AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ, ಟ್ರೋಲ್​, ಪ್ರಭಾಸ್ ಜೊತೆ ನಟನೆ; ಎಲ್ಲಾ ವಿಚಾರಗಳ ಬಗ್ಗೆ ಮಾತನಾಡಿದ ಅನುಷ್ಕಾ ಶೆಟ್ಟಿ

‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಚಿತ್ರ ಸೆಪ್ಟೆಂಬರ್ 7ರಂದು ರಿಲೀಸ್ ಆಗುತ್ತಿದೆ. ನವೀನ್ ಪೊಲಿಶೆಟ್ಟಿ ಚಿತ್ರಕ್ಕೆ ಹೀರೋ. ಈ ಚಿತ್ರಕ್ಕೆ ನಿರ್ದೇಶಕ ಮಹೇಶ್ ಬಾಬು ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಿನಿಮಾ ಪ್ರಚಾರಕ್ಕಾಗಿ ಅನುಷ್ಕಾ ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಮದುವೆ, ಟ್ರೋಲ್​, ಪ್ರಭಾಸ್ ಜೊತೆ ನಟನೆ; ಎಲ್ಲಾ ವಿಚಾರಗಳ ಬಗ್ಗೆ ಮಾತನಾಡಿದ ಅನುಷ್ಕಾ ಶೆಟ್ಟಿ
ಅನುಷ್ಕಾ
ರಾಜೇಶ್ ದುಗ್ಗುಮನೆ
|

Updated on: Sep 06, 2023 | 7:10 AM

Share

ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಮಹಿಳಾ ಪ್ರಧಾನ ಸಿನಿಮಾಗಳಲ್ಲಿಯೂ ನಟಿಸಿ ಅವರು ಗಮನ ಸೆಳೆದಿದ್ದಾರೆ. ‘ಬಾಹುಬಲಿ’ (Bahubali) ಸರಣಿಯಿಂದ ಅವರಿಗೆ ಸಿಕ್ಕ ಜನಪ್ರಿಯತೆ ಅಷ್ಟಿಷ್ಟಲ್ಲ. ಆದಾಗ್ಯೂ ಅನುಷ್ಕಾ ಅವರು ತರಾತುರಿ ಮಾಡಿ ಸಿನಿಮಾ ಒಪ್ಪಿಕೊಳ್ಳಲಿಲ್ಲ. ಟ್ರೋಲ್​ಗಳ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ. ಮದುವೆ ವಿಚಾರದ ಬಗ್ಗೆ ಬಾಯ್ಬಿಟ್ಟಿಲ್ಲ. ಈಗ ಅವರ ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಸಿನಿಮಾ ರಿಲೀಸ್ ಆಗುತ್ತಿದೆ. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಚಿತ್ರ ಸೆಪ್ಟೆಂಬರ್ 7ರಂದು ರಿಲೀಸ್ ಆಗುತ್ತಿದೆ. ನವೀನ್ ಪೊಲಿಶೆಟ್ಟಿ ಚಿತ್ರಕ್ಕೆ ಹೀರೋ. ಈ ಚಿತ್ರಕ್ಕೆ ನಿರ್ದೇಶಕ ಮಹೇಶ್ ಬಾಬು ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಿನಿಮಾ ಪ್ರಚಾರಕ್ಕಾಗಿ ಅನುಷ್ಕಾ ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಅನುಷ್ಕಾ ಶೆಟ್ಟಿ ಅವರ ಬಗ್ಗೆ ಇರುವ ಟ್ರೋಲ್​ಗಳು ಒಂದೆರಡಲ್ಲ. ಅವರ ಬಾಡಿಶೇಮಿಂಗ್ ಕೂಡ ಮಾಡಲಾಯಿತು. ಆದರೆ, ಇದಕ್ಕೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ‘ಸೋಶಿಯಲ್ ಮೀಡಿಯಾದಲ್ಲಿ ನಾನು ಹೆಚ್ಚು ಆ್ಯಕ್ಟೀವ್ ಆಗಿಲ್ಲ. ಸಿನಿಮಾ ರಿಲೀಸ್ ಸಂದರ್ಭದಲ್ಲಿ ಪ್ರಮೋಷನ್​ಗೆ ಸಾಮಾಜಿಕ ಜಾಲತಾಣದ ಬಳಕೆ ಮಾಡುತ್ತೇನೆ. ಎಲ್ಲರಿಗೂ ಅವರದ್ದೇ ಆದ ಸಮಸ್ಯೆ ಇರುತ್ತದೆ. ಮೊದಲು ನಾವು ಮನುಷ್ಯರಾಗಬೇಕು’ ಎಂದಿದ್ದಾರೆ ಅನುಷ್ಕಾ ಶೆಟ್ಟಿ.

ಪ್ರಭಾಸ್ ಹಾಗೂ ಅನುಷ್ಕಾ ಮತ್ತೆ ಒಟ್ಟಾಗಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ, ಅದು ತಮ್ಮ ಕೈಲಿಲ್ಲ ಅನ್ನೋದು ಅನುಷ್ಕಾ ಅಭಿಪ್ರಾಯ. ಒಳ್ಳೆಯ ಕಥೆ ಸಿಕ್ಕರೆ ಸಿನಿಮಾ ಮಾಡುವುದಾಗಿ ಅವರು ಹೇಳಿಕೊಂಡಿದ್ದಾರೆ. ಪ್ರಭಾಸ್ ಹಾಗೂ ಅನುಷ್ಕಾ ಶೆಟ್ಟಿ ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿ ಗಮನ ಸೆಳೆದಿದ್ದಾರೆ. ಅವರಿಬ್ಬರೂ ಪ್ರೀತಿಸುತ್ತಿದ್ದರು ಎಂದು ಕೂಡ ಹೇಳಲಾಗಿತ್ತು. ಇನ್ನು ಮದುವೆ ವಿಚಾರದಲ್ಲಿ ಅನುಷ್ಕಾ ಶೆಟ್ಟಿಗೆ ಯಾವುದೇ ತರಾತುರಿ ಇಲ್ಲ. ಸಮಯ ಬಂದಾಗ ಎಲ್ಲವೂ ಅದಾಗೇ ನಡೆಯುತ್ತದೆ ಎನ್ನುವ ನಂಬಿಕೆಯಲ್ಲಿ ಅವರಿದ್ದಾರೆ.

ಇದನ್ನೂ ಓದಿ: ನಟಿ ಅನುಷ್ಕಾ ಶೆಟ್ಟಿ ಸಂಭಾವನೆ ಎಷ್ಟು? ಕಡಿಮೆ ಸಿನಿಮಾ ಮಾಡಿದರೂ ಪಡೆಯುತ್ತಾರೆ ಕೋಟಿ ಕೋಟಿ ಹಣ

‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಚಿತ್ರದ ಎದುರು ‘ಜವಾನ್’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಕಾರಣದಿಂದ ಸಿನಿಮಾಗೆ ಕಠಿಣ ಸ್ಪರ್ಧೆ ಎದುರಾಗುವ ಸೂಚನೆ ಸಿಕ್ಕಿದೆ. ಶಾರುಖ್ ಖಾನ್ ನಟನೆಯ ‘ಜವಾನ್’ ಚಿತ್ರಕ್ಕೆ ಉತ್ತಮ ಬುಕಿಂಗ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ