AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ಜೊತೆ ಮತ್ತೆ ತೆರೆ ಹಂಚಿಕೊಳ್ಳಲಿದ್ದಾರೆ ಅನುಷ್ಕಾ ಶೆಟ್ಟಿ? ಸಿಕ್ತು ಬ್ರೇಕಿಂಗ್ ನ್ಯೂಸ್

ಪ್ರಭಾಸ್-ಅನುಷ್ಕಾ ಬಗ್ಗೆ ಈ ಮೊದಲು ಸಾಕಷ್ಟು ಸುದ್ದಿ ಹರಿದಾಡಿತ್ತು. ಇಬ್ಬರೂ ನಿಜ ಜೀವನದ ಲವ್​​ಬರ್ಡ್ಸ್ ಎಂದು ಕೂಡ ಕರೆಯಲಾಯಿತು.

ಪ್ರಭಾಸ್ ಜೊತೆ ಮತ್ತೆ ತೆರೆ ಹಂಚಿಕೊಳ್ಳಲಿದ್ದಾರೆ ಅನುಷ್ಕಾ ಶೆಟ್ಟಿ? ಸಿಕ್ತು ಬ್ರೇಕಿಂಗ್ ನ್ಯೂಸ್
ಪ್ರಭಾಸ್-ಅನುಷ್ಕಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 03, 2023 | 8:30 AM

Share

ತೆರೆಮೇಲಿನ ಜೋಡಿ ಪ್ರಭಾಸ್ (Prabhas) ಹಾಗೂ ಅನುಷ್ಕಾ ಶೆಟ್ಟಿ (Anushka Shetty) ಬಗ್ಗೆ ಅಭಿಮಾನಿಗಳಿಗೆ ಕ್ರೇಜ್ ಇದೆ. ಇವರ ಕಾಂಬಿನೇಷನ್​ನ ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಇವರು ಕೊನೆಯಬಾರಿಗೆ ಒಟ್ಟಿಗೆ ತೆರೆಹಂಚಿಕೊಂಡಿದ್ದು ‘ಬಾಹುಬಲಿ 2’ ಚಿತ್ರದಲ್ಲಿ. ಈಗ ಇಬ್ಬರೂ ಮತ್ತೆ ಒಂದಾಗುವ ಸೂಚನೆ ಸಿಕ್ಕಿದೆ. ಪ್ರಭಾಸ್ ನಟನೆಯ ಹೊಸ ಚಿತ್ರವೊಂದರಲ್ಲಿ ಅನುಷ್ಕಾ ಶೆಟ್ಟಿ ಕೂಡ ನಟಿಸಲಿದ್ದಾರೆ ಎಂದು ವರದಿ ಆಗಿದೆ. ಸದ್ಯ ಎಲ್ಲವೂ ಅಂತೆಕಂತೆ ರೂಪದಲ್ಲಿ ಇದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಅನುಷ್ಕಾ ಶೆಟ್ಟಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಬಾಹುಬಲಿ’ ಸರಣಿ ಚಿತ್ರ ಅವರಿಗೆ ದೊಡ್ಡ ಯಶಸ್ಸು ತಂದುಕೊಟ್ಟಿತು. ಆದರೆ, ಇದಾದ ಬಳಿಕ ಅವರು ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆದರು. ಹೆಚ್ಚು ಚಿತ್ರಗಳನ್ನು ಅವರು ಒಪ್ಪಿಕೊಳ್ಳುತ್ತಿಲ್ಲ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ರಿವೀಲ್ ಮಾಡಿಲ್ಲ. ಸದ್ಯ ಅನುಷ್ಕಾ ಶೆಟ್ಟಿ ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಚಿತ್ರದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಈಗ ಅನುಷ್ಕಾ-ಪ್ರಭಾಸ್ ತೆರೆಹಂಚಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ.

ಪ್ರಭಾಸ್ ಅವರು ತಮಿಳು ನಿರ್ದೇಶಕ ಲೋಕೇಶ್ ಕನಗರಾಜ್ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಸಿನಿಮಾ ಬಗ್ಗೆ ಸದ್ಯ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾಗಾಗಿ ಅಭಿಮಾನಿಗಳು ಕಾದಿದ್ದಾರೆ. ಮಾಸ್ ಸಿನಿಮಾಗಳನ್ನು ಮಾಡಿ ಗಮನ ಸೆಳೆದ ಲೋಕೇಶ್ ಅವರು ಪ್ರಭಾಸ್ ಜೊತೆ ಕೈ ಜೋಡಿಸಿರುವುದು ಸಹಜವಾಗಿಯೇ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಬಾಲಿವುಡ್​ ನಿರ್ದೇಶಕರ ಸಹವಾಸವೇ ಬೇಡ ಅಂತ ಮಹತ್ವದ ನಿರ್ಧಾರ ತೆಗೆದುಕೊಂಡ ಪ್ರಭಾಸ್​?

ಪ್ರಭಾಸ್-ಅನುಷ್ಕಾ ಬಗ್ಗೆ ಈ ಮೊದಲು ಸಾಕಷ್ಟು ಸುದ್ದಿ ಹರಿದಾಡಿತ್ತು. ಇಬ್ಬರೂ ನಿಜ ಜೀವನದ ಲವ್​​ಬರ್ಡ್ಸ್ ಎಂದು ಕೂಡ ಕರೆಯಲಾಯಿತು. ಆದರೆ, ಇದನ್ನು ಇಬ್ಬರೂ ಅಲ್ಲಗಳೆಯುತ್ತಲೇ ಬಂದರು. ನಂತರದ ದಿನಗಳಲ್ಲಿ ಇವರು ಒಟ್ಟಾಗಿ ಕಾಣಿಸಿಕೊಳ್ಳುವುದು ಕಡಿಮೆ ಆಯಿತು. ಇಬ್ಬರ ಸಂಬಂಧ ಮುರಿದು ಬಿದ್ದಿದೆ ಎಂದು ಎಲ್ಲರೂ ಊಹಿಸಿದ್ದಾರೆ. ಆದರೆ, ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ