AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಬಗ್ಗೆ ಕೊನೆಗೂ ಮೌನ ಮುರಿದ ನಟಿ ಅನುಷ್ಕಾ ಶೆಟ್ಟಿ

Anushka Shetty marriage: ಅನುಷ್ಕಾ ಶೆಟ್ಟಿ ಮದುವೆ ಬಗ್ಗೆ ಆಗಾಗ್ಗೆ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆಯಾದರೂ ಈ ಬಾರಿ ತುಸು ಗಟ್ಟಿಯಾಗಿಯೇ ಹರಿದಾಡಿದ್ದವು. ಅನುಷ್ಕಾ ಶೆಟ್ಟಿ ಅವರು ಬೆಂಗಳೂರು ಮೂಲದ ಉದ್ಯಮಿಯೊಬ್ಬರನ್ನು ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇತ್ತು. ಆದರೆ ಇದೀಗ ಅನುಷ್ಕಾ ಶೆಟ್ಟಿ ಅವರ ತಂಡವು ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಮದುವೆ ಬಗ್ಗೆ ಕೊನೆಗೂ ಮೌನ ಮುರಿದ ನಟಿ ಅನುಷ್ಕಾ ಶೆಟ್ಟಿ
Anushka Shetty
ಮಂಜುನಾಥ ಸಿ.
|

Updated on:Mar 19, 2026 | 10:43 PM

Share

ಕಳೆದ ಕೆಲವು ದಿನಗಳಿಂದ ದಕ್ಷಿಣ ಭಾರತದ ಖ್ಯಾತ ನಟಿ, ‘ದೇವಸೇನಾ’ ಖ್ಯಾತಿಯ ಅನುಷ್ಕಾ ಶೆಟ್ಟಿ (Anushka Shetty) ಅವರ ಮದುವೆ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಅನುಷ್ಕಾ ಶೆಟ್ಟಿ ಮದುವೆ ಬಗ್ಗೆ ಆಗಾಗ್ಗೆ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆಯಾದರೂ ಈ ಬಾರಿ ತುಸು ಗಟ್ಟಿಯಾಗಿಯೇ ಹರಿದಾಡಿದ್ದವು. ಅನುಷ್ಕಾ ಶೆಟ್ಟಿ ಅವರು ಬೆಂಗಳೂರು ಮೂಲದ ಉದ್ಯಮಿಯೊಬ್ಬರನ್ನು ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇತ್ತು. ಆದರೆ ಇದೀಗ ಅನುಷ್ಕಾ ಶೆಟ್ಟಿ ಅವರ ತಂಡವು ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಮದುವೆ ಸುದ್ದಿಯ ಬಗ್ಗೆ ಸ್ಪಷ್ಟನೆ ನೀಡಿರುವ ಅನುಷ್ಕಾ ಶೆಟ್ಟಿಯ ತಂಡ, ಈ ವದಂತಿ ಸುಳ್ಳೆಂದು ಸ್ಪಷ್ಟಪಡಿಸಿದೆ. ಮದುವೆಯ ಬಗ್ಗೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಸಾಮಾಜಿಕ ಜಾಲತಾಣದ ಪೇಜ್‌ಗಳಿಗೆ ತಂಡವು ಎಚ್ಚರಿಕೆ ನೀಡಿದೆ. ‘ಯಾರದ್ದೋ ವೈಯಕ್ತಿಕ ಜೀವನವನ್ನು ದೈನಂದಿನ ಹೆಡ್‌ಲೈನ್ ಮಾಡುವ ಮೊದಲು ಅಧಿಕೃತ ದೃಢೀಕರಣಕ್ಕಾಗಿ ಕಾಯಿರಿ’ ಎಂದು ವಿನಂತಿಸಿದೆ. ವರದಿಗಳಲ್ಲಿ ಪದೇ ಪದೇ ಅನುಷ್ಕಾ ಅವರ ವಯಸ್ಸನ್ನು (44) ಹೈಲೈಟ್ ಮಾಡುತ್ತಿರುವುದಕ್ಕೆ ಸಹ ಅನುಷ್ಕಾ ಅವರ ತಂಡವು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ‘ನಟರ ವಯಸ್ಸಿನ ಬಗ್ಗೆ ಚರ್ಚಿಸದ ಮಾಧ್ಯಮಗಳು, ನಟಿಯರ ವಿಷಯ ಬಂದಾಗ ಮಾತ್ರ ವಯಸ್ಸನ್ನು ವಿವಾದಾತ್ಮಕ ಎಂಬಂತೆ ಬಿಂಬಿಸುವುದು ಸರಿಯಲ್ಲ. ಇದು ಪರೋಕ್ಷವಾಗಿ ‘ಏಜ್ ಶೇಮಿಂಗ್’ ಮಾಡಿದಂತೆ’ ಎಂದು ಆಕ್ರೋಶ ಹೊರಹಾಕಿದೆ.

ಇದನ್ನೂ ಓದಿ:ವಿವಾಹ ವದಂತಿಗೆ ಸ್ಪಷ್ಟನೆ ಕೊಟ್ಟ ಅನುಷ್ಕಾ ಶೆಟ್ಟಿ

ಅನುಷ್ಕಾ ಅವರು ಯಾವಾಗಲೂ ತಮ್ಮ ಖಾಸಗಿ ಜೀವನವನ್ನು ಗೌಪ್ಯವಾಗಿಡಲು ಇಷ್ಟಪಡುತ್ತಾರೆ. ಮದುವೆ ಎಂಬುದು ಅತ್ಯಂತ ವೈಯಕ್ತಿಕ ವಿಷಯವಾಗಿದ್ದು, ಕೇವಲ ಲೈಕ್ಸ್ ಅಥವಾ ವ್ಯೂಸ್‌ಗಾಗಿ ಇಂತಹ ಸಂವೇದನಾಶೀಲ ಸುದ್ದಿಗಳನ್ನು ಹರಡುವುದು ಸರಿಯಲ್ಲ ಎಂದು ಅನುಷ್ಕಾ ಅವರ ತಂಡ ಹೇಳಿದೆ. ಅನುಷ್ಕಾ ಅವರು ಸದ್ಯ ತಮ್ಮ ವೃತ್ತಿ ಜೀವನದ ಕಡೆಗೆ ಗಮನ ಹರಿಸುತ್ತಿದ್ದಾರೆ. ಅವರು ಮಲಯಾಳಂ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿರುವ ‘ಕಥನಾರ್: ದಿ ವೈಲ್ಡ್ ಸೋರ್ಸೆರರ್’ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದಾರೆ.

ಬಹಳ ವರ್ಷಗಳಿಂದ ಅನುಷ್ಕಾ ಅವರ ಹೆಸರು ನಟ ಪ್ರಭಾಸ್ ಜೊತೆ ಕೇಳಿಬರುತ್ತಿತ್ತು. ಆದರೆ ಈ ಬಾರಿ ಬೆಂಗಳೂರಿನ ಉದ್ಯಮಿಯೊಬ್ಬರ ಜೊತೆ ಅವರ ಮದುವೆ ನಿಶ್ಚಯವಾಗಿದೆ ಎಂಬ ಹೊಸ ಸುದ್ದಿ ಹಬ್ಬಿತ್ತು. ಈ ಹಿಂದೆಯೂ 2020ರಲ್ಲಿ ಇಂತಹದೇ ವದಂತಿಗಳು ಕೇಳಿಬಂದಾಗ ಅನುಷ್ಕಾ ಅವರು, ‘ನನ್ನ ಮದುವೆಯನ್ನು ಯಾರು ಕೂಡ ಬಚ್ಚಿಡಲು ಸಾಧ್ಯವಿಲ್ಲ, ಸಮಯ ಬಂದಾಗ ನಾನೇ ತಿಳಿಸುತ್ತೇನೆ’ ಎಂದು ಹೇಳಿದ್ದರು. ಅನುಷ್ಕಾ ಶೆಟ್ಟಿ ನಟನೆಯ ‘ಘಾಟಿ’ ಸಿನಿಮಾ 2025 ರಲ್ಲಿ ಬಿಡುಗಡೆ ಆಗಿತ್ತು. ಆದರೆ ಆ ಸಿನಿಮಾ ಫ್ಲಾಪ್ ಆಯ್ತು. ಇದೀಗ ಅನುಷ್ಕಾ ಮಲಯಾಳಂ ಸಿನಿಮಾನಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:48 pm, Thu, 19 March 26

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ