‘ರೆಹಮಾನ್ ವಜ್ರದಂತೆ, ಅವರ ಬಗ್ಗೆ ಕೆಟ್ಟದ್ದನ್ನು ಮಾತನಾಡಬೇಡಿ’; ಸೈರಾ ಬಾನು ಮನವಿ

ಸದ್ಯ ಸಾಯಿರಾ ಮುಂಬೈನಲ್ಲಿದ್ದು, ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯ ಸರಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಚಿಕಿತ್ಸೆಗಾಗಿ ಮುಂಬೈನಲ್ಲಿಯೇ ಉಳಿದುಕೊಂಡಿದ್ದಾರೆ.

‘ರೆಹಮಾನ್ ವಜ್ರದಂತೆ, ಅವರ ಬಗ್ಗೆ ಕೆಟ್ಟದ್ದನ್ನು ಮಾತನಾಡಬೇಡಿ’; ಸೈರಾ ಬಾನು ಮನವಿ
ಸೈರಾ-ರೆಹಮಾನ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Nov 25, 2024 | 12:32 PM

ಆಸ್ಕರ್ ಪ್ರಶಸ್ತಿ ವಿಜೇತ ಸಂಯೋಜಕ ಮತ್ತು ಗಾಯಕ ಎ. ಆರ್. ರೆಹಮಾನ್ ಪತ್ನಿ ಸಾಯಿರಾ ಬಾನು ಅವರಿಗೆ ವಿಚ್ಛೇದನ ನೀಡಿದ್ದಾರೆ. ಈ ಮೂಲಕ  29 ವರ್ಷಗಳ ದಾಂಪತ್ಯಕ್ಕೆ ಕೊನೆ ಹಾಡಿದ್ದಾರೆ. ವಿಚ್ಛೇದನವನ್ನು ಘೋಷಿಸುವಾಗ, ರೆಹಮಾನ್ ಮತ್ತು ಸೈರಾ ತಮ್ಮ ಖಾಸಗಿ ಜೀವನವನ್ನು ಗೌರವಿಸುವಂತೆ ಅಭಿಮಾನಿಗಳಿಗೆ ವಿನಂತಿಸಿದ್ದರು. ಎಂಬಂತೆ ಕೆಲವು ರೆಹಮಾನ್‌ರನ್ನು ತೀವ್ರವಾಗಿ ಟೀಕಿಸುತ್ತಿದ್ದಾರೆ. ಕಾಕತಾಳೀಯವೆಂಬಂತೆ, ಅದೇ ದಿನ ರೆಹಮಾನ್‌ ಅವರ ಬ್ಯಾಂಡ್‌ನಲ್ಲಿ ಬಾಸ್ ಪ್ಲೇಯರ್ ಮೋಹಿನಿ ಡೇ ಅವರು ತಮ್ಮ ಪತಿಯಿಂದ ವಿಚ್ಛೇದನವನ್ನು ಘೋಷಿಸಿದರು. ಹಾಗಾಗಿ, ರೆಹಮಾನ್ ವಿಚ್ಛೇದನಕ್ಕೆ ಮೋಹಿನಿ ಕಾರಣ ಎಂದು ಕೆಲವರು ಹೇಳಿದ್ದರು. ಹೀಗಾಗಿ ಇದೇ ಮೊದಲ ಬಾರಿಗೆ ರೆಹಮಾನ್ ಅವರ ಖಾಸಗಿ ಜೀವನ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ವಿಷಯವಾಗಿದೆ. ಈಗ ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಸೈರಾ ತಮ್ಮ ಪಿಆರ್‌ ಮೂಲಕ ವಾಯ್ಸ್ ನೋಟ್ ಬಿಡುಗಡೆ ಮಾಡಿದ್ದಾರೆ.

ಸದ್ಯ ಸಾಯಿರಾ ಮುಂಬೈನಲ್ಲಿದ್ದು, ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯ ಸರಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಚಿಕಿತ್ಸೆಗಾಗಿ ಮುಂಬೈನಲ್ಲಿಯೇ ಉಳಿದುಕೊಂಡಿದ್ದಾರೆ. ‘ಎಆರ್ ರೆಹಮಾನ್ ಓರ್ವ ವ್ಯಕ್ತಿಯಾಗಿ ವಜ್ರ ಇದ್ದಂತೆ. ಅವರು ಈ ಜಗತ್ತಿನಲ್ಲಿ ಅತ್ಯುತ್ತಮ ವ್ಯಕ್ತಿ. ನನ್ನ ಆರೋಗ್ಯ ಸಮಸ್ಯೆಯಿಂದಾಗಿ ನಾನು ಚೆನ್ನೈ ಬಿಟ್ಟು ಹೋಗಬೇಕಾಯಿತು. ಅವರ ವಿರುದ್ಧ ಕೆಟ್ಟದ್ದನ್ನು ಹೇಳಬೇಡಿ ಎಂದು ನಾನು ಯೂಟ್ಯೂಬ್‌ಗಳು ಮತ್ತು ತಮಿಳು ಮಾಧ್ಯಮಗಳಲ್ಲಿ ವಿನಂತಿಸುತ್ತೇನೆ. ನನ್ನ ಜೀವನದಲ್ಲಿ ನಾನು ಅವನನ್ನು ಹೆಚ್ಚು ನಂಬಿದ್ದೇನೆ. ನಾನು ಅವರನ್ನು ತುಂಬಾ ಪ್ರೀತಿಸುತ್ತೇನೆ ಮತ್ತು ಅವರು ನನ್ನನ್ನು ತುಂಬಾ ಪ್ರೀತಿಸುತ್ತಾರೆ. ಹಾಗಾಗಿ ಅವರ ಮೇಲೆ ಸುಳ್ಳು ಆರೋಪ ಮಾಡಬೇಡಿ’’ ಎಂದು ಸೈರಾ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ಮತ್ತೊಂದು ಹುಡುಗಿಯ ಜೊತೆ ರೆಹಮಾನ್ ಹೆಸರು ಲಿಂಕ್; ಇಲ್ಲಿದೆ ಅಸಲಿ ವಿಚಾರ

ಚಿಕಿತ್ಸೆ ಮುಗಿಸಿ ಚೆನ್ನೈಗೆ ಮರಳುವವರೆಗೂ ಕಾಯುವಂತೆ ಅವರು ಕೋರಿದ್ದಾರೆ. ‘ನಾವು ಇನ್ನೂ ಅಧಿಕೃತವಾಗಿ ಏನನ್ನೂ ಘೋಷಿಸಿಲ್ಲ. ಅವರ ಹೆಸರನ್ನು ಹಾಳು ಮಾಡಬೇಡಿ. ಇದೆಲ್ಲ ತುಂಬಾ ಮೂರ್ಖತನ. ರೆಹಮಾನ್ ವಜ್ರದಂತಿದ್ದಾರೆ’ ಎಂದು ಅವರು ಹೇಳಿದ್ದಾರೆ. ರೆಹಮಾನ್ ಮತ್ತು ಸೈರಾ ತಮ್ಮ ವಕೀಲ ವಂದನಾ ಶಾ ಮೂಲಕ ವಿಚ್ಛೇದನವನ್ನು ಘೋಷಿಸಿದರು. ಇಬ್ಬರೂ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಬರೆದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:26 pm, Mon, 25 November 24

ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್