AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎ.ಆರ್. ರೆಹಮಾನ್ ಪುತ್ರ ಅಮೀನ್ ಚಲಿಸುತ್ತಿದ್ದ ಕಾರು ಅಪಘಾತ; ಹೇಗಿದೆ ಆರೋಗ್ಯ ಸ್ಥಿತಿ?

ಸಂಗೀತ ನಿರ್ದೇಶಕ, ಗಾಯಕ ಎ.ಆರ್. ರೆಹಮಾನ್ ಪುತ್ರ ಅಮೀನ್ ಅವರು ಚಲಿಸುತ್ತಿದ್ದ ಐಷಾರಾಮಿ ಕಾರು ಅಪಘಾತಕ್ಕೆ ಒಳಗಾಗಿದೆ. ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ. ಎರಡೂ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಎ.ಆರ್. ರೆಹಮಾನ್ ಪುತ್ರ ಅಮೀನ್ ಚಲಿಸುತ್ತಿದ್ದ ಕಾರು ಅಪಘಾತ; ಹೇಗಿದೆ ಆರೋಗ್ಯ ಸ್ಥಿತಿ?
AR Rahman, AR Ameen
ಮದನ್​ ಕುಮಾರ್​
|

Updated on: Aug 10, 2026 | 7:39 PM

Share

ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ (AR Rahman) ಅವರ ಪುತ್ರ ಎ.ಆರ್. ಅಮೀನ್ ಅವರು ಚೆನ್ನೈನಲ್ಲಿ ಭಾನುವಾರ (ಆಗಸ್ಟ್ 9) ಸಾಯಂಕಾಲ ನಡೆದ ಕಾರು ಅಪಘಾತದಲ್ಲಿ (Car Accident) ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಿಂಡಿಯ ಕತ್ತಿಪಾರಾ ಫ್ಲೈಓವರ್ ಬಳಿ ಎ.ಆರ್. ಅಮೀನ್ (AR Ameen) ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ ಅಡ್ಯಾರ್ ಸಂಚಾರ ತನಿಖಾ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಎರಡೂ ವಾಹನಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

‘ಟೈಮ್ಸ್ ಆಫ್ ಇಂಡಿಯಾ’ ವರದಿಯ ಪ್ರಕಾರ, ಅಮೀನ್ ಅವರು ತಮ್ಮ ಸ್ನೇಹಿತನೊಂದಿಗೆ ಕೋಯಂಬೇಡಿನಿಂದ ನಗರದತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ ಪಕ್ಕದ ರಸ್ತೆಯಿಂದ ಬಂದ ವ್ಯಾಗನ್-ಆರ್ ಕಾರು, ಅಮೀನ್ ಪ್ರಯಾಣಿಸುತ್ತಿದ್ದ ಪೋರ್ಷೆ ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಅಮೀನ್ ಹಾಗೂ ಅವರ ಸ್ನೇಹಿತ ದೊಡ್ಡ ಅನಾಹುತದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತದ ತಕ್ಷಣವೇ ಅಮೀನ್ ಹಾಗೂ ಅವರ ಸ್ನೇಹಿತನನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಅವರು ಚೇತರಿಸಿಕೊಂಡು ಮನೆಗೆ ಮರಳಿದ್ದಾರೆ. ಇನ್ನು ವ್ಯಾಗನ್-ಆರ್ ಕಾರಿನಲ್ಲಿದ್ದ ಗಾಯಾಳುವನ್ನು ಕಲೈಂಜರ್ ಶತಮಾನೋತ್ಸವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಲಾಗಿದೆ.

ಇದನ್ನೂ ಓದಿ: ಭಾರತದ ಇನ್ಯಾವ ಸಂಗೀತ ನಿರ್ದೇಶಕನಿಗೂ ಸಿಗದಷ್ಟು ಸಂಭಾವನೆ ಪಡೆದ ಎಆರ್ ರೆಹಮಾನ್

ಪ್ರಸಿದ್ಧ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರ ಮಗನಾಗಿದ್ದರೂ, ಅಮೀನ್ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತು ಮೂಡಿಸುತ್ತಿದ್ದಾರೆ. 2015ರಲ್ಲಿ ಮಣಿರತ್ನಂ ನಿರ್ದೇಶನದ ‘ಓ ಕಾದಲ್ ಕಣ್ಮಣಿ’ ಚಿತ್ರದ ‘ಮೌಲಾ ಸಲ್ಲಿ ವಸಲ್ಲಿಮ್’ ಹಾಡಿನ ಮೂಲಕ ಹಿನ್ನೆಲೆ ಗಾಯಕನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಆ ಹಾಡು ಅವರಿಗೆ ಖ್ಯಾತಿ ತಂದುಕೊಟ್ಟಿತು.

ನಂತರ ಹಲವು ಭಾಷೆಗಳಲ್ಲಿ ಹಾಡಿರುವ ಅಮೀನ್ ಅವರು ತಮ್ಮ ತಂದೆಯವರ ಅಂತರರಾಷ್ಟ್ರೀಯ ಸಂಗೀತ ಕಾರ್ಯಕ್ರಮಗಳಲ್ಲೂ ಪ್ರದರ್ಶನ ನೀಡಿದ್ದಾರೆ. ಇತ್ತೀಚೆಗೆ ರಾಮ್ ಚರಣ್ ನಟನೆಯ ‘ಪೆದ್ದಿ’ ಚಿತ್ರದ ತಮಿಳು ಆವೃತ್ತಿಯ ‘ಚಿಕಿರಿ ಚಿಕಿರಿ’ ಹಾಡಿಗೆ ಧ್ವನಿಯಾಗಿದ್ದರು. ಅಲ್ಲದೆ, ಜಸ್ಲೀನ್ ರಾಯಲ್ ಅವರೊಂದಿಗೆ ಸೇರಿ ‘ಭೀಗಿ ಭೀಗಿ’ ಆಲ್ಬಂ ಹಾಡನ್ನು ಹಾಡಿದ್ದು, ಅದರ ಮ್ಯೂಸಿಕ್ ವೀಡಿಯೋದಲ್ಲಿ ದುಲ್ಕರ್ ಸಲ್ಮಾನ್ ಮತ್ತು ಮೃಣಾಲ್ ಠಾಕೂರ್ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ