ನಟಿ ಅನುಷ್ಕಾ ಶೆಟ್ಟಿ ಸಂಭಾವನೆ ಎಷ್ಟು? ಕಡಿಮೆ ಸಿನಿಮಾ ಮಾಡಿದರೂ ಪಡೆಯುತ್ತಾರೆ ಕೋಟಿ ಕೋಟಿ ಹಣ

ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆದರೆ ಬಳಿಕ ಆ ಚಿತ್ರದ ಕಲಾವಿದರು ಸಾಲು ಸಾಲು ಸಿನಿಮಾ ಒಪ್ಪಿಕೊಳ್ಳುತ್ತಾರೆ. ಆದರೆ, ಇದಕ್ಕೆ ಅನುಷ್ಕಾ ಶೆಟ್ಟಿ ಅಪವಾದ. ‘ಬಾಹುಬಲಿ 2’ ಹಿಟ್ ಆದ ಬಳಿಕ ಅನುಷ್ಕಾ ನಟಿಸಿದ್ದು ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರ.

ನಟಿ ಅನುಷ್ಕಾ ಶೆಟ್ಟಿ ಸಂಭಾವನೆ ಎಷ್ಟು? ಕಡಿಮೆ ಸಿನಿಮಾ ಮಾಡಿದರೂ ಪಡೆಯುತ್ತಾರೆ ಕೋಟಿ ಕೋಟಿ ಹಣ
ಅನುಷ್ಕಾ ಶೆಟ್ಟಿ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Aug 22, 2023 | 8:10 AM

ನಟಿ ಅನುಷ್ಕಾ ಶೆಟ್ಟಿ ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಪ್ರಭಾಸ್ ಸೇರಿ ಹಲವು ಸೂಪರ್ ಸ್ಟಾರ್​ಗಳ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಈಗ ಅನುಷ್ಕಾ ಶೆಟ್ಟಿ (Anushka Shetty) ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಅವರ ಸಂಭಾವನೆ ವಿಚಾರ ಸುದ್ದಿ ಆಗುತ್ತಿದೆ. ಅವರು ಪ್ರತಿ ಚಿತ್ರಕ್ಕೆ ಪಡೆಯೋ ಸಂಭಾವನೆ ಎಷ್ಟು ಎಂಬ ವಿಚಾರ ಈಗ ರಿವೀಲ್ ಆಗಿದೆ. ಕಡಿಮೆ ಸಿನಿಮಾ ಮಾಡಿದರೂ ಇವರು ಭರ್ಜರಿ ಸಂಭಾವನೆ ಪಡೆಯುತ್ತಾರೆ.

ಮಂಗಳೂರು ಮೂಲದ ಅನುಷ್ಕಾ ಶೆಟ್ಟಿ ಓದಿದ್ದು ಬೆಂಗಳೂರಿನಲ್ಲಿ. ಅವರಿಗೆ ಕನ್ನಡ ಮಾತನಾಡಲು ಬರುತ್ತದೆ. ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಅನುಷ್ಕಾ ಶೆಟ್ಟಿ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 2005ರಲ್ಲಿ. ‘ಸೂಪರ್’ ಅವರ ನಟನೆಯ ಮೊದಲ ಸಿನಿಮಾ. ಅವರು ಟಾಲಿವುಡ್​ನಲ್ಲಿ ಭರ್ಜರಿ ಹೆಸರು ಮಾಡಿದ್ದಾರೆ. ಹಲವು ಸೂಪರ್ ಹಿಟ್​ ಚಿತ್ರಗಳನ್ನು ನೀಡಿದ್ದಾರೆ. ಆದರೆ, ಇತ್ತೀಚೆಗೆ ಸಿನಿಮಾ ಆಯ್ಕೆಯಲ್ಲಿ ಅನುಷ್ಕಾ ಚ್ಯೂಸಿ ಆಗಿದ್ದಾರೆ. ಯಾವುದಾದರೂ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆದರೆ ಬಳಿಕ ಆ ಚಿತ್ರದ ಕಲಾವಿದರು ಸಾಲು ಸಾಲು ಸಿನಿಮಾ ಒಪ್ಪಿಕೊಳ್ಳುತ್ತಾರೆ. ಆದರೆ, ಇದಕ್ಕೆ ಅನುಷ್ಕಾ ಶೆಟ್ಟಿ ಅಪವಾದ. ‘ಬಾಹುಬಲಿ 2’ ಹಿಟ್ ಆದ ಬಳಿಕ ಅನುಷ್ಕಾ ನಟಿಸಿದ್ದು ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರ.

‘ಬಾಹುಬಲಿ 2’ ಬಳಿಕ ‘ಭಾಗಮತಿ’ ಸಿನಿಮಾದಲ್ಲಿ ಅನುಷ್ಕಾ ನಟಿಸಿದರು. ಈ ಚಿತ್ರ 2018ರಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಅವರು ಒಪ್ಪಿಕೊಂಡ ಸಿನಿಮಾ ಎಂದರೆ ಅದು ‘ನಿಶಬ್ದಂ’. ಈ ಸಿನಿಮಾ 2020ರಲ್ಲಿ ರಿಲೀಸ್ ಆಯಿತು. ಈಗ ಮೂರು ವರ್ಷಗಳ ಬಳಿಕ ಅವರ ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಚಿತ್ರ ಮೂಡಿಬರುತ್ತಿದೆ. ತೆಲುಗು ಭಾಷೆಯ ಸಿನಿಮಾ ಇದಾಗಿದೆ.

ಅನುಷ್ಕಾ ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗದೇ ಇದ್ದರೂ ಅವರ ಸಂಭಾವನೆ ಕಡಿಮೆ ಆಗಿಲ್ಲ. ಈ ಮೊದಲು ಅವರು ಪ್ರತಿ ಚಿತ್ರಕ್ಕೆ 3 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದರು. ಈಗ ಅವರ ಸಂಭಾವನೆ ಹೆಚ್ಚಾಗಿದೆ. ಅವರು ಪ್ರತಿ ಚಿತ್ರಕ್ಕೆ 6 ಕೋಟಿ ರೂಪಾಯಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಸದ್ಯ ಯಾವುದೇ ಹೊಸ ಸಿನಿಮಾನ ಅನುಷ್ಕಾ ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: ಎಂಟು ಎಕರೆಯಲ್ಲಿ ಸಿದ್ಧವಾಗುತ್ತಿದೆ ಫಾರ್ಮ್​ಹೌಸ್​; ಅನುಷ್ಕಾ-ವಿರಾಟ್ ಇದಕ್ಕೆ ಖರ್ಚು ಮಾಡುತ್ತಿರುವುದೆಷ್ಟು?

ಅನುಷ್ಕಾ ಶೆಟ್ಟಿ ಅವರ ವೈಯಕ್ತಿಕ ವಿಚಾರ ಕೂಡ ಸಾಕಷ್ಟು ಚರ್ಚೆ ಆಗಿದೆ. ಪ್ರಭಾಸ್ ಜೊತೆ ಅನುಷ್ಕಾ ಪ್ರೀತಿಯಲ್ಲಿದ್ದರು ಎನ್ನಲಾಗಿತ್ತು. ಟಾಲಿವುಡ್​ನ ಸೂಪರ್ ಹಿಟ್ ಜೋಡಿ ಮದುವೆ ಆಗಲಿದೆ ಎಂದು ಫ್ಯಾನ್ಸ್ ಕಾದರು. ಆದರೆ, ‘ಬಾಹುಬಲಿ 2’ ಬಳಿಕ ಇವರ ಬ್ರೇಕಪ್ ಆಗಿದೆ ಎಂಬ ಸುದ್ದಿ ಹರಿದಾಡಿತು. ಈ ಬಗ್ಗೆ ಪ್ರಭಾಸ್ ಆಗಲೀ ಅನುಷ್ಕಾ ಆಗಲಿ ಮಾತನಾಡಿಲ್ಲ. ಅನುಷ್ಕಾ ಶೆಟ್ಟಿ ಮದುವೆ ಬಗ್ಗೆ ತಲೆಕೆಡಿಸಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್