ಶಿವರಾಜ್ ಕುಮಾರ್-ರಾಮ್ ಚರಣ್ ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ

|

Updated on: Jan 07, 2024 | 8:04 PM

AR Rahaman: ರಾಮ್ ಚರಣ್ ನಟಿಸಲಿರುವ ಮುಂದಿನ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಅದೇ ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಲಿದ್ದಾರೆ.

ಶಿವರಾಜ್ ಕುಮಾರ್-ರಾಮ್ ಚರಣ್ ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ
ರಾಮ್ ಚರಣ್
Follow us on

ರಾಮ್ ಚರಣ್ (Ram Charan) ಪ್ರಸ್ತುತ ‘ಗೇಮ್ ಚೇಂಜರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೀಗ ಅವರ ಮುಂದಿನ ಸಿನಿಮಾ ಈಗಾಗಲೇ ಸಖತ್ ಸುದ್ದಿಯಲ್ಲಿದೆ. ರಾಮ್ ಚರಣ್​ರ ಮುಂದಿನ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ (Shiva Rajkumar) ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾವನ್ನು ‘ಉಪ್ಪೆನ’ ಸಿನಿಮಾ ನಿರ್ದೇಶಿಸಿದ್ದ ಬುಚ್ಚಿಬಾಬು ಸನಾ ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾಕ್ಕೆ ಇದೀಗ ಮತ್ತೊಬ್ಬ ಲಿಜೆಂಡರಿ ತಂತ್ರಜ್ಞ ಸೇರಿಕೊಂಡಿದ್ದಾರೆ.

ಶಿವರಾಜ್ ಕುಮಾರ್-ರಾಮ್ ಚರಣ್ ನಟಿಸಲಿರುವ ಸಿನಿಮಾವನ್ನು ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಸಂಗೀತ ನೀಡಲಿದ್ದಾರೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದಲ್ಲಿಯೂ ಈ ಸಂಗೀತ ಮಾಂತ್ರಿಕನ ಸಂಗೀತಕ್ಕೆ ತಲೆ ತೂಗದವರಿಲ್ಲ. ಎರಡೆರಡು ಆಸ್ಕರ್ ಪ್ರಶಸ್ತಿ ಗೆದ್ದ ಖ್ಯಾತಿ ಇವರದ್ದು. ಏಷ್ಯಾದಲ್ಲೇ ಆಸ್ಕರ್ ಗೆದ್ದ ಮೊದಲಿಗೆ ಎನ್ನುವ ಖ್ಯಾತಿಯೂ ಇವರದ್ದೆ. ಆರು ರಾಷ್ಟ್ರ ಪ್ರಶಸ್ತಿ, ಎರಡು ಅಕಾಡೆಮಿ ಮತ್ತು ಎರಡು ಗ್ರ್ಯಾಮಿ ಪ್ರಶಸ್ತಿ, 15 ಫಿಲ್ಮಪೇರ್ ಪ್ರಶಸ್ತಿ, ಭಾರತ ಸರ್ಕಾರದಿಂದ ಪದ್ಮಭೂಷಣ ಪ್ರಶಸ್ತಿಯನ್ನೂ ಪಡೆದಿದ್ದಾರೆ.

ಇತ್ತೀಚೆಗಷ್ಟೆ ರೆಹಮಾನ್ ಜನ್ಮದಿನ ಆಚರಿಸಿಕೊಂಡಿದ್ದಾರೆ. ಇವರ ಜನ್ಮದಿನಕ್ಕೆ ಮಹಾಪೂರವೇ ಹರಿದು ಬಂದಿದೆ. ಜೊತೆಗೆ ಹೊಸ ಪ್ರಾಜೆಕ್ಟ್​ಗಳ ಘೋಷಣೆಯೂ ಆಗಿದೆ. ಅದರಂತೆ ಸಂಗೀತ ಮಾಂತ್ರಿಕ ರಾಮ್ ಚರಣ್ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುವುದು ಅಧಿಕೃತವಾಗಿ ಕನ್ಫರ್ಮ್ ಆಗಿದೆ. ರೆಹಮಾನ್ ಜನ್ಮದಿನಕ್ಕೆ ಶುಭಾಶಯ ಕೋರಿ ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ ಅವರನ್ನು ತಮ್ಮ ತಂಡಕ್ಕೆ ಸ್ವಾಗತ ಮಾಡಿಕೊಂಡಿಕೊಂಡಿದೆ.

ಇದನ್ನೂ ಓದಿ:‘ಆರ್​ಆರ್​ಆರ್​’ ಸ್ಟಾರ್ ಜೊತೆ ಶಿವರಾಜ್ ಕುಮಾರ್ ನಟನೆ, ನಿರ್ದೇಶಕ ಯಾರು?

ತ್ರಿಬಲ್ ಆರ್ ಸಿನಿಮಾ ಮೂಲಕ ಗ್ಲೋಬಲ್ ಸ್ಟಾರ್ ಪಟ್ಟಕ್ಕೇರಿರುವ ರಾಮ್ ಚರಣ್ ಗೇಮ್ ಚೇಂಜರ್ ಎಂಬ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಬಳಿಕ ಉಪ್ಪೇನಾ ಡೈರೆಕ್ಟರ್ ಬುಚ್ಚಿ ಬಾಬು ಸಾನಾ ಕೈ ಜೋಡಿಸಿದ್ದಾರೆ. ಮೊದಲ ಸಿನಿಮಾದಲ್ಲಿಯೇ ರಾಷ್ಟ್ರಪ್ರಶಸ್ತಿ ಪಡೆದಿರುವ ಬುಚ್ಚಿ ಹಾಗೂ ಚೆರ್ರಿ ಪ್ರಾಜೆಕ್ಟ್ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಕ್ರೇಜಿ ಕಾಂಬೋದ ಪ್ರಾಜೆಕ್ಟ್ ಗೆ ರೆಹಮಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಇದೇ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಸಹ ನಟಿಸಲಿದ್ದಾರೆ ಎಂಬುದು ಬಹುತೇಕ ಖಾತ್ರಿ ಆಗಿದೆ.

ಬುಚ್ಚಿ ಬಾಬು ಕಥೆ ಬರೆದು ಆಕ್ಷನ್ ಕಟ್ ಹೇಳಲಿರುವ ಈ ಸಿನಿಮಾವನ್ನು ವೃದ್ಧಿ ಸಿನಿಮಾಸ್ ಹಾಗೂ ಸುಕುಮಾರ್ ರೈಟಿಂಗ್ಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣ ಮಾಡುತ್ತಿದ್ದಾರೆ. ತ್ರಿಬಲ್ ಆರ್ ಸಿನಿಮಾ ನಿರ್ಮಿಸಿದ್ದ ಖ್ಯಾತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಈ ಚಿತ್ರವನ್ನು ಪ್ರಸ್ತುತಪಡಿಸಲಿದೆ. ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಪ್ಯಾನ್ ಇಂಡಿಯಾ ಚಿತ್ರ ಇದಾಗಿದ್ದು, ಸದ್ಯ ಸಂಗೀತ ನಿರ್ದೇಶಕರನ್ನು ಪರಿಚಯಿಸಿರುವ ಚಿತ್ರತಂಡ ಮುಂದಿನ ದಿನಗಳಲ್ಲಿ ಉಳಿದ ತಾರಾ ಬಳಗ ಹಾಗೂ ತಾಂತ್ರಿಕ ವರ್ಗವನ್ನು ಪರಿಚಯಸಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ