AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶೆಟ್ಟಿ ಬರ್ತ್​​ಡೇಗೆ ಸಿಗುತ್ತಿದೆ ಎರಡು ಬಿಗ್ ಅಪ್​​ಡೇಟ್

ಅನುಷ್ಕಾ ಶೆಟ್ಟಿ ಅವರ ಜನ್ಮದಿನದಂದು ಅವರ ಮುಂಬರುವ ತೆಲುಗು ಚಿತ್ರ ‘ಘಾಟಿ’ ಮತ್ತು ಮಲಯಾಳಂ ಚಿತ್ರ ‘ಕಟನಾರ್’ ಚಿತ್ರದ ಬಗ್ಗೆ ಅಪ್‌ಡೇಟ್‌ಗಳು ಬಿಡುಗಡೆಯಾಗಲಿವೆ ಎಂದು ನಿರೀಕ್ಷಿಸಲಾಗಿದೆ. ‘ಬಾಹುಬಲಿ’ ಚಿತ್ರದ ನಂತರ ಅವರ ಜನಪ್ರಿಯತೆ ಹೆಚ್ಚಿದೆ.

ಅನುಷ್ಕಾ ಶೆಟ್ಟಿ ಬರ್ತ್​​ಡೇಗೆ ಸಿಗುತ್ತಿದೆ ಎರಡು ಬಿಗ್ ಅಪ್​​ಡೇಟ್
ಅನುಷ್ಕಾ
ರಾಜೇಶ್ ದುಗ್ಗುಮನೆ
|

Updated on: Nov 04, 2024 | 6:54 PM

Share

‘ಬಾಹುಬಲಿ’, ‘ಬಾಹುಬಲಿ 2’ ಬಳಿಕ ಅನುಷ್ಕಾ ಶೆಟ್ಟಿ ಅವರ ಜನಪ್ರಿಯತೆ ಹೆಚ್ಚಿದೆ. ಆ ಬಳಿಕ ಅವರು ‘ಭಾಗಮತಿ’ ಸಿನಿಮಾ ಮಾಡಿದರು. ಇದು ಕೂಡ ಯಶಸ್ಸು ಕಂಡಿತು. ಇದಾದ ಬಳಿಕ ಅವರು ಮಾಡಿದ್ದು ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಚಿತ್ರದಲ್ಲಿ ನಟಿಸಿದರು. ಇದಾದ ಬಳಿಕ ಅವರು ಹೆಚ್ಚು ಸಿನಿಮಾಗಳಲ್ಲಿ ನಟಿಸಿಲ್ಲ. ಈಗ ಅವರ ಜನ್ಮದಿನ ಸಮೀಪಿಸಿದೆ. ನವೆಂಬರ್ 7 ಅವರ ಬರ್ತ್​ಡೇ. ಈ ದಿನ ಎರಡು ವಿಶೇಷ ಗಿಫ್ಟ್ ಸಿಗುತ್ತಿದೆ.

ಅನುಷ್ಕಾ ಶೆಟ್ಟಿ ಅವರು ಒಂದು ತೆಲುಗು ಹಾಗೂ ಒಂದು ಮಲಯಾಳಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಯಾವುದೇ ಅಪ್​ಡೇಟ್ ಸಿಕ್ಕಿರಲಿಲ್ಲ. ಈಗ ಬರ್ತ್​ಡೇ ಪ್ರಯುಕ್ತ ಅವರ ಈ ಚಿತ್ರದ ಕುರಿತು ಮಾಹಿತಿ ಸಿಗಲಿದೆ ಎಂದು ತಂಡಗಳು ಹೇಳಿವೆ. ಇದನ್ನು ಕೇಳಿ ಫ್ಯಾನ್ಸ್ ಭರ್ಜರಿ ಖುಷಿಪಟ್ಟಿದ್ದಾರೆ.

‘ಘಾಟಿ’ ಸಿನಿಮಾನ ಕ್ರಿಶ್ ಜಗರ್ಲಮುಡಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ತೆಲುಗು ಸಿನಿಮಾ ಆಗಿದ್ದು, ಅನುಷಾ ಶೆಟ್ಟಿ ನಟಿಸುತ್ತಾ ಇದ್ದಾರೆ. ಎರಡನೇ ಸಿನಿಮಾ ‘ಕಟನಾರ್’ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಈ ಚಿತ್ರವನ್ನು ಜಯಸೂರ್ಯ ನಿರ್ದೇಶನ ಮಾಡುತ್ತಿದ್ದಾರೆ.

ನವೆಂಬರ್ 7ರಂದು ‘ಘಾಟಿ’ ಚಿತ್ರದ ಪೋಸ್ಟರ್​ನ ರಿಲೀಸ್ ಮಾಡಲು ತಂಡ ಪ್ಲ್ಯಾನ್ ಮಾಡಿದೆ. ಈ ಚಿತ್ರದ ರಿಲೀಸ್ ದಿನಾಂಕದ ಬಗ್ಗೆಯೂ ಮಾಹಿತಿ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಡ್ರಗ್ ಬಗ್ಗೆ ಸಿನಿಮಾ ಇದೆ. ಯುವಿ ಕ್ರಿಯೇಷನ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.  ಅದೇ ರೀತಿ ‘ಕಟನಾರ್’ ತಂಡದವರೂ ಇದೇ ರೀತಿಯ ಪ್ಲ್ಯಾನಿಂಗ್ ಮಾಡಿದ್ದಾರೆ.

ಇದನ್ನೂ ಓದಿ: ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಬೇರೆ ಆಗಲು ಕಾರಣವಾಗಿದ್ದ ಮೂರನೇ ವ್ಯಕ್ತಿ ಯಾರು?

ಅನುಷ್ಕಾ ಶೆಟ್ಟಿ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ. ಅವರು ಮೊದಲಿನಷ್ಟು ಆ್ಯಕ್ಟೀವ್ ಆಗಿ ಸಿನಿಮಾ ಮಾಡುತ್ತಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅನುಷ್ಕಾ ಶೆಟ್ಟಿ ಅವರು ಮಂಗಳೂರಿನವರು. ಆದಾಗ್ಯೂ ಅವರು ಕನ್ನಡ ಸಿನಿಮಾ ಮಾಡಿಲ್ಲ. ಅವರು ಕನ್ನಡ ಚಿತ್ರವನ್ನು ಒಪ್ಪಿಕೊಳ್ಳಬೇಕು ಎಂಬುದು ಫ್ಯಾನ್ಸ್ ಕೋರಿಕೆಗಳಲ್ಲಿ ಒಂದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ