AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾಗಳಲ್ಲಿ ನಟನೆ, ಪವನ್ ಕಲ್ಯಾಣ್ ವಿರುದ್ಧ ದೂರು

Pawan Kalyan: ಪವನ್ ಕಲ್ಯಾಣ್ ಈಗ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ. ಕೆಲವು ಮಹತ್ವದ ಖಾತೆಗಳ ಸಚಿವರೂ ಸಹ ಹೌದು. ಆಡಳಿತದ ನಡುವೆ ಪವನ್ ಕಲ್ಯಾಣ್ ಸಿನಿಮಾ ನಟನೆಯನ್ನೂ ಸಹ ಮುಂದುವರೆಸಿದ್ದಾರೆ. ಆದರೆ ಇದೀಗ ಮಾಜಿ ಐಎಎಸ್ ಅಧಿಕಾರಿಯೊಬ್ಬರು ಪವನ್ ಕಲ್ಯಾಣ್ ಅವರು ಸಿನಿಮಾ ನಟನೆ ಮುಂದುವರೆಸಿರುವ ಬಗ್ಗೆ ಹೈಕೋರ್ಟ್​​ನಲ್ಲಿ ದೂರು ದಾಖಲಿಸಿದ್ದಾರೆ.

ಸಿನಿಮಾಗಳಲ್ಲಿ ನಟನೆ, ಪವನ್ ಕಲ್ಯಾಣ್ ವಿರುದ್ಧ ದೂರು
Pawan Kalyan
ಮಂಜುನಾಥ ಸಿ.
|

Updated on: Aug 21, 2025 | 12:40 PM

Share

ನಟ ಪವನ್ ಕಲ್ಯಾಣ್ (Pawan Kalyan) ಈಗ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ, ಜೊತೆಗೆ ಪಂಚಾಯತ್ ರಾಜ್, ಗ್ರಾಮೀಣಾಭಿವೃದ್ಧಿ ಮತ್ತು ನೀರು ಸರಬರಾಜು, ಪರಿಸರ, ಅರಣ್ಯ ಮತ್ತು ವಿಜ್ಞಾನ-ತಂತ್ರಜ್ಞಾನ ಇಲಾಖೆಗಳ ಮಂತ್ರಿ ಸಹ ಆಗಿದ್ದಾರೆ. ರಾಜಕೀಯದಲ್ಲಿ ಸಕ್ರಿಯವಾಗಿರುವಾಗಲೇ ಪವನ್ ಕಲ್ಯಾಣ್ ಸಿನಿಮಾಗಳಲ್ಲಿ ನಟಿಸುವುದನ್ನು ಸಹ ಮುಂದುವರೆಸಿದ್ದಾರೆ. ಆದರೆ ಇದೀಗ ಮಾಜಿ ಐಎಎಸ್ ಅಧಿಕಾರಿಯೊಬ್ಬರು ಪವನ್ ಕಲ್ಯಾಣ್ ವಿರುದ್ಧ ಹೈಕೋರ್ಟ್​​ನಲ್ಲಿ ದೂರು ನೀಡಿದ್ದಾರೆ.

ಪವನ್ ಕಲ್ಯಾಣ್, ಸರ್ಕಾರದ ಭಾಗವಾಗಿ ಕೆಲವು ಮಹತ್ವದ ಸಚಿವಾಲಯಗಳ ಜವಾಬ್ದಾರಿ ಹೊತ್ತಿರುವಾಗಲೂ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನಿಮಾಗಳಿಂದ ಆದಾಯವನ್ನು ಪಡೆಯುತ್ತಿದ್ದಾರೆ ಎಂದು ಮಾಜಿ ಐಎಎಸ್ ಅಧಿಕಾರಿ ಮತ್ತು ಲಿಬರೇಷನ್ ಕಾಂಗ್ರೆಸ್ ಪಾರ್ಟಿಯ ಸಂಸ್ಥಾಪಕ ಜಿ ವಿಜಯ್ ಕುಮಾರ್ ಅವರು ಪವನ್ ಕಲ್ಯಾಣ್ ವಿರುದ್ಧ ಆಂಧ್ರ ಪ್ರದೇಶ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಸಚಿವಾಲಯಗಳನ್ನು ನಿಭಾಯಿಸುತ್ತಿದ್ದರೂ ಸಹ ಸಿನಿಮಾಗಳಲ್ಲಿ ನಟಿಸುತ್ತಿರುವ, ಸಿನಿಮಾ ವ್ಯವಹಾರಗಳೊಂದಿಗೆ ಸಂಬಂಧ ಇರಿಸಿಕೊಂಡಿರುವ ಬಗ್ಗೆ ತನಿಖೆ ನಡೆಸಲು ಆದೇಶಿಸಬೇಕೆಂದು ಮಾಜಿ ಐಎಎಸ್ ಅಧಿಕಾರಿ ಕೋರಿದ್ದಾರೆ. ಅಲ್ಲದೆ, ತಮ್ಮ ನಟನೆಯ ಸಿನಿಮಾ ಹಾಗೂ ಇನ್ನಿತರೆ ಸಿನಿಮಾಗಳ ಟಿಕೆಟ್​ ದರ ಹೆಚ್ಚಳ ವಿಷಯದಲ್ಲಿ ತಮ್ಮ ಅಧಿಕಾರದ ದುರುಪಯೋಗವನ್ನು ಪವನ್ ಕಲ್ಯಾಣ್ ಮಾಡಿಕೊಂಡಿರುವ ಗುಮಾನಿ ಇದ್ದು, ಈ ಬಗ್ಗೆ ಸಿಬಿಐ ಹಾಗೂ ಇಡಿ ತನಿಖೆಗಳು ನಡೆಯಬೇಕೆಂದು ಅವರು ಮನವಿ ಮಾಡಿದ್ದಾರೆ. ಅಲ್ಲದೆ ಪವನ್ ವಿರುದ್ಧ ಹಿತಾಸಕ್ತಿ ಸಂಘರ್ಷ (ಕಾನ್​ಫ್ಲಿಕ್ಟ್ ಆಫ್ ಇಂಟರೆಸ್ಟ್) ಅಡಿಯಲ್ಲಿ ತನಿಖೆ ನಡೆಸಿ, ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಸಹ ಕೋರಿದ್ದಾರೆ.

ಇದನ್ನೂ ಓದಿ:‘ಕೂಲಿ’ ಸಿನಿಮಾ ಬಿಡುಗಡೆ: ಪವನ್ ಕಲ್ಯಾಣ್ ಮಧ್ಯ ಪ್ರವೇಶಿಸಬೇಕೆಂದ ಸಿನಿಪ್ರಿಯರು

ಸಚಿವರಾಗಿದ್ದಾಗಲೂ ಸಹ ಸಿನಿಮಾಗಳಲ್ಲಿ ನಟಿಸುತ್ತಿರುವುದು ಅಸಾಂವಿಧಾನಿಕ, ಅನೈತಿಕ ಹಾಗೂ ನಿಯಮಕ್ಎ ಬಾಹಿರ ಎಂದು ಆರೋಪ ಮಾಡಲಾಗಿದ್ದು, ಕೇಂದ್ರ ಸರ್ಕಾರ ವಿಧಿಸಿರುವ ಸಾರ್ವಜನಿಕ ಹೊಣೆಗಾರಿಕೆ ನಿಯಮಗಳಿಗೆ ವಿರುದ್ಧವಾಗಿ ಪವನ್ ಕಲ್ಯಾಣ್ ನಡೆದುಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಪವನ್ ಕಲ್ಯಾಣ್, ಆಂಧ್ರ ವಿಧಾನಸಭೆ ಚುನಾವಣೆಗೆ ಧುಮುಕುವ ಮೊದಲು ಮೂರು ಸಿನಿಮಾಗಳಲ್ಲಿ ನಟಿಸಲು ಒಪ್ಪಂದ ಮಾಡಿಕೊಂಡಿದ್ದರು. ಆದರೆ ಚುನಾವಣೆ ಬಂದು, ಪವನ್ ಕಲ್ಯಾಣ್ ಚುನಾವಣೆ ಪ್ರಚಾರದಲ್ಲಿ ತೊಡಗಿದ ಕಾರಣ ಆ ಸಿನಿಮಾಗಳ ಚಿತ್ರೀಕರಣ ಪೂರ್ಣವಾಗಿರಲಿಲ್ಲ. ಹಾಗಾಗಿ ಪವನ್ ಕಲ್ಯಾಣ್ ಡಿಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಕೆಲ ತಿಂಗಳ ತರುವಾಯ ಈಗ ಮತ್ತೆ ಆ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ‘ಹರಿ ಹರ ವೀರ ಮಲ್ಲು’ ಸಿನಿಮಾದ ಚಿತ್ರೀಕರಣ ಮುಗಿಸಿದ್ದು, ಸಿನಿಮಾ ಬಿಡುಗಡೆ ಆಗಿದೆ. ಇದೀಗ ‘ಉಸ್ತಾದ್ ಭಗತ್ ಸಿಂಗ್’ ಮತ್ತು ‘ಓಜಿ’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗಳ ಚಿತ್ರೀಕರಣ ಶೀಘ್ರವೇ ಮುಕ್ತಾಯವಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ