ಪ್ರಭಾಸ್ ಜೊತೆ ವಿವಾಹ ವದಂತಿಗಳಿದ್ದವು, ಈಗ ಉದ್ಯಮಿಯೊಬ್ಬರ ಜೊತೆ ಮದುವೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅವರ ಕುಟುಂಬಸ್ಥರು ಈ ಬಗ್ಗೆ ಮಾತುಕತೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ. ಬಾಹುಬಲಿ ನಂತರದ ಅವರ ವೃತ್ತಿಜೀವನ ಮತ್ತು ನಿರಂತರ ವೈಯಕ್ತಿಕ ಜೀವನದ ಕುರಿತು ವದಂತಿಗಳು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿವೆ.

ಮತ್ತೆ ಮುನ್ನೆಲೆಗೆ ಬಂದ ಅನುಷ್ಕಾ ಶೆಟ್ಟಿ ಮದುವೆ ವಿಷಯ; ಹುಡುಗ ಯಾರು?
ಅನುಷ್ಕಾ
ರಾಜೇಶ್ ದುಗ್ಗುಮನೆ
|

Updated on: Mar 18, 2026 | 12:38 PM

Share

ಅನುಷ್ಕಾ ಶೆಟ್ಟಿ ಅವರಿಗೆ ಈಗ 44 ವರ್ಷ. ಅವರು ಇತ್ತೀಚಿನ ವರ್ಷಗಳಲ್ಲಿ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಅವರು ವಿವಾಹದ ಕಾರಣಕ್ಕೆ ಸುದ್ದಿ ಆಗೋದಕ್ಕಿಂತ ಹೆಚ್ಚಾಗಿ, ವಿವಾಹದ ಕಾರಣಕ್ಕೆ ಸುದ್ದಿ ಆಗುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಅವರ ವಿವಾಹ ಆಗುತ್ತದೆ ಎನ್ನುವ ಸುದ್ದಿ ಕೇಳಿ ಬರುತ್ತಲೇ ಇದೆ. ಈಗ ಮತ್ತೊಮ್ಮೆ ಅನುಷ್ಕಾ ವಿವಾಹ ವಿಷಯ ಚರ್ಚೆಗೆ ಕಾರಣ ಆಗಿದೆ.

ಸೆಲೆಬ್ರಿಟಿಗಳ ಜೀವನದ ಬಗ್ಗೆ ಅಭಿಮಾನಿಗಳು ಕಣ್ಣಿಡುತ್ತಾರೆ. ಸಾರ್ವಜನಿಕವಾಗಿ ಯಾರದ್ದಾದರೂ ಜೊತೆಗೆ ಕಾಣಿಸಿಕೊಂಡರೆ ವದಂತಿ ಹೆಚ್ಚುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಅನ್​​ಫಾಲೋ ಮಾಡಿದ್ದು, ಫಾಲೋ ಮಾಡಿದ್ದು ನೋಡಿ ಅನೇಕ ವಿಷಯಗಳನ್ನು ಕೆಲವರು ಡಿಕೋಡ್ ಮಾಡಿದ್ದು ಇದೆ. ಅನುಷ್ಕಾ ವಿಷಯದಲ್ಲೂ ಹಾಗೆಯೇ ಆಗಿದೆ.

ಅನುಷ್ಕಾ ಶೆಟ್ಟಿ ಅವರು ಪ್ರಭಾಸ್ ಜೊತೆ ಡೇಟ್ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈ ವಿಷಯ ನಿಜವಾಗಿಲ್ಲ. ಅವರು ಮಧ್ಯದಲ್ಲೇ ದೂರ ಆದರು ಎನ್ನಲಾಗಿದೆ. ಈಗ ಅನುಷ್ಕಾ ಆಗಲಿ, ಪ್ರಭಾಸ್ ಆಗಲಿ ಮದುವೆ ಆಗಿಲ್ಲ.ಪ್ರಭಾಸ್ ಅವರು ಮದುವೆ ವಿಷಯ ಬಂದಾಗ ಉತ್ತರಿಸೋಕೆ ಹೋಗಲ್ಲ. ಆದರೆ, ಅನುಷ್ಕಾ ವಿಷಯ ಆಗಾಗ ಚರ್ಚೆ ಆಗುತ್ತಲೇ ಇರುತ್ತದೆ.

ಅನುಷ್ಕಾ ಶೆಟ್ಟಿ ಅವರು ಈ ಬಾರಿ ಉದ್ಯಮಿಯೊಬ್ಬರ ಜೊತೆ ಮದುವೆ ಆಗಲಿದ್ದಾರೆ ಎಂದು ಹೇಲಾಗುತ್ತಿದೆ. ಆದರೆ, ಈ ವಿಷಯವನ್ನು ನಟಿ ಅಧಿಕೃತ ಮಾಡಿಲ್ಲ. ಮನೆಯವರು ಈ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಹರಿದಾಡುತ್ತಿರುವ ವಿಷಯ ನಿಜವೇ ಅಥವಾ ಹತ್ತರಲ್ಲಿ ಹಂದನೆಯ ವದಂತಿಯಾಗಿ ಇಲ್ಲಿಗೆ ಕೊನೆಯಾಗಲಿದೆಯೇ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ.

ಇದನ್ನೂ ಓದಿ: ಮತ್ತೆ ಕೇಳಿಬಂತು ಅನುಷ್ಕಾ ಶೆಟ್ಟಿ ಮದುವೆ ವಿಷಯ: ಈ ಬಾರಿ ಪ್ರಭಾಸ್ ಹೆಸರಿಲ್ಲ

ಅನುಷ್ಕಾ ಶೆಟ್ಟಿ ಅವರು ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಸಿನಿಮಾದಿಂದ ದೊಡ್ಡ ಯಶಸ್ಸು ಕಂಡರು. ಆದರೆ, ಈ ಯಶಸ್ಸನ್ನು ಅವರು ಉತ್ತಮವಾಗಿ ಬಳಸಿಕೊಂಡಿಲ್ಲ. ಅವರು ದೊಡ್ಡ ಮಟ್ಟದಲ್ಲಿ ಗೆಲವು ಸಾಧಿಸೋಕೆ ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ